Mysore
27
scattered clouds

Social Media

ಬುಧವಾರ, 15 ಜನವರಿ 2025
Light
Dark

ಕೊಳ್ಳೇಗಾಲದಲ್ಲಿ ವನ್ಯಜೀವಿ ಸಪ್ತಾಹ

ಕೊಳ್ಳೇಗಾಲ: ಪಟ್ಟಣದಲ್ಲಿ ಆಯೋಜಿಸಿದ್ದ ೬೮ನೇ ವನ್ಯಜೀವಿ ಸಪ್ತಾಹ ಕಾರ್ಯಕ್ರಮವನ್ನು ಅಪರ ಸಿವಿಲ್ ನ್ಯಾಯಾಧೀಶರಾದ ಸಿ.ಜೆ.ರಘು ಉದ್ಘಾಟಿಸಿ ಮಾತನಾಡಿದ ಅವರು, ಪ್ರಕೃತಿ ಹಾಗೂ ಮಾನವನ ನಡುವೆ ನೇರ ಸಂಬಂಧ ಇರುವುದರಿಂದ ಪ್ರಕೃತಿ ನಾಶಕ್ಕೆ ಉಂಟಾಗುವ ಅವಘಡಗಳನ್ನು ತಪ್ಪಿಸುವ ಕರ್ತವ್ಯ ಎಲ್ಲರ ಮೇಲಿದೆ ಎಂದು ಹೇಳಿದರು.

ಮುಂದಿನ ಪೀಳಿಗೆಯ ಒಳಿತಿಗಾಗಿ ಅರಣ್ಯ ಹಾಗೂ ವನ್ಯಜೀವಿಗಳ ಉಳಿಸುವ ಕರ್ತವ್ಯ ನಮ್ಮದಾಗಿದೆ. ಪ್ರತಿೊಂಬ್ಬರು ಪ್ರಕೃತಿಯ ಕುರಿತು ಅರಿವು ಮೂಡಿಸಬೇಕಾಗಿದೆ ಎಂದು ತಿಳಿಸಿದರು.

ಕಾವೇರಿ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಎಲ್.ನಂದೀಶ್ ಮಾತನಾಡಿ, ಅರಣ್ಯ ಮತ್ತು ವನ್ಯಜೀವಿಗಳ ಉಳಿವಿನ ಬಗ್ಗೆ ಅರಿವು ಮೂಡಿಬೇಕು. ಪ್ರಕೃತಿ ವಿಕೋಪ ತಡೆಗಟ್ಟಲು ಅರಣ್ಯ ಹಾಗೂ ವನ್ಯಜೀವಿಗಳ ಸಂರಕ್ಷಣೆ ಅಗತ್ಯವಿದೆ. ಈ ದೃಷ್ಟಿಯಿಂದ ಸರ್ಕಾರ ಅನೇಕ ೋಂಜನೆಗಳನ್ನು ಜಾರಿಗೆ ತಂದು ಅರಣ್ಯ ಹಾಗೂ ವನ್ಯಜೀವಿ ಸಂರಕ್ಷಣೆಯನ್ನು ಮಾಡುತ್ತಾ ಬಂದಿದೆ. ಈ ಬಗ್ಗೆ ಅರಿವು ಮೂಡಿಸಲೆಂದು ರಾಜ್ಯಾದ್ಯಂತ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದರು.

ಮಲೆ ಮಹದೇಶ್ವರ ವನ್ಯಜೀವಿ ವಿಭಾಗದ ಸಂರಕ್ಷಣಾ ಅಧಿಕಾರಿ ಡಾ.ಸಂತೋಷ್ ಕುಮಾರ್ ಮಾತನಾಡಿ, ಪ್ರಕೃತಿಯಲ್ಲಿ ಪ್ರತಿೊಂಂದು ಪ್ರಾಣಿ-ಪಕ್ಷಿಗಳು ಪರೋಕ್ಷವಾಗಿ ಮಾನವನಿಗೆ ಉಪಕಾರವನ್ನೇ ಮಾಡುತ್ತಾ ಬಂದಿವೆ. ಯಾವುದೇ ಪ್ರಾಣಿ-ಪಕ್ಷಿಗಳು ನಶಿಸದಂತೆ ಸಂರಕ್ಷಿಸಬೇಕು ಎಂದು ಹೇಳಿದರು.

ಕಾರ್ಯಕ್ರಮಕ್ಕೂ ಮುನ್ನ ಪಟ್ಟಣದ ಮರಡಿಗುಡ್ಡ ವೃಕ್ಷವನದ ಗೇಟ್ ಎದುರು ಅರಣ್ಯ ಇಲಾಖೆ ಹಮ್ಮಿಕೊಂಡಿದ್ದ ಮ್ಯಾರಥಾನ್‌ಗೆ ಹಿರಿಯ ಸಿವಿಲ್ ನ್ಯಾಯಾಧೀಶ ಎಂ.ಆನಂದ ಚಾಲನೆ ನೀಡಿದರು. ಮ್ಯಾರಥಾನ್‌ನಲ್ಲಿ ಭಾಗವಹಿಸಿ ವಿಜೇತರಾದ ದೊಡ್ಡಿಂದುವಾಡಿ ಡಿ.ರಾಜು, ಹಳೇ ಅಣಗಳ್ಳಿ ಶಿವಕುಮಾರ್, ಟೌನ್ ಆಕಾಶ್ ಇವರಿಗೆ ಬಹುಮಾನ ನೀಡಲಾಯಿತು.

ತಹಸಿಲ್ದಾರ್ ಮಂಜುಳಾ, ಡಿವೈಎಸ್ಪಿ ನಾಗರಾಜು, ಇನ್‌ಸ್ಪೆಕ್ಟರ್ ಶಿವರಾಜ್ ಮುಧೋಳ್, ಎಸ್‌ಐ ಚೇತನ್, ಉಪ ಅರಣ್ಯ ಸಂರಕ್ಷಣಾಧಿಕಾರಿ ನಂದೀಶ್, ಅಂಚೆ ಇಲಾಖೆ ಅಧೀಕ್ಷಕ ಹೆಚ್.ಸಿ.ಸದಾನಂದ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶಶಿಧರ್, ಹನೂರು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಭಾಗ್ಯಲಕ್ಷ್ಮಿ, ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕ ಗಿರೀಶ್ ಓಂಕಾರ್ ಹಾಜರಿದ್ದರು.

 

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