ಜಿಲ್ಲೆಗಳು

ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ಜಿಲ್ಲಾಧಿಕಾರಿಗಳಿಗೆ ಪತ್ರ

ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ಜಿಲ್ಲಾಧಿಕಾರಿಗೆ ಪತ್ರ

ಮೈಸೂರು : ನಗರದ ನರಸಿಂಹರಾಜ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿ ಪರಿಷ್ಕರಣೆಯ ಕುರಿತು ಮೈಸೂರು ಮಹಾನಗರ ಪಾಲಿಕೆಯ ಮಾಜಿ ಮಹಾಪೌರರಾದ ಎಸ್‌.ಸತೀಷ್‌ ( ಸಂದೇಶ್‌ ಸ್ವಾಮಿ) ಅವರು ಜಿಲ್ಲಾಧಿಕಾರಿಗಳಿಗೆ ಪತ್ರವನ್ನು ಬರೆದಿದ್ದಾರೆ.

ಪತ್ರದಲ್ಲಿ ಅವರು,
ಮೈಸೂರು ನಗರದ ನರಸಿಂಹರಾಜ ವಿಧಾನಸಭಾ ಕ್ಷೇತ್ರದಲ್ಲಿ ಅಲ್ಪಸಂಖ್ಯಾತರು ಹಾಗೂ ಬಡತನ ರೇಖೆಗಿಂತ ಕೆಳಗಿರುವ ಜನರೇ ಹೆಚ್ಚಾಗಿ ವಾಸವಾಗಿದ್ದಾರೆ. ಸುಶಿಕ್ಷಿತ ಮತದಾರರ ಸಂಖ್ಯೆ ಕಡಿಮೆ ಇದ್ದು, ದೋಷದಿದ ಕೂಡಿದ ಮತದಾರರ ಪಟ್ಡಿಯಿಂದ ಚುನಾವಣಾ ಸಂದರ್ಭದಲ್ಲಿ ಸಾಕಷ್ಡು ಅಕ್ರಮಗಳು ಈ ಕ್ಷೇತ್ರದಲ್ಲಿ ನಡೆಯುತ್ತಿದ್ದು, ಇದು ಕ್ಷೇತ್ರದ ಅಬಿವೃದ್ದಿಗೆ ಮಾರಕವಾಗಿದೆ. ಮೂರ್ನಾಲ್ಕು ದಶಕಗಳಿಂದ ಒಂದೇ ಕುಟುಂಬದ ಅಭ್ಯರ್ಥಿ ಇಲ್ಲಿ ಚುನಾಯಿತರಾಗುತ್ತಿದ್ದಾರೆ. ಕ್ಷೇತ್ರದಲ್ಲಿ ವಾಸವಿಲ್ಲದ ಹೊರಗಿನವರನ್ನು ಮತದಾರರ ಪಟ್ಟಿಗೆ ಸೇರ್ಪಡೆ ಮಾಡುವುದು ಹಾಗೂ ಸ್ಥಳೀಯರನ್ನು ಪಟ್ಟಿಯಿಂದ ತೆಗೆದು ಹಾಕಿ ಅವರನ್ನು ಮತದಾನದಿಂದ ಹೊರಗಿಡುವ ಕೆಲಸವನ್ನು ಮಾಡಲಾಗುತ್ತಿದೆ. ನರಸಿಂಹಕ್ಷೇತ್ರದಲ್ಲಿ ಸಂಕ್ಷಿಪ್ತ ಮತದಾರರ ಪಟ್ಟಿ ಪರಿಷ್ಕರಣೆ ವಿಶೇಷ ಸಮೀಕ್ಷಾ ಕಾರ್ಯಕ್ರಮ ನಡೆಸಿ ಸಂಪೂರ್ಣ ದೋಷ ಮುಕ್ತ ಮತದಾರರ ಪಟ್ಟಿಸಿದ್ದಪಡಿಸಬೇಕು. ಮತದಾರರ ಪಟ್ಟಿ ಪರಿಷ್ಕರಣೆ ಸಂದರ್ಭದಲ್ಲಿ ಹೆಸರುಗಳನ್ನು ಕೈಬಿಡುವ ಹಾಗೂ ಸೇರ್ಪಡೆ ಮಾಡಿಕೊಳ್ಳುವ ಮುನ್ನ ಮತ್ತೊಮ್ಮೆ  ಆ ಮನೆಗಳಿಗೆ ಖುದ್ದು ಭೇಟಿ ನೀಡಿ ಪರಿಶೀಲನೆ ನಡೆಸಿ ದೃಢಪಡಿಸಿಕೊಳ್ಳಬೇಕು ಚುನಾವಣೆ ಸಂದರ್ಭದಲ್ಲಿ ಮತದಾರರ ಪಟ್ಟಿಯಲ್ಲಿ ಮತದಾರರಿಗೆ ಗೊಂದಲ ಅಥವಾ ಯಾವುದೇ ರೀತಿಯ ವ್ಯತ್ಯಯ ಒಂಟಾದಲ್ಲಿ ಆಯಾ ಬಿ ಎಲ್‌ ಓ ಗಳನ್ನೇ ನೇರ ಹೊಣೆಗಾರರನ್ನಾಗಿ ಮಾಡಬೇಕು. ಚುನಾವಣಾ ಪ್ರಕ್ರಿಯೆಯಲ್ಲಿ ಮತದಾರರ ಪಾತ್ರ ಅತ್ಯಂತ ಪ್ರಾಮುಖ್ಯತೆಯನ್ನು ಹೊಂದಿದ್ದು, ಅರ್ಹ ಎಲ್ಲಾ ಮತದಾರರನ್ನು ಪಟ್ಟಿಯಲ್ಲಿ ಸೇರ್ಪಡೆ  ಮಾಡಬೇಕು ಹಾಗೂ ಅನರ್ಹ ಮತದಾರರನ್ನು ಪಟ್ಟಿಯಿಂದ ತೆಗೆಯಬೇಕು. ಸಂಪೂರ್ಣ ದೋಷ ಮುಕ್ತ ಮತದಾರರ ಪಟ್ಟಿ ತಯಾರಿಸುವ ಮೂಲಕ ಮತದಾರರು ಮುಕ್ತ ನ್ಯಾಯಸಮ್ಮತ ಮತ್ತು  ಶಾಂತಿಯುತ ಚುನಅವಣೆಯಲ್ಲಿ ಭಾಗವಹಿಸಿ ನಿರ್ಭಯವಾಗಿ ಧರ್ಮಪರಿಗಣನೆ, ಜಾತಿ, ಜನಾಂಗ, ಸಮುದಾಯ, ಭಾಷೆ ಅಥವಾ ಯಾವುದೇ ಪ್ರಚೋದನೆಗೆ ಒಳಗಾಗದೆ ಮತ ಚಲಾಯಿಸುವಂತಹ ಮುಕ್ತ ವಾತಾವರಣ ಕಲ್ಪಿಸಬೇಕೆಂದು ಜಿಲ್ಲಾಧಿಕಾರಿಗಳಲ್ಲಿ ವಿನಂತಿಸಿದ್ದಾರೆ.

