ಜಿಲ್ಲೆಗಳು

ರಾಷ್ಟ್ರೀಯ ಹೆದ್ದಾರಿಯಲ್ಲಿ ನಿತ್ಯವೂ ಚರಂಡಿ ನೀರು : ಸಮಸ್ಯೆ ಬಗೆಹರಿಸಲು ಜಿಲ್ಲಾಧಿಕಾರಿಗಳೇ ಬರಬೇಕೆಂದ ಸಾರ್ವಜನಿಕರು

ಚಾಮರಾಜನಗರ :.ನಗರದ ಸೋಮವಾರಪೇಟೆಯ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ದಿನನಿತ್ಯವೂ ಚರಂಡಿ ನೀರು ಹರಿದುಬರುತ್ತಿದ್ದು, ಅವ್ಯವಸ್ಥೆ ತಾಂಡವಾಡುತ್ತಿದೆ. ಮಾಮೂಲಿ ದಿನಗಳಲ್ಲಿ ಹೀಗಾದರೆ ಇನ್ನೂ ಮಳೆ ಬಂದರಂತೂ ಇಲ್ಲಿ ಸಂಚರಿಸುವುದು ದುಸ್ತರವಾಗುತ್ತಿದೆ. ಅದರಲ್ಲಿಯೂ ವಾಹನ ಸವಾರರು ಹಾಗೂ ಪ್ರತಿನಿತ್ಯ ತೆರಳುವ ಶಾಲಾ ಮಕ್ಕಳಿಗೆ ಕಿರಿಕಿರಿ ಉಂಟಾಗುತ್ತಿದೆ.

ರಾಷ್ಟ್ರೀಯ ಹೆದ್ದಾರಿಯ ಸಮೀಪವೇ ಇರುವ ಕ್ಲಬ್ ನಿಂದ ಬರುವ ಗಲೀಜು ನೀರು ರಸ್ತೆಗೆ ಹರಿದುಬರುತ್ತಿರುವ ಹಿನ್ನೆಲೆ ಸಂಚಾರಕ್ಕೆ ಯೊಂದರೆಯಾಗುತ್ತಿರುವುದಲ್ಲದೆ ನಿತ್ಯವೂ  ಅಪಘಾತಗಳು ಸಂಭವಿಸುತ್ತಿವೆ. ಈ ಬಗ್ಗೆ ನಗರಸಭೆ ಹಾಗೂ ಜಿಲ್ಲಾಡಳಿತಕ್ಕೆ ಮನವಿ ಮಾಡಿದ್ದರು ಸಹ ಯಾವುದೇ ಪ್ರಯೋಜನವಾಗಿಲ್ಲವೆನ್ನುತ್ತಾರೆ ಸ್ಥಳೀಯರು.

ಮುಂದಾದರು  ಜಿಲ್ಲಾಧಿಕಾರಿಗಳೇ ಇಲ್ಲಿಗೆ ಭೇಟಿ ನೀಡಿ ಸಮಸ್ಯೆಯನ್ನು ಬಗೆಹರಿಸಬೇಕೆಂದು ಸಾರ್ವಜನಿಕರು ಪಟ್ಟು ಹಿಡಿದಿದ್ದಾರೆ.

andolanait

Recent Posts

ಹನೂರು | ಅರಣ್ಯದಲ್ಲಿ 292 ಗಾಂಜಾ ಗಿಡಗಳು ಪತ್ತೆ ; 213 ಕೆಜಿ ಗಾಂಜಾ ವಶ

ಹನೂರು : ತಾಲೂಕಿನ ಬಿಆರ್‌ಟಿ ಹುಲಿ ಸಂರಕ್ಷಿತ ಅರಣ್ಯ ಪ್ರದೇಶ ವ್ಯಾಪ್ತಿಯ ದೊಡ್ಡಸಂಪಿಗೆ ಅರಣ್ಯ ಪ್ರದೇಶದ ಕೂಳಿಹಟ್ಟಿ ಭಾಗದ ಬೆಳ್ಳಾಜಿ…

2 hours ago

ಉತ್ತರ ಪ್ರದೇಶದಲ್ಲಿ ಮುಂದುವರಿದ ಮಳೆಯ ಆರ್ಭಟ

ಉತ್ತರ ಪ್ರದೇಶ: ಉತ್ತರ ಪ್ರದೇಶದಲ್ಲಿ ಮಳೆಯ ಆರ್ಭಟ ಮುಂದುವರಿದಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ರಾಜ್ಯದ 63 ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚಿನ…

5 hours ago

ರಾಜ್ಯದಲ್ಲಿ ಬರ ತಾಂಡವ: ಪರಿಶೀಲನೆಗೆ ಕೇಂದ್ರದ ತಂಡ ರಾಜ್ಯಕ್ಕೆ ಆಗಮನ

ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ಹಂಗಾಮಿನಲ್ಲಿ ಉಂಟಾಗಿರುವ ಬರ ಪರಿಸ್ಥಿತಿ ಹಾಗೂ ಬೆಳೆ ಹಾನಿ ಪರಿಶೀಲಿಸಲು ಕೇಂದ್ರ ಸರ್ಕಾರದ ತಂಡ ರಾಜ್ಯಕ್ಕೆ…

6 hours ago

ರಾಜ್ಯದಲ್ಲಿ ಸದ್ಯಕ್ಕೆ ಲೋಡ್‌ ಶೆಡ್ಡಿಂಗ್‌ ಪ್ರಶ್ನೆ ಇಲ್ಲ: ಸಚಿವ ಕೆ.ಜೆ.ಜಾರ್ಜ್

ಮೈಸೂರು: ವಿದ್ಯುತ್‌ ಕೊರತೆ ಹಾಗೂ ರಾಜ್ಯದ ವಿದ್ಯುತ್‌ ಪರಿಸ್ಥಿತಿ ಕುರಿತು ಮಾತನಾಡಿರುವ ಸಚಿವ ಕೆ.ಜೆ.ಜಾರ್ಜ್‌ ರಾಜ್ಯದಲ್ಲಿ ಸದ್ಯಕ್ಕೆ ಲೋಡ್‌ ಶೆಡ್ಡಿಂಗ್‌…

6 hours ago

ಎಐ ಮನುಷ್ಯನನ್ನು ಆಳಲಾಗದು!

ಮೊನ್ನೆ ತುಮಕೂರು ರಸ್ತೆ ಹಿಡಿದು ಬೆಂಗಳೂರಿನ ಕಡೆ ಬರುತ್ತಿರುವಾಗ, ರಸ್ತೆಯ ಬಲಭಾಗದಲ್ಲಿ ದೊಡ್ಡ ಕಲ್ಲು ಬೆಟ್ಟ ಕಾಣಿಸಿತು. ಕುಂಬಳಕಾಯಿಯನ್ನು ಚಾಕುವಿನಿಂದ…

13 hours ago

ಭಯಗೊಳಿಸುವ ಸಿನೆಮಾ ಕಥೆ ನಿಜವಾಗುವ ಸಾಧ್ಯತೆ!

ಐಟಿ, ಆರೋಗ್ಯ, ಆಡಳಿತ ಹೀಗೆ ಎಲ್ಲೆಲ್ಲಿ ಎಐ ಬಳಕೆ ಸಾಧ್ಯವೋ ಅಲ್ಲೆಲ್ಲಾ ಪ್ರಾಥಮಿಕ ಹಂತದ ಉದ್ಯೋಗ ಗಳು ಕಡಿತವಾಗಲಿವೆ. ಎಐ…

13 hours ago