ಮಂಡ್ಯ: ಕಾಡು ಪ್ರಾಣಿಗಳು ರೈತರ ಜಾನುವಾರುಗಳ ಮೇಲೆ ದಾಳಿ ವಾಡಿ ಹಾನಿಯುಂಟು ಮಾಡಿದ ತಕ್ಷಣ ರಾಜ್ಯ ಸರ್ಕಾರ ಅನ್ನದಾತನ ನೆರವಿಗೆ ಬಂದು ಸಹಾಯಹಸ್ತ ಚಾಚಬೇಕು ಎಂದು ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ತಗ್ಗಹಳ್ಳಿ ವೆಂಕಟೇಶ್ ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.
ತಾಲ್ಲೂಕಿನ ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ತಗ್ಗಹಳ್ಳಿ ಗ್ರಾಮದಲ್ಲಿ ವಲಯ ಅರಣ್ಯಾಧಿಕಾರಿಗಳ ಸಹೋಂಗದಲ್ಲಿ ಹಮ್ಮಿಕೊಂಡಿದ್ದ ವನ್ಯಜೀವಿ ಸಪ್ತಾಹ ಹಾಗೂ ಕಾಡು ಪ್ರಾಣಿಗಳ ಹಾವಳಿಯಿಂದ ಸುರಕ್ಷಿತವಾಗಿ ಇರುವಿಕೆ ಎಂಬ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಇತ್ತೀಚೆಗೆ ಕಮ್ಮನಾಯಕನಹಳ್ಳಿ ಗ್ರಾಮದಲ್ಲಿ ಚಿರತೆಯ ದಾಳಿಗೆ ಹಸುವಿನ ಕರು ಮೃತಪಟ್ಟಿತ್ತು. ಸುದ್ದಿ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿದ ಅರಣ್ಯಾಧಿಕಾರಿಗಳು ತಮ್ಮ ಕೆಲಸವನ್ನು ಮಾಡಿದರು. ಸರ್ಕಾರದ ವತಿಯಿಂದ ಹಸುವಿನ ಮಾಲೀಕ ರೈತ ರಾಜು ಅವರಿಗೆ ಸಹಾಯಧನವನ್ನು ಕೊಡಿಸಿಕೊಡಬೇಕು ಎಂದು ಅರಣ್ಯಾಧಿಕಾರಿಗಳಿಗೆ ಮನವಿ ಮಾಡಿದರು.
ಕಾಡು ಪ್ರಾಣಿಗಳು ರೈತರ ಜಾನುವಾರುಗಳ ಮೇಲೆ ದಾಳಿ ಮಾಡಿ ಅಪಾರ ನಷ್ಟ ಉಂಟು ಮಾಡಿದ ಸಂದರ್ಭದಲ್ಲಿ ಸರ್ಕಾರ ತಕ್ಷಣ ಅನ್ನದಾತನ ಸಹಾಯಕ್ಕೆ ಧಾವಿಸಬೇಕು ಎಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು. ಈ ಸಂದರ್ಭದಲ್ಲಿ ತಗ್ಗಹಳ್ಳಿ ಗ್ರಾಪಂ ವಾಜಿ ಅಧ್ಯಕ್ಷ ಟಿ.ಎಂ.ಸುರೇಶ್, ಅರಣ್ಯ ಅಧಿಕಾರಿಗಳು ಹಾಗೂ ಗ್ರಾಮದ ಮುಖಂಡರು ಹಾಜರಿದ್ದರು.
ಪ್ರಶಾಂತ್ ಎನ್ ಮಲ್ಲಿಕ್ ಮೈಸೂರು: ಸುತ್ತೂರು ಜಾತ್ರೆ ವೇಳೆ ರಾತ್ರಿ ಗದ್ದೆಯಲ್ಲಿ ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪರಿಣಾಮ…
ಸಿದ್ದಾಪುರ: ವಿರಾಜಪೇಟೆ ರಸ್ತೆಯಲ್ಲಿರುವ ಎಸ್‌ವೈಎಸ್ ಕಾಫಿ ಅಂಗಡಿಯಲ್ಲಿ ನಡೆದ ನಗದು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದಾಪುರ ಪೊಲೀಸರು ಕೇರಳ ಮೂಲದ…
ಮಹಾದೇಶ್ ಎಂ ಗೌಡ ಹನೂರು: ತಾಲ್ಲೂಕಿನ ಕೆವಿಎನ್ ದೊಡ್ಡಿ ಗ್ರಾಮದ ಜಮೀನೊಂದರಲ್ಲಿ ಕಾಡಾನೆ ಲಗ್ಗೆ ಇಟ್ಟು ಅಪಾರ ಪ್ರಮಾಣದ ಬೆಳೆ…
ಬೆಂಗಳೂರು: ಕಾಲ್ತುಳಿತ ಪ್ರಕರಣದಿಂದಾಗಿ ಈ ಬಾರಿಯ ಬಹು ನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಪಂದ್ಯಗಳು ನಡುವುದೇ ಡೋಲಾಯಮಾನ ಸ್ಥಿತಿಯಲ್ಲಿರುವಾಗಲೇ ಉದ್ಘಾಟನಾ…
ಬೆಂಗಳೂರು: ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣ ಸಂಬಂಧ ಕಾಂಗ್ರೆಸ್ ಮುಖಂಡ ರಾಜೀವ್‌ಗೌಡಗೆ ಹೈಕೋರ್ಟ್ ತೀವ್ರ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ಪ್ರಮುಖ ಆರೋಪಿ ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆ ಊಟ…