ಮೈಸೂರು: ಸಾಕಷ್ಟು ಪರ-ವಿರೋಧದ ನಡುವೆ ಬೆಂಗಳೂರು-ಮೈಸೂರು ನಡುವಿನ ಟಿಪ್ಪು ಎಕ್ಸ್‌ಪ್ರೆಸ್ (Tipu Express) ಹೆಸರು ಈಗ ಒಡೆಯರ್ ಎಕ್ಸ್ ಪ್ರೆಸ್ ಆಗಿ ಬದಲಾಗಿದೆ.
ಒಡೆಯರ್ ಎಕ್ಸ್ ಪ್ರೆಸ್ ಎಂದು ಹೊಸದಾಗಿ ಅಳವಡಿಸಲಾಗಿದ್ದ ನಾಮಕರಣ ಫಲಕವನ್ನು ಹೊತ್ತ ರೈಲು ಶನಿವಾರ ಮೈಸೂರಿಗೆ ಆಗಮಿಸಿದೆ. ಮಂಡ್ಯದಲ್ಲಿ ಭಾನುವಾರ ಬಿಜೆಪಿ ಕಾರ್ಯಕರ್ತರು ರೈಲನ್ನು ಸಿಂಗರಿಸಿ, ಕುಂಬಳಕಾಯಿ ಒಡೆದು ಸಂಭ್ರಮಿಸಿದರು.
ಇದೇ ವೇಳೆ ಟಿಪ್ಪು ಎಕ್ಸ್ ಪ್ರೆಸ್ ಮರುನಾಮಕರಣದ ಕುರಿತು ರಾಜವಂಶಸ್ಥ ಯದುವೀರ್ ಒಡೆಯರ್ ತಮ್ಮ