ಪ್ರಸಾದ್ ಲಕ್ಕೂರು
ಚಾಮರಾಜನಗರ: ಕುಡಿಯುವ ನೀರು ಪರೀಕ್ಷಿಸಿ ಜನರಿಗೆ ಶುದ್ಧ ನೀರು ಪೂರೈಸಲು ನಿರ್ಮಿಸುತ್ತಿರುವ ಜಿಲ್ಲಾ ಕುಡಿಯುವ ನೀರಿನ ಗುಣಮಟ್ಟ ಪರೀಕ್ಷಾ ಪ್ರೋಂಗಾಲಯದ ಕಟ್ಟಡ ಕಾಮಗಾರಿ ಬಹುತೇಕ ಮುಕ್ತಾಯ ಹಂತದಲ್ಲಿದ್ದು, ಮುಂದಿನ ವರ್ಷದ ಜನವರಿುಂಲ್ಲಿ ಉದ್ಘಾಟನೆ ಭಾಗ್ಯ ದೊರಕಲಿದೆ.
ನಗರದ ನ್ಯಾಯಾಲಯ ರಸ್ತೆ ಬದಿಯಲ್ಲಿರುವ ಜಿಲ್ಲಾ ಪಂಚಾಯಿತಿಯ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯಾಲಯ ಹಿಂಭಾಗ ಪ್ರೋಂಗಾಲಯದ ಕಟ್ಟಡ ಕಾಮಗಾರಿ ಭರದಿಂದ ಸಾಗಿದೆ. ಶೇ.೮೫ರಷ್ಟು ಕಾಮಗಾರಿ ಮುಕ್ತಾಯವಾಗಿದ್ದು, ಬಣ್ಣ ಬಳಿಯುವುದು ಮತ್ತು ಟೈಲ್ಸ್ ಅಳವಡಿಕೆ ಕಾರ್ಯ ಬಾಕಿಯಿದೆ.
ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಉಸ್ತುವಾರಿಯಲ್ಲಿ ೫೦.೮೮ ಲಕ್ಷ ರೂ.ಅಂದಾಜು ವೆಚ್ಚದ ಈ ಕಾಮಗಾರಿಯನ್ನು ಗುತ್ತಿಗೆದಾರ ಎಂ.ಎಸ್.ವಾದಯ್ಯ ನಿರ್ವಹಿಸುತ್ತಿದ್ದಾರೆ. ಕಳೆದ ಫೆಬ್ರುವರಿಯಲ್ಲಿ ಕಾಮಗಾರಿ ಆರಂಭವಾಗಿದ್ದು, ಆಗಸ್ಟ್‌ನಲ್ಲಿ ಮುಕ್ತಾಯ ಆಗಬೇಕಿತ್ತು. ಸತತ ಮಳೆ ಹಾಗೂ ಇತರೆ ಕಾರಣಗಳಿಂದ ೩ ತಿಂಗಳು ಮುಂದೂಡಲಾಗಿದೆ.
ನಗರದಲ್ಲಿ ಜಿಲ್ಲಾ ಮಟ್ಟದ ಮತ್ತು ಕೊಳ್ಳೇಗಾಲದಲ್ಲಿ ತಾಲ್ಲೂಕು ಮಟ್ಟದ ಪ್ರಯೋಗಾಲಯ ನಿರ್ಮಾಣ ಕಾರ್ಯ ಚುರುಕುಗೊಂಡಿದೆ. ಚಾಮರಾಜನಗರ ಮತ್ತು ಗುಂಡ್ಲುಪೇಟೆ ತಾಲ್ಲೂಕುಗಳ ೩೪ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯ ಗ್ರಾಮಗಳ ನೀರಿನ ಮಾದರಿಗಳನ್ನು ವರ್ಷಕ್ಕೆ ೨ ಬಾರಿ (ಮಳೆ ಪೂರ್ವ ಮತ್ತು ನಂತರ) ಸಂಗ್ರಹಿಸಿ ನಗರದಲ್ಲಿರುವ ಪ್ರಯೋಗಾಲಯದಲ್ಲಿ ಪರೀಕ್ಷೆ ಮಾಡಲಾಗುತ್ತದೆ.
