ಟಿಕೆಟ್ ಸಿಕ್ಕರೆ ಸುಮಲತಾ ಸಹಕಾರ ಕೋರುತ್ತೇನೆ ಎಂದ ಅಮರಾವತಿ ಚಂದ್ರಶೇಖರ್
ಮಂಡ್ಯ: ಅಂಬರೀಶ್ ಅವರ ಒಡನಾಟದಲ್ಲಿ 25 ವರ್ಷಗಳ ಕಾಲ ಸಕ್ರಿಯ ಕಾರ್ಯಕರ್ತನಾಗಿ ಕೆಲಸ ಮಾಡಿದ್ದೇನೆ. ಆದರೆ ಸುಮಲತಾ ಅವರು ನನ್ನನ್ನು ಏಕೆ ದೂರವಿರಿಸಿದರು ಎಂಬುದು ಈವರೆಗೂ ತಿಳಿದಿಲ್ಲ ಎಂದು ಕಾಂಗ್ರೆಸ್ ಮುಖಂಡ ಅಮರಾವತಿ ಚಂದ್ರಶೇಖರ್ ಸ್ಪಷ್ಟಪಡಿಸಿದರು.
ಅಂಬರೀಶ್ ಅವರ ಕಾಲಾ ನಂತರ ಈ ಪ್ರಶ್ನೆ ನನ್ನನ್ನು ಕಾಡುತ್ತಿದೆ. ನಾನು ಮಾಡಿರುವ ಅಪರಾಧವಾದರೂ ಏನು, ಏಕೆ ಸುಮಲತಾ ಅಂಬರೀಶ್ ನನ್ನನ್ನು ದೂರ ಇಟ್ಟರು ಎಂಬುದು ತಿಳಿಯುತ್ತಿಲ್ಲ ಎಂದು ಪ್ರಶ್ನೆಯೊಂದಕ್ಕೆ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಉತ್ತರಿಸಿದರು. ನಾನಂತೂ ಅವರ ಕುಟುಂಬಕ್ಕೆ ನಿಷ್ಠನಾಗಿದ್ದೆ. ಯಾವುದೇ ಅಪರಾಧವನ್ನೂ ಮಾಡಿಲ್ಲ. ಆದರೂ ಅವರು ನನ್ನನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿಲ್ಲ ಎಂದು ಹೇಳಿದರು.
ಟಿಕೆಟ್ ನೀಡಿದರೆ ಸುಮಲತಾ ಬೆಂಬಲ ಕೋರುತ್ತೇನೆ:
ಮುಂದಿನ ವಿಧಾನ ಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ನಾನೂ ಸಹ ಪ್ರಬಲ ಆಕಾಂಕ್ಷಿಯಾಗಿದ್ದೇನೆ ಪಕ್ಷ ನನಗೆ ಟಿಕೆಟ್ ನೀಡಿದಲ್ಲಿ ಸುಮಲತಾ ಅವರನ್ನು ಭೇಟಿಯಾಗಿ ಸಹಕಾರ ಕೋರುತ್ತೇನೆ. ಸಹಾಯ ಮಾಡುವಂತೆ ಮನವಿ ಮಾಡುತ್ತೇನೆ ಎಂದು ತಿಳಿಸಿದರು.
ಯಾವುದೇ ಗೊಂದಲವಿಲ್ಲ:
ಈಗಾಗಲೇ ಮಂಡ್ಯ ವಿಧಾನಸಭಾ ಕ್ಷೇತ್ರದಿಂದ 16 ಮಂದಿ ಆಕಾಂಕ್ಷಿತರಾಗಿದ್ದೇವೆ. ಎಲ್ಲರೂ ಅವರವರ ರೀತಿಯಲ್ಲಿ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿದ್ದೇವೆ. ಪ್ರತ್ಯೇಕ ಪ್ರಚಾರದಿಂದ ಪಕ್ಷದ ವರ್ಚಸ್ಸು ಕುಂದುವುದಿಲ್ಲ. ಮತದಾರರಲ್ಲಿ ಗೊಂದಲವೂ ಆಗುವುದಿಲ್ಲ. ಈ ಬಗ್ಗೆ ಕೆಪಿಸಿಸಿ ಅಧ್ಯಕ್ಷರೇ ನಿಮ್ಮದೇ ಆದ ರೀತಿಯಲ್ಲಿ ಪಕ್ಷ ಸಂಘಟನೆ ಮಾಡುವಂತೆ ಸಲಹೆ ನೀಡಿದ್ದಾರೆ, ಹಾಗಾಗಿ ಎಲ್ಲರೂ ಪಕ್ಷ ಸಂಘಟನೆ ನಿಟ್ಟಿನಲ್ಲಿ ಪ್ರತ್ಯೇಕ ಪ್ರಚಾರದಲ್ಲಿ ತೊಡಗಿಕೊಳ್ಳುತ್ತೇವೆ ಎಂದು ಸ್ಪಷ್ಟಪಡಿಸಿದರು.
