ಮೈಸೂರು: ಪತ್ನಿಯನ್ನೇ ಕೊಲೆ ಮಾಡಲು ಯತ್ನಿಸಿದ ಪತಿಗೆ ೧೨ ವರ್ಷಗಳ ಕಾಲ ಜೈಲು ಶಿಕ್ಷೆ ಮತ್ತು ೧೨ ಸಾವಿರ ರೂ. ದಂಡ ವಿಧಿಸಿ, ೫ನೇ ಅಪರ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ತೀರ್ಪು ನೀಡಿ ಆದೇಶಿಸಿದೆ.
ಹುಣಸೂರು ತಾಲ್ಲೂಕಿನ ಹೊಸಪುರ ಗ್ರಾಮದ ಕಾಳನಾಯಕ ಎಂಬಾತನೇ ಶಿಕ್ಷೆಗೆ ಗುರಿಯಾದ ವ್ಯಕ್ತಿ. ಈತ ೧೪ ವರ್ಷಗಳ ಹಿಂದೆ ಇದೇ ತಾಲ್ಲೂಕಿನ ಚಲ್ಲಹಳ್ಳಿ ಗ್ರಾಮದ ಮಂಗಳಮ್ಮ ಎಂಬವರನ್ನು ಮದುವೆಯಾಗಿದ್ದ. ಇವರಿಗೆ ಇಬ್ಬರೂ ಮಕ್ಕಳಿದ್ದಾರೆ. ಮದುವೆಯಾದ ೭ರಿಂದ ೮ ವರ್ಷ ಅನ್ಯೋನ್ಯತೆಯಿಂದ ಇದ್ದರು. ಆ ನಂತರದಲ್ಲಿ ಕಾಳನಾಯಕ ಕುಡಿದು ಬಂದು ಹೆಂಡತಿಗೆ ಮಾನಸಿಕ ಮತ್ತು ದೈಹಿಕವಾಗಿ ಹಿಂಸೆ ನೀಡುತ್ತಿದ್ದ.
೨೦೧೭ರ ಫೆ.೪ರಂದು ಮಧ್ಯಾಹ್ನ ೩.೩೦ರಲ್ಲಿ ಕಾಳನಾಯಕ ಮನೆಯಲ್ಲಿ ಮಕ್ಕಳ ಜೊತೆಗೆ ಇದ್ದ ಹೆಂಡತಿಯನ್ನು ನೀನು ಮನೆ ಬಿಟ್ಟು ಹೋಗು ಎಂದು ಜಗಳ ತೆಗೆದು, ನೀನು ಸತ್ತು ಹೋದರೆ, ನಾನು ಇನ್ನೊಂದು ಮದುವೆಯಾಗುತ್ತೇನೆ ಎಂದು ಹೇಳಿ ಗಲಾಟೆ ಮಾಡಿದ್ದಾನೆ. ನಂತರ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿ ಕೊಲೆ ಮಾಡಲು ಪ್ರಯತ್ನಿಸಿದ್ದಾನೆ. ಇದರಿಂದ ಕುತ್ತಿಗೆಯಿಂದ ಪಾದದವರೆಗೂ ಶೇ.೫೪ರಷ್ಟು ಭಾಗ ಮಂಗಳಮ್ಮನಿಗೆ ಸುಟ್ಟಗಾಯಗಳಾಗಿದ್ದವು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡ ಬಿಳಿಕೆರೆ ಠಾಣೆ ಪೊಲೀಸರು ತನಿಖೆ ಮಾಡಿ ನ್ಯಾಯಾಲಯಕ್ಕೆ ದೋಷಾರೋಪಣಾಪಟ್ಟಿ ಸಲ್ಲಿಸಿದ್ದರು.
ವಿಚಾರಣೆ ನಡೆಸಿದ ೫ನೇ ಅಪರ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರಾದ ಮಲ್ಲಿಕಾರ್ಜುನ ಅವರು ಸಾಕ್ಷ್ಯಾಧಾರಗಳನ್ನು ಪರಿಶೀಲಿಸಿ ಐಪಿಸಿ ಕಲಂ ೩೦೭ಕ್ಕೆ ಅಪರಾಧ ೧೦ ವರ್ಷಗಳ ಜೈಲು ಮತ್ತು ೧೦ ಸಾವಿರ ರೂ. ದಂಡ ಮತ್ತು ಐಪಿಸಿ ಕಲಂ ೪೯೮(ಎ) ಅಪರಾಧಕ್ಕೆ ೨ ವರ್ಷಗಳ ಜೈಲು ಮತ್ತು ೨ ಸಾವಿರ ರೂ. ದಂಡ ಸೇರಿದಂತೆ ಒಟ್ಟು ೧೨ ವರ್ಷಗಳ ಜೈಲು ಶಿಕ್ಷೆ ಮತ್ತು ೧೨ ಸಾವಿರ ರೂ. ದಂಡ ವಿಧಿಸಿ ಆದೇಶಿಸಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕರಾದ ನಾಗಪ್ಪ ಸಿ.ನಾಕಮನ್ ವಾದ ಮಂಡಿಸಿದರು.
ನಾನು ಶಾಕಾಹಾರಿ ಮಂಡಲಿಯ ಕಾರ್ಯಕಾರಿ ಸಮಿತಿಯ ಸದಸ್ಯನಾಗಿ ಆರಿಸಲ್ಪಟ್ಟೆನು. ಆದರ ಪ್ರತಿ ಯೊಂದು ಸಭೆಗೂ ನಾನು ತಪ್ಪದೆ ಹಾಜರಾಗುತ್ತಿದ್ದೆ. ಆದರೆ…
ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…
ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…
ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…