ನೀರು ಕುಡಿಯಲು ಯೋಗ್ಯವಾಗಿದೆಯೇ, ಪ್ಲೋರೈಡ್ ಅಂಶ ಯಾವ ಪ್ರಮಾಣದಲ್ಲಿದೆ. ಗಡಸು ನೀರು ಇರಬಹುದೆ, ಏನಾದರೂ ಕಲುಷಿತವಾಗಿದೆಯೇ ಎಂಬುದರ ಕುರಿತು ಪರೀಕ್ಷೆ ನಡೆಸಿ ವರದಿ ಸಿದ್ಧಪಡಿಸಲಾಗುವುದು. ಸಂಬಂಧಪಟ್ಟ ಗುಂಡ್ಲುಪೇಟೆ ಮತ್ತು ಚಾ.ನಗರದ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಎಇಇ ಗಳಿಗೆ ವರದಿ ಸಲ್ಲಿಕೆ ಮಾಡಲಾಗುತ್ತದೆ.
ಆಯಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಭಿವೃದ್ಧಿ ಅಧಿಕಾರಿಗಳಿಗೆ ನೀರಿನ ಸ್ಥಿತಿಗತಿಯ ಬಗ್ಗೆ ಎಇಇಗಳು ತಿಳಿಸುತ್ತಾರೆ. ಕುಡಿಯಲು ಯೋಗ್ಯವಲ್ಲದ ನೀರಿದ್ದರೆ ಪರ್ಯಾಯ ನೀರಿನ ವ್ಯವಸ್ಥೆ ಮಾಡುವಂತೆ ಸೂಚನೆ ನೀಡಲಿದ್ದಾರೆ ಎಂದು ಪ್ರಯೋಗಾಲಯದ ಕಿರಿಯ ನೀರು ಪರಿವೀಕ್ಷಕ ಅನಿಲಕುವಾರ್ ತಿಳಿಸಿದ್ದಾರೆ.
ಬೆಂಗಳೂರು: ನವೆಂಬರ್ 1ರಂದು ಭಾನುವಾರ ಬಂದರೂ ರಾಜ್ಯದ ಎಲ್ಲಾ ಶಾಲೆಗಳಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಕಡ್ಡಾಯ ಎಂದು ರಾಜ್ಯ ಸರ್ಕಾರ…
ಗುಂಡ್ಲುಪೇಟೆ: ತಾಲ್ಲೂಕಿನ ವಡಯ್ಯನಪುರ ಹಾಗೂ ಬೊಮ್ಮಲಾಪುರ ಗ್ರಾಮಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಕೊನೆಗೂ ಬೋನಿಗೆ ಬಿದ್ದಿದೆ. ಬೊಮ್ಮಲಾಪುರ…
ಹನೂರು: ತಾಲ್ಲೂಕಿನ ಗುಂಡಾಪುರ ಗ್ರಾಮದ ಸಮೀಪದ ಅರಣ್ಯ ಪ್ರದೇಶದಲ್ಲಿ ದನ-ಕುರಿ ಮೇಯಿಸಲು ಹೋಗಿದ್ದ ವ್ಯಕ್ತಿ ಮೇಲೆ ಚಿರತೆ ದಾಳಿ ನಡೆಸಿರುವ…
ಮೈಸೂರು: ಮೈಸೂರಿನಲ್ಲಿ ಕಳೆದ ವರ್ಷದ ದಸರಾ ವೇಳೆ ನಡೆದಿದ್ದ ಬಾಲಕಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ನ್ಯಾಯಾಲಯ ತೀರ್ಪು…
ಮೈಸೂರು: ದಸರಾ ದೀಪಾಲಂಕಾರದ ನಡುವೆ ಅವಘಡವೊಂದು ಸಂಭವಿಸಿದೆ. ನಗರದ ಸಯ್ಯಾಜಿರಾವ್ ರಸ್ತೆಯಲ್ಲಿ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ಕುಸಿದು ಬಿದ್ದಿದ್ದು,…
ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದುಮಾಡುತ್ತಿರುವ ಸ್ಟ್ರಿಂಗ್ ಆಪರೇಷನ್ ಸುದ್ದಿ, ಅದರ ಸುತ್ತ ನಡೆಯುವ ಆರೋಪ-ಪ್ರತ್ಯಾರೋಪಗಳು ಹಾಗೂ ಸಿಡಿ/ಪೆನ್ ಡ್ರೈವ್ಗಳ ವಿಚಾರ…