ಜಿಲ್ಲೆಗಳು

ಇವನ್ಯಾವನು ಗುಂಬಜ್ ಕೆಡವಲಿಕ್ಕೆ: ಸಿದ್ದರಾಮಯ್ಯ ಕಿಡಿ

ಮೈಸೂರು: ನಗರದಲ್ಲಿ ಗುಂಬಜ್ ಮಾದರಿಯ ಬಸ್ ನಿಲ್ದಾಣವನ್ನು ಜೆಸಿಬಿ ತೆಗೆದುಕೊಂಡು ಹೋಗಿ ನಾನೇ ಕೆಡವುತ್ತೇನೆಂದು ಹೇಳಿರುವ ಸಂಸದ ಪ್ರತಾಪ್ ಸಿಂಹ ವಿರುದ್ಧ ವಿರೋಧ ಪಕ್ಷದ ನಾಯಕ ಕಿಡಿಕಾರಿದರು.

ಎರಡನೇ ಬಾರಿ ಸಂಸದರಾಗಿರುವ ಪ್ರತಾಪ್ ಸಿಂಹ ಜವಾಬ್ದಾರಿಯಿಂದ ಮಾತನಾಡಬೇಕು. ಕಾಮನ್‌ಸೆನ್ಸ್ ಇಲ್ಲ ಅಂದರೆ ಹೇಗೆ? ಇವನು ಯಾವನೂ ಕೆಡುತ್ತೇನೆ ಎನ್ನುವುದಕ್ಕೆ. ನಿಲ್ದಾಣದ ದುಡ್ಡು ಸರ್ಕಾರದಿಂದ ನೀಡಿರುವುದು ಹೊರತು ಇವರ ಮನೆಯಿಂದ ನೀಡಿಲ್ಲ ಎಂದು ಹೇಳಿದರು.

ಸರ್ಕಾರಿ ಇಂಜಿನಿಯರ್‌ಗಳು ಡಿಸೈನ್ ಮಾಡಿದಾಗ ಏನು ಮಾಡುತ್ತಿದ್ದರು?ಕಟ್ಟುವಾಗ ಗೊತ್ತಿರಲಿಲ್ಲವೇ. ಜಾತಿ,ಧರ್ಮದ ಹೆಸರಿನಲ್ಲಿ ಅಶಾಂತಿ ಉಂಟು ಮಾಡುವುದಕ್ಕೆ ಮತ್ತು ಚುನಾವಣಾ ಕಾರಣಕ್ಕಾಗಿ ಈ ರೀತಿಯ ಹೇಳಿಕೆಗಳನ್ನು ಕೊಡುತ್ತಿದ್ದಾರೆ.ವಿವಾದಗಳನ್ನು ಹುಟ್ಟು ಹಾಕಲು ಪ್ರತಾಪ್ ಸಿಂಹ ಅಂತಹವರು ಹುಟ್ಟುಕೊಂಡಿದ್ದಾರೆ ಎಂದು ತರಾಟೆಗೆ ತಗೆದುಕೊಂಡರು.ಗುಂಬಜ್ ಮಾದರಿಯಲ್ಲಿ ಕಟ್ಟಿದ್ದರೆ ಹೊಡೆದು ಹಾಕೋಕೆ ಇವನ್ಯಾರು? ಇವನ ದುಡ್ಡಲ್ಲ. ಸಾರ್ವಜನಿಕರ ತೆರಿಗೆ ಹಣದಿಂದ ನಿರ್ಮಿಸುತ್ತಿರುವುದನ್ನು ಮರೆಯಬಾರದು ಎಂದರು.

೬೦೦ ವರ್ಷಗಳ ಕಾಲ ದೇಶವನ್ನು ಮೊಘಲರು ಆಳ್ವಿಕೆ ಮಾಡಿದ್ದರು. ಅವಾಗ ಇವರೆಲ್ಲಾ ಎಲ್ಲಿಗೆ ಹೋಗಿದ್ರು? ಕೆಲವು ವಿಚಾರಗಳನ್ನು ಇಟ್ಟುಕೊಂಡು ಜನರ ಮನಸ್ಸನ್ನು ಸೆಳೆಯುವ ಪ್ರಯತ್ನ ಮಾಡುತ್ತಾರೆ. ಆದರೆ, ಜನರು ಬುದ್ದಿವಂತರಿದ್ದಾರೆ. ಮುಂದಿನ ದಿನಗಳಲ್ಲಿ ಬಿಜೆಪಿಗೆ ಬುದ್ದಿ ಕಲಿಸುತ್ತಾರೆ ಎಂದು ಹೇಳಿದರು.

andolana

Recent Posts

ಮುಡಾ ಕಚೇರಿಯ ಮೇಲೆ ಇಡಿ ದಾಳಿ ದುರುದ್ದೇಶಪೂರ್ವಕ: ಮಾಜಿ ಸಂಸದ ಡಿ.ಕೆ.ಸುರೇಶ್‌

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್‌.18) ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ದಾಳಿಯು ಸಂಪೂರ್ಣವಾಗಿ…

2 mins ago

ಮುಡಾ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಮುಡಾ ಕೇಸ್‌ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…

13 mins ago

ಭವಾನಿ ರೇವಣ್ಣಗೆ ಬಿಗ್‌ ರಿಲೀಫ್:‌ ಹೈಕೋರ್ಟ್‌ ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್‌

ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್‌ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್‌ಐಟಿ…

31 mins ago

ಮುಡಾ ಪ್ರಕರಣ: ಮುಡಾ ಕಚೇರಿಯ ಮೇಲೆ ಇ.ಡಿ ದಾಳಿ

ಮೈಸೂರು: ಮುಡಾದಲ್ಲಿ ಹಗರಣ ನಡೆದಿದೆ ಎಂದು ಆರ್‌ಐಟಿ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಇ.ಡಿ.ಗೆ ದೂರು ನೀಡಿದ್ದರು. ಈ ದೂರಿನ ಆಧಾರದ…

54 mins ago

ನಟ ದರ್ಶನ್‌ಗೆ ಮತ್ತೊಂದು ಸಂಕಷ್ಟ: ಹಳೆ ಪ್ರಕರಣಕ್ಕೆ ಹೊಸ ಎನ್‌ಸಿಆರ್‌

ಬೆಂಗಳೂರು: ನಟ ದರ್ಶನ್‌ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಈ ಮಧ್ಯೆ ಹಳೆ…

2 hours ago

ಓದುಗರ ಪತ್ರ: ಮಹಿಳಾ ಅಧಿಕಾರಿಗಳಿಗೆ ಅಭಿನಂದನೆಗಳು

ಚಾಮರಾಜನಗರದಲ್ಲಿ ಅಕ್ಟೋಬರ್ ೭ರಿಂದ ಅ. ೯ರವರೆಗೆ ಆಯೋಜಿಸಿದ್ದ ‘ಚೆಲುವ ಚಾಮರಾಜನಗರ ದಸರಾ’ ಮಹೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಕಾರ್ಯಕ್ರಮಗಳನ್ನು ವ್ಯವಸ್ಥಿತವಾಗಿ ಆಯೋಜಿಸಿದ್ದರಿಂದ…

3 hours ago