ಜಿಲ್ಲೆಗಳು

ಮತದಾನ ಶೇ.100 ರಷ್ಟು ಆಗಬೇಕು: ಪ್ರಾದೇಶಿಕ ಆಯುಕ್ತ ಪ್ರಕಾಶ್

ಮೈಸೂರು : ಇತ್ತೀಚಿನ ದಿನಗಳಲ್ಲಿ ಗ್ರಾಮಾಂತರಗಳಿಗೆ ಹೋಲಿಸಿದರೆ ನಗರ ಭಾಗಗಳಲ್ಲಿ ಮತದಾನ ಮಾಡುವವರು ಹಿಂದೆ ಇದ್ದಾರೆ. ಹೀಗಾಗಿ ಮತದಾನ ಶೇ.100 ರಷ್ಟು ಆಗಬೇಕಾಗಿದ್ದು, ಜನರಿಗೆ ಮತದಾನದ ಬಗ್ಗೆ ಅರಿವು ಮೂಡಿಸಿ ಎಂದು ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರಾದ ಪ್ರಕಾಶ್ ಅವರು ತಿಳಿಸಿದರು.

ಗುರುವಾರ ನಗರದ ಆಡಳಿತ ತರಬೇತಿ ಸಂಸ್ಥೆಯ ಕಾವೇರಿ ಸಭಾಂಗಣದಲ್ಲಿ ಮತದಾರರಿಗೆ ವ್ಯವಸ್ಥಿತ ಶಿಕ್ಷಣ ಮತ್ತು ಚುನಾವಣೆಯ ಮತದಾನದಲ್ಲಿ ಭಾಗವಹಿಸುವಂತೆ ಪ್ರೋತ್ಸಾಹಿಸುವ ಸಲುವಾಗಿ ಕೇಂದ್ರ ಹಾಗೂ ರಾಜ್ಯ ಚುನಾವಣಾ ಆಯೋಗ, ಮೈಸೂರು ಜಿಲ್ಲಾ ಸ್ವೀಪ್ ಸಮಿತಿ ಹಾಗೂ ಜಿಲ್ಲಾಡಳಿತದ ವತಿಯಿಂದ ಆಯೋಜಿಸಿದ್ದ ಮೈಸೂರು ವಿಭಾಗೀಯ ಮಟ್ಟದ ಜಿಲ್ಲಾ ಸಂಪನ್ಮೂಲ ವ್ಯಕ್ತಿಗಳ ತರಬೇತಿ ಕಾರ್ಯದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಮೊದಲು ಮತದಾನ ಮಾಡಲು ಜನ ಭಯಪಡುತ್ತಿದ್ದರು. ಆದರೆ ಇಂದು ಚುನಾವಣಾ ಆಯೋಗ ಅಂತಹ ಭಯದ ವಾತಾವರಣವನ್ನು ದೂರ ಮಾಡಿದೆ. ದಿನದಿಂದ ದಿನಕ್ಕೆ ಹೊಸ ಮತದಾರರು ಹುಟ್ಟಿಕೊಳ್ಳುತ್ತಿದ್ದಾರೆ. ಹೀಗಾಗಿ ಮತದಾನದ ಬಗ್ಗೆ ಹಾಗೂ ಮತದಾನದ ಮಹತ್ವದ ಬಗ್ಗೆ ಅರಿವು ಮೂಡಿಸುವ ಜವಾಬ್ದಾರಿ ನಮ್ಮ ಮೇಲಿದೆ ಎಂದರು.

ಉತ್ತರ ಭಾರತಕ್ಕೆ ಹೋಲಿಸಿದರೆ ದಕ್ಷಿಣ ಭಾರತದಲ್ಲಿ ಮತದಾರರ ಮೇಲೆ ಹೆಚ್ಚು ಒತ್ತಡ ಇರುತ್ತದೆ. ಹಲವಾರು ಆಸೆ ಆಮೀಷಗಳಿಗೆ ಮತದಾರರು ಬಲಿಯಾಗುವ ಸಾಧ್ಯತೆಗಳಿರುತ್ತದೆ. ಇಂತಹ ಕಾರಣಕ್ಕೆ ಮತದಾರರನ್ನು ಸಂಪರ್ಕಿಸಿ ಅವರಿಗೆ ತಿಳಿ ಹೇಳುವ ಕೆಲಸವಾಗಬೇಕು ಎಂದರು. ರಾಜ್ಯ ಚುನಾವಣೆಯ ನೋಡಲ್ ಅಧಿಕಾರಿ ಪಿ.ಎಸ್.ವಸ್ತ್ರದ್ ಅವರು ಮಾತನಾಡಿ, ಗ್ರಾಮಾಂತರ ಭಾಗಗಳಲ್ಲಿ ಮತದಾನದ ಬಗ್ಗೆ ಮಾಹಿತಿ ನೀಡಬೇಕು. ಬುಡಕಟ್ಟು ಸಮುದಾಯದ ಜನರಿಗೂ ಮತದಾನದ ಮಹತ್ವ ತಿಳಿಸಿ ಅವರು ಭಾಗವಹಿಸಿಕೊಳ್ಳುಂತೆ ಪ್ರೇರಿಪಿಸಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಆಡಳಿತ ತರಬೇತಿ ಸಂಸ್ಥೆಯ ಜಂಟಿ ನಿರ್ದೇಶಕರಾದ ವರ್ಣೀತ್ ನೇಗಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಕೆ.ಎಂ.ಗಾಯಿತ್ರಿ, ಜಿಲ್ಲಾ ಪಂಚಾಯತಿಯ ಉಪ ಕಾರ್ಯದರ್ಶಿಗಳಾದ ಎಂ.ಕೃಷ್ಣರಾಜು, ಇಲವಾಲ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಾದ ಮಹದೇವ ಸೇರಿದಂತೆ ಇತರರು ಹಾಜರಿದ್ದರು.