ಒಗ್ಗಟ್ಟು ಪ್ರದರ್ಶನ:
ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಯಾರಿಗೆ ಟಿಕೆಟ್ ನೀಡುತ್ತದೆಯೋ ಅವರಿಗೆ ಎಲ್ಲರೂ ಒಗ್ಗೂಡಿ ಈ ಬಾರಿ ಕೆಲಸ ಮಾಡಲಾಗುವುದು. ಜಿಲ್ಲಾದ್ಯಂತ ಒಗ್ಗಟ್ಟು ಪ್ರದರ್ಶನದಿಂದ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸುವ ನಿರ್ಧಾರವನ್ನು ಪ್ರತಿಯೊಬ್ಬರೂ ಮಾಡಿಕೊಂಡಿದ್ದೇವೆ. ಈಗಾಗಲೇ ಎರಡು ಮೂರು ಸಭೆಗಳಲ್ಲೂ ನಮ್ಮ ನಾಯಕರು ಸಲಹೆ ನೀಡಿದ್ದಾರೆ. ಅದಕ್ಕೆ ಎಲ್ಲರೂ ಸಹಮತ ವ್ಯಕ್ತಪಡಿಸಿದ್ದಾರೆ ಎಂದು ಹೇಳಿದರು.
ಕಳೆದ ಬಾರಿ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಗಣಿಗ ರವಿಕುಮಾರ್ ಅವರ ವೈಯಕ್ತಿಕ ಲೋಪದಿಂದಾಗಿ ಕಡಿಮೆ ಮತಗಳ ಅಂತರದಿAದ ಹಿನ್ನಡೆ ಅನುಭವಿಸಬೇಕಾಗಿಯಿತು. ಕಾರ್ಯಕರ್ತರು ತುಂಬಾ ಚೆನ್ನಾಗಿ ಕೆಲಸ ಮಾಡಿದ್ದರು. ಅಭ್ಯರ್ಥಿಯ ತಪ್ಪು ನಿರ್ಧಾರ ಮುಳುವಾಗಿತ್ತು ಎಂದು ಹೇಳಿದರು.
ಕಾಂಗ್ರೆಸ್ ಮುಖಂಡರಾದ ಯೋಗೇಶ್, ಪುನೀತ್, ಗಿರೀಶ್ ಪಟೇಲ್, ಜಿ.ಸಿ. ಆನಂದ್, ಅನಿಲ್ ಕುಮಾರ್, ಶಂಕರ್ ಗೋಷ್ಠಿಯಲ್ಲಿದ್ದರು.
ಗುಂಡ್ಲುಪೇಟೆ : ತಾಲ್ಲೂಕಿನ ಬೊಮ್ಮಲಾಪುರ ಬಳಿ ಅನೇಕ ದಿನಗಳಿಂದ ರೈತರಿಗೆ ಉಪಟಳ ನೀಡಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿಯನ್ನು…
ಬೆಳ್ತಂಗಡಿ : ಧರ್ಮಸ್ಥಳ ವಿರುದ್ಧ ಹೋರಾಟ ನಡೆಸುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿಗೆ ಎರಡನೇ ಬಾರಿಗೆ ಗಡಿಪಾರು ಮಾಡಿ ಪುತ್ತೂರು ಎ.ಸಿ.ಆದೇಶ…
ಹೊಸದಿಲ್ಲಿ : ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಅಸ್ತಿತ್ವದಲ್ಲಿರುವ ‘ಮನ್ರೇಗಾ ಯೋಜನೆ’(ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ)ಯಿಂದ…
ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಕುಟುಂಬದ ಸದಸ್ಯರು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಈಗ ಎಂಡಿಎ)ದಿಂದ ಕಾನೂನು ಬಾಹಿರವಾಗಿ…
ಒಮಾನ್ : ಭಾರತ ಮತ್ತು ಒಮಾನ್ ನಡುವಿನ ಸಮಗ್ರ ಆರ್ಥಿಕ ಪಾಲುದಾರಿಕೆ ಒಪ್ಪಂದ (ಸಿಇಪಿಎ) ದ್ವಿಪಕ್ಷೀಯ ಸಂಬಂಧಗಳಿಗೆ ಹೊಸ ವಿಶ್ವಾಸ…
ಬೆಳಗಾವಿ : ಸರ್ಕಾರದ ವಿವಿಧ ಹುದ್ದೆಗಳ ನೇಮಕಾತಿ ವಿಳಂಬ ಮತ್ತು ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆಗಳು ವಿಧಾನಸಭೆಯಲ್ಲಿ ಪ್ರತಿಧ್ವನಿಸಿದವು. ಪ್ರತಿಪಕ್ಷದ ನಾಯಕ ಆರ್.ಅಶೋಕ್…