andolanait

Recent Posts

ಭಾರೀ ಮಳೆಗೆ ಕೊಚ್ಚಿ ಹೋದ ಚೆಕ್ ಡ್ಯಾಂ: 15 ಅಡಿಗೂ ಹೆಚ್ಚು ಪ್ರವಾಹ

ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ…

9 hours ago

ಭಾರೀ ಮಳೆಗೆ ಮನೆ ಕುಸಿತ: ಲಕ್ಷಾಂತರ ರೂ. ನಷ್ಟ

ಹನೂರು: ತಾಲ್ಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಶಂಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಸಂಪೂರ್ಣ…

10 hours ago

ಧರ್ಮಸ್ಥಳ ಸೌಜನ್ಯ ಪ್ರಕರಣ: ಮರು ತನಿಖೆಗೆ ಸುಪ್ರೀಂಕೋರ್ಟ್ ಮಹತ್ವದ ಆದೇಶ

ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…

11 hours ago

ಕಾಡಾನೆ ದಾಳಿ: ವ್ಯಕ್ತಿ ಸಾವು

ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…

13 hours ago

ಗಣೇಶ ವಿಸರ್ಜನೆ ಮೆರವಣಿಗೆ ರಾಜಕೀಯ ದಾಳವಾಗದಿರಲಿ…

ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…

17 hours ago

ಕಾಂಗ್ರೆಸ್‌ನಲ್ಲೀಗ ಆತಂಕದ ಕಾರ್ಮೋಡ…

ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…

17 hours ago