ಹನೂರು: ಪಟ್ಟಣದಿಂದ ಅಜ್ಜಿಪುರ- ರಾಮಾಪುರ ರಸ್ತೆಯ ಮಾರ್ಗ ಮಧ್ಯದ ಅರಕನಹಳ್ಳ ಬಳಿ ಹಾಡಹಗಲೇ ಕಾಡು ಆನೆಗಳು ರಸ್ತೆ ಸಮೀಪವೆ ಆಗಮಿಸುತ್ತಿರುವುದರಿಂದ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ.
ಹನೂರು ತಾಲ್ಲೂಕಿನ ಮಲೆಮಹದೇಶ್ವರ ವನ್ಯಧಾಮ ವ್ಯಾಪ್ತಿಯ ಅರಣ್ಯ ಪ್ರದೇಶದಿಂದ ಆಗಮಿಸಿದ 5 ಕಾಡಾನೆಗಳು ರಸ್ತೆಯನ್ನು ದಾಟಿದ್ದು, ಈ ಸಮಯದಲ್ಲಿ ಎರಡೂ ಬದಿಗಳಲ್ಲಿ ಬೈಕ್ ಸವಾರರು ಹಾಗೂ ವಾಹನಗಳಲ್ಲಿದ್ದವರು ಕುತೂಹಲದಿಂದ ವಿಡಿಯೋ ಮಾಡಿದ್ದಾರೆ. ಇನ್ನೂ ಕೆಲವರು ಆತಂಕದಲ್ಲಿ ಆ ಸ್ಥಳದಿಂದ ಕಾಲ್ಕಿತ್ತಿದ್ದಾರೆ.
ಈ ಸಂಬಂಧ ಅಜ್ಜಿಪುರ ಗ್ರಾಮದ ನಿವಾಸಿಗಳು ಮಾತನಾಡಿ, ಹಾಡಹಗಲೇ ಕಾಡಾನೆಗಳು ಮುಖ್ಯ ರಸ್ತೆಯಲ್ಲಿ ಓಡಾಡಿರುವುದು ಭಯ ಉಂಟುಮಾಡಿದೆ. ಆದ್ದರಿಂದ ಸಂಬಂಧಪಟ್ಟ ಅರಣ್ಯ ಇಲಾಖೆ ಅಧಿಕಾರಿಗಳು ಕಾಡಾನೆ ಸೇರಿದಂತೆ ಇನ್ನಿತರ ಪ್ರಾಣಿಗಳು ರಸ್ತೆ ಭಾಗಕ್ಕೆ ಬಾರದಂತೆ ಸೂಕ್ತ ಕ್ರಮ ವಹಿಸಬೇಕು ಎಂದು ಮನವಿ ಮಾಡಿದ್ದಾರೆ.
ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…
ಮಂಡ್ಯ: ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…
ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…
ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…
ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…
ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್‌ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…