ಚಾಮರಾಜನಗರ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಚಾಮರಾಜನಗರದ ಮಹಿಳೆಯ ಕೆಲಸವನ್ನು ಹೊಗಳಿದ್ದಾರೆ.
ಚಾಮರಾಜನಗರ ಜಿಲ್ಲೆಯ ಉಮ್ಮತ್ತೂರು ಗ್ರಾಮದ ವರ್ಷಾ ಎಂಬುವವರ ಕರಕುಶಲ ಕಲೆಯ ಬಗ್ಗೆ ಪ್ರಧಾನಿ ಮೋದಿ ತಮ್ಮ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಪ್ರಸ್ತಾಪಿಸಿ ವೋಕಲ್ ಫಾರ್ ಲೋಕಲ್ ಮಹತ್ವವನ್ನು ಸಾರಿದ್ದಾರೆ.
ಮೋದಿ ಅವರ ಮನ್ ಕಿ ಬಾತ್‌ನಿಂದ ಪ್ರೇರೇಪಣೆಗೊಂಡಿರುವ ವರ್ಷಾ, ಕರಕುಶಲ ಉದ್ಯಮ ಆರಂಭಿಸಿ, ಬಾಳೆಗಿಡದ ನಾರಿನಿಂದ ಕರಕುಶಲ ವಸ್ತುಗಳ ತಯಾರಿಸುತ್ತಿದ್ದಾರೆ. ಬಾಳೆ ದಿಂಡನ್ನು ಬಳಸಿ ಉಪ್ಪಿನಕಾಯಿ, ಚಟ್ನಿಪುಡಿ ಸೇರಿದಂತೆ ವಿವಿಧ ತಿನಿಸು ತಯಾರಿಸುತ್ತಿದ್ದಾರೆ. ಇದರಿಂದ ಐವರು ಮಹಿಳೆಯರು, ಇಬ್ಬರು ಪುರುಷರಿಗೆ ಕೆಲಸ ಕೊಟ್ಟಿದ್ದಾರೆ. ವೋಕಲ್ ಫಾರ್ ಲೋಕಲ್‌ನಿಂದ ಇದೆಲ್ಲವು ಸಾಧ್ಯ ಎಂದು ಮೋದಿ ಹೇಳಿದರು.
ಈ ಬಗ್ಗೆ ತಮ್ಮ ಅನಿಸಿಕೆಯನ್ನು ಹಂಚಿಕೊಂಡಿರುವ ಚಾಮರಾಜನಗರದ ವರ್ಷಾ, ನಾನು ಎಂಟೆಕ್ ಪದವೀಧರಳಾಗಿದ್ದು ಮನ್ ಕಿ ಬಾತ್‌ನಿಂದ ಪ್ರೇರಣೆ ಪಡೆದು ಬಾಳೆ ನಾರು ಹಾಗೂ ದಿಂಡಿನಿಂದ ವಿವಿಧ ವಸ್ತುಗಳನ್ನು ತಯಾರಿಸಲು ಆರಂಭಿಸಿದೆ. ಮೇಳಗಳು, ಆನ್‌ಲೈನ್ ಮಳಿಗೆ, ಸಾವಯವ ಮಳಿಗೆಗಳಲ್ಲಿ ನಮ್ಕ ವಸ್ತುಗಳನ್ನು ಮಾರಾಟ ಮಾಡಲಾಗುತ್ತಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.
ಮೈಸೂರು : ಚಾಮರಾಜ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವಾಹನ ದಟ್ಟಣೆ ನಿಯಂತ್ರಣ ಹಾಗೂ ಸುಗಮ ಸಂಚಾರಕ್ಕಾಗಿ ಅಗತ್ಯ ಅಭಿವೃದ್ಧಿ ಕಾಮಗಾರಿಗಳನ್ನು…
ಮೈಸೂರು : ಬೇಸಿಗೆ ರಜೆಯಲ್ಲಿ ಪ್ರಯಾಣಿಕರ ಬೇಡಿಕೆಯನ್ನು ಪೂರೈಸಲು, ನೈರುತ್ಯ ರೈಲ್ವೆಯು ಮೈಸೂರು- ಜಲ್ಪೈಗುರಿ ಜಂಕ್ಷನ್ ನಡುವೆ ವಿಶೇಷ ಎಕ್ಸ್‌ಪ್ರೆಸ್…
ಮಥುರಾ : ಬೃಂದಾವನದ ಕೇಶಿ ಘಾಟ್ ಸಮೀಪ ಯಮುನಾ ನದಿಯಲ್ಲಿ ಪ್ರವಾಸಿಗರಿಂದ ತುಂಬಿದ ದೋಣಿ ಪಲ್ಟಿಯಾಗಿ ಆರು ಮಂದಿ ಸ್ಥಳದಲ್ಲೇ…
ಟೆಹ್ರಾನ್ : ಇರಾನ್ ಹಾರ್ಮುಜ್ ಜಲಸಂಧಿಯ ಮೂಲಕ ಹಾದುಹೋಗುವ ಹಡಗುಗಳ ಮೇಲೆ ಶುಲ್ಕ ವಿಧಿಸುತ್ತಿದ್ದರೆ, ಅದು ತಕ್ಷಣವೇ ಅದನ್ನು ನಿಲ್ಲಿಸಬೇಕು…
ಮಲ್ಕುಂಡಿ : ರಾತ್ರಿ ವೇಳೆ ರಸ್ತೆ ಮಧ್ಯೆ ಚಿರತೆ ಪ್ರತ್ಯಕ್ಷವಾಗಿರುವ ಘಟನೆ ದೇವರಾಯಶೆಟ್ಟಿಪುರ ಗ್ರಾಮದಿಂದ ಹುರ ಗ್ರಾಮಕ್ಕೆ ತೆರಳುವ ಮುಖ್ಯ…
ಹನೂರು : ಮೂರು ಪ್ರತ್ಯೇಕ ಮನೆಗಳಲ್ಲಿ ಕಳ್ಳತನ ನಡೆಸಿ ನಗದು ಹಾಗೂ ಚಿನ್ನ ದೋಚಿಕೊಂಡು ಪರಾರಿಯಾಗಿದ್ದ ಐವರು ಆರೋಪಿಗಳನ್ನು ರಾಮಾಪುರ…