andolanait

Recent Posts

ಬೆಂಗಳೂರಿನಲ್ಲಿ ದಾಖಲೆ ಪ್ರಮಾಣದ ಉಷ್ಣಾಂಶ: ಜನತೆಗೆ ಆರೋಗ್ಯ ಇಲಾಖೆ ಸೂಚನೆ

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಏರಿಕೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಹೀಟ್‌ ವೇವ್‌ ಎಚ್ಚರಿಕೆ…

1 hour ago

ಆರು ಹಸುಗಳ ಸಜೀವ ದಹನ ಪ್ರಕರಣ: ಆರೋಪಿ ಬಂಧನ

ಬೆಂಗಳೂರು: ಇಲ್ಲಿನ ಡಿ.ಜೆ.ಹಳ್ಳಿ ಬಳಿಯ ಶಾಂಪುರ ರಸ್ತೆಯಲ್ಲಿ ಕಿಡಿಗೇಡಿಯೊಬ್ಬ ಬೆಂಕಿ ಹಚ್ಚಿ ಆರು ಹಸುಗಳನ್ನು ಸಜೀವ ದಹನ ಮಾಡಿದ್ದ ಪ್ರಕರಣಕ್ಕೆ…

2 hours ago

ಅಮರನಾಥ ಯಾತ್ರೆಗೆ ಏಪ್ರಿಲ್.15ರಿಂದ ನೋಂದಣಿ‌

ನವದೆಹಲಿ: ಇದೇ ಏಪ್ರಿಲ್.‌15ರಿಂದ ಈ ವರ್ಷದ ಅಮರನಾಥ ಯಾತ್ರೆಗೆ ಮುಂಗಡ ನೋಂದಣಿ ಆರಂಭವಾಗಲಿದೆ. ಭಾರತದಾದ್ಯಂತ ಒಂದೇ ಸಮಯಕ್ಕೆ ಬುಕಿಂಗ್ ಪ್ರಾರಂಭವಾಗಲಿದ್ದು,…

2 hours ago

ಕಾಫಿ ತೋಟದಲ್ಲಿ ನವಜಾತ ಹೆಣ್ಣು ಶಿಶು ಪತ್ತೆ

ಕೊಡಗು: ಕಾಫಿ ತೋಟದಲ್ಲಿ ನವಜಾತ ಹೆಣ್ಣು ಶಿಶು ಪತ್ತೆಯಾಗಿರುವ ಘಟನೆ ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನ ಬೇತ್ರಿ ಗ್ರಾಮದಲ್ಲಿ ನಡೆದಿದೆ.…

2 hours ago

ಪ್ರಧಾನಿ ಮೋದಿ-ರಾಹುಲ್ ಗಾಂಧಿ ಮಾತುಕತೆ: ವಿಡಿಯೋ ವೈರಲ್

ನವದೆಹಲಿ: ಸಂಸತ್ತಿನ ಆವರಣದಲ್ಲಿ ಕಾರಿನಿಂದ ಇಳಿದು ಬಂದ ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್‌ಗಾಂಧಿ…

2 hours ago

ಮಂಡ್ಯ: ರಸಗೊಬ್ಬರ ಖರೀದಿಗೆ ಎಫ್‌ಐಡಿ ಕಡ್ಡಾಯ

ಮಂಡ್ಯ: ಮುಂಬರುವ ಮುಂಗಾರು ಹಂಗಾಮಿನ ಕೃಷಿ ಚಟುವಟಿಕೆಗಳಿಗೆ ರೈತರಿಗೆ ಅನುಕೂಲವಾಗುವಂತೆ ಯಾವುದೇ ಅಡಚಣೆಯಿಲ್ಲದೇ ವಿವಿಧ ಬೆಳೆಗಳಿಗೆ ಅವಶ್ಯಕವಾದ ರಸಗೊಬ್ಬರಗಳನ್ನು ನಿಯಮಾನುಸಾರ…

2 hours ago