ಜಿಲ್ಲೆಗಳು

ನೀರು ಪರೀಕ್ಷಾ ಪ್ರಯೋಗಾಲಯ ಕಾಮಗಾರಿ ಪೂರ್ಣ

ಹೊಸ ಕಟ್ಟಡದಲ್ಲಿ ಜನವರಿಯಿಂದ ಕಾರ್ಯರಂಭ ಸಾಧ್ಯತೆ; ೫೦ ಲಕ್ಷ ರೂ. ವೆಚ್ಚದ ಕಾಮಗಾರಿ

ಪ್ರಸಾದ್ ಲಕ್ಕೂರು

ಚಾಮರಾಜನಗರ: ಕುಡಿಯುವ ನೀರು ಪರೀಕ್ಷಿಸಿ ಜನರಿಗೆ ಶುದ್ಧ ನೀರು ಪೂರೈಸಲು ನಿರ್ಮಿಸುತ್ತಿರುವ ಜಿಲ್ಲಾ ಕುಡಿಯುವ ನೀರಿನ ಗುಣಮಟ್ಟ ಪರೀಕ್ಷಾ ಪ್ರೋಂಗಾಲಯದ ಕಟ್ಟಡ ಕಾಮಗಾರಿ ಬಹುತೇಕ ಮುಕ್ತಾಯ ಹಂತದಲ್ಲಿದ್ದು, ಮುಂದಿನ ವರ್ಷದ ಜನವರಿುಂಲ್ಲಿ ಉದ್ಘಾಟನೆ ಭಾಗ್ಯ ದೊರಕಲಿದೆ.
ನಗರದ ನ್ಯಾಯಾಲಯ ರಸ್ತೆ ಬದಿಯಲ್ಲಿರುವ ಜಿಲ್ಲಾ ಪಂಚಾಯಿತಿಯ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯಾಲಯ ಹಿಂಭಾಗ ಪ್ರೋಂಗಾಲಯದ ಕಟ್ಟಡ ಕಾಮಗಾರಿ ಭರದಿಂದ ಸಾಗಿದೆ. ಶೇ.೮೫ರಷ್ಟು ಕಾಮಗಾರಿ ಮುಕ್ತಾಯವಾಗಿದ್ದು, ಬಣ್ಣ ಬಳಿಯುವುದು ಮತ್ತು ಟೈಲ್ಸ್ ಅಳವಡಿಕೆ ಕಾರ್ಯ ಬಾಕಿಯಿದೆ.

ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಉಸ್ತುವಾರಿಯಲ್ಲಿ ೫೦.೮೮ ಲಕ್ಷ ರೂ.ಅಂದಾಜು ವೆಚ್ಚದ ಈ ಕಾಮಗಾರಿಯನ್ನು ಗುತ್ತಿಗೆದಾರ ಎಂ.ಎಸ್.ವಾದಯ್ಯ ನಿರ್ವಹಿಸುತ್ತಿದ್ದಾರೆ. ಕಳೆದ ಫೆಬ್ರುವರಿಯಲ್ಲಿ ಕಾಮಗಾರಿ ಆರಂಭವಾಗಿದ್ದು, ಆಗಸ್ಟ್‌ನಲ್ಲಿ ಮುಕ್ತಾಯ ಆಗಬೇಕಿತ್ತು. ಸತತ ಮಳೆ ಹಾಗೂ ಇತರೆ ಕಾರಣಗಳಿಂದ ೩ ತಿಂಗಳು ಮುಂದೂಡಲಾಗಿದೆ.

ಕಾರ್ಯ ವಿಧಾನ ಹೇಗೆ ?
ನಗರದಲ್ಲಿ ಜಿಲ್ಲಾ ಮಟ್ಟದ ಮತ್ತು ಕೊಳ್ಳೇಗಾಲದಲ್ಲಿ ತಾಲ್ಲೂಕು ಮಟ್ಟದ ಪ್ರಯೋಗಾಲಯ ನಿರ್ಮಾಣ ಕಾರ್ಯ ಚುರುಕುಗೊಂಡಿದೆ. ಚಾಮರಾಜನಗರ ಮತ್ತು ಗುಂಡ್ಲುಪೇಟೆ ತಾಲ್ಲೂಕುಗಳ ೩೪ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯ ಗ್ರಾಮಗಳ ನೀರಿನ ಮಾದರಿಗಳನ್ನು ವರ್ಷಕ್ಕೆ ೨ ಬಾರಿ (ಮಳೆ ಪೂರ್ವ ಮತ್ತು ನಂತರ) ಸಂಗ್ರಹಿಸಿ ನಗರದಲ್ಲಿರುವ ಪ್ರಯೋಗಾಲಯದಲ್ಲಿ ಪರೀಕ್ಷೆ ಮಾಡಲಾಗುತ್ತದೆ.

ನೀರು ಕುಡಿಯಲು ಯೋಗ್ಯವಾಗಿದೆಯೇ, ಪ್ಲೋರೈಡ್ ಅಂಶ ಯಾವ ಪ್ರಮಾಣದಲ್ಲಿದೆ. ಗಡಸು ನೀರು ಇರಬಹುದೆ, ಏನಾದರೂ ಕಲುಷಿತವಾಗಿದೆಯೇ ಎಂಬುದರ ಕುರಿತು ಪರೀಕ್ಷೆ ನಡೆಸಿ ವರದಿ ಸಿದ್ಧಪಡಿಸಲಾಗುವುದು. ಸಂಬಂಧಪಟ್ಟ ಗುಂಡ್ಲುಪೇಟೆ ಮತ್ತು ಚಾ.ನಗರದ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಎಇಇ ಗಳಿಗೆ ವರದಿ ಸಲ್ಲಿಕೆ ಮಾಡಲಾಗುತ್ತದೆ.

ಆಯಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಭಿವೃದ್ಧಿ ಅಧಿಕಾರಿಗಳಿಗೆ ನೀರಿನ ಸ್ಥಿತಿಗತಿಯ ಬಗ್ಗೆ ಎಇಇಗಳು ತಿಳಿಸುತ್ತಾರೆ. ಕುಡಿಯಲು ಯೋಗ್ಯವಲ್ಲದ ನೀರಿದ್ದರೆ ಪರ್ಯಾಯ ನೀರಿನ ವ್ಯವಸ್ಥೆ ಮಾಡುವಂತೆ ಸೂಚನೆ ನೀಡಲಿದ್ದಾರೆ ಎಂದು ಪ್ರಯೋಗಾಲಯದ ಕಿರಿಯ ನೀರು ಪರಿವೀಕ್ಷಕ ಅನಿಲಕುವಾರ್ ತಿಳಿಸಿದ್ದಾರೆ.

andolana

Recent Posts

ಖಾಸಗಿ ಶಾಲೆಗಳಲ್ಲಿ ಕಡ್ಡಾಯವಾಗಿ ಕನ್ನಡ ಕಲಿಸದೇ ಹೋದರೆ ಕ್ರಮ: ಸಚಿವ ಮಧು ಬಂಗಾರಪ್ಪ

ಬೆಂಗಳೂರು: ರಾಜ್ಯದ ಎಲ್ಲಾ ಮಾದರಿ ಬೋರ್ಡ್‌ಗಳು ಕಡ್ಡಾಯವಾಗಿ ಕನ್ನಡ ಭಾಷೆ ಕಲಿಸಬೇಕು. ಇಲ್ಲದೇ ಹೋದರೆ ಅಂತಹ ಶಾಲೆಗಳ ಮೇಲೆ ಕ್ರಮ…

3 hours ago

ಹನೂರು| ರಸ್ತೆಯಲ್ಲಿ ಹುಲಿ ದರ್ಶನ: ವಿಡಿಯೋ ವೈರಲ್‌

ಹನೂರು: ತಾಲೂಕಿನ ಮಿಣ್ಯಂ ಗ್ರಾಮದಿಂದ ಹನೂರಿಗೆ ಆಗಮಿಸುತ್ತಿದ್ದ ಪ್ರಯಾಣಿಕರಿಗೆ ಅರಣ್ಯ ವ್ಯಾಪ್ತಿಯಲ್ಲಿ ಹುಲಿರಾಯ ದರ್ಶನ ನೀಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ…

5 hours ago

ಶೀಘ್ರದಲ್ಲೇ ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ: ರಹೀಂ ಖಾನ್‌

ಬೆಳಗಾವಿ: ಆದಷ್ಟು ಬೇಗ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲಾಗುತ್ತದೆ ಎಂದು ಸಚಿವ ರಹೀಂ ಖಾನ್‌ ತಿಳಿಸಿದರು. ವಿಧಾನಪರಿಷತ್‌ ಕಲಾಪದಲ್ಲಿ…

5 hours ago

ಎಚ್‌ಡಿಕೆ ಹುಟ್ಟುಹಬ್ಬ: ಮಂಡ್ಯದಲ್ಲಿ ಕಾರ್ಯಕರ್ತರಿಂದ ಅದ್ಧೂರಿ ಆಚರಣೆ

ಮಂಡ್ಯ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಹುಟ್ಟುಹಬ್ಬವನ್ನು ಮಂಡ್ಯ ಜಿಲ್ಲೆಯ ಜೆಡಿಎಸ್‌ ಕಾರ್ಯಕರ್ತರು ಅದ್ಧೂರಿಯಾಗಿ ಆಚರಣೆ ಮಾಡಿದರು. ಮದ್ದೂರಿನಲ್ಲಿ ಮಾಜಿ…

5 hours ago

ಕೋಳಿ ಮೊಟ್ಟೆ ಸೇವಿಸಿದರೆ ಕ್ಯಾನ್ಸರ್‌ ಬರುವ ವದಂತಿ: ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಿಷ್ಟು.!

ಬೆಳಗಾವಿ: ಕೋಳಿ ಮೊಟ್ಟೆ ಸೇವಿಸಿದರೆ ಕ್ಯಾನ್ಸರ್‌ ಬರುವ ವದಂತಿ ಎಲ್ಲೆಡೆ ಹಬ್ಬಿರುವ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಪ್ರತಿಕ್ರಿಯೆ…

5 hours ago

ಮಳವಳ್ಳಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಆಗಮನ

ಮಳವಳ್ಳಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಮಳವಳ್ಳಿಯಲ್ಲಿ ನಡೆಯಲಿರುವ ಸುತ್ತೂರಿನ ಆದಿ ಜಗದ್ಗುರು ಶ್ರೀ ಶಿವರಾತ್ರಿ ಶಿವ ಯೋಗಿಗಳರವರ 1066ನೇ ಜಯಂತಿ…

6 hours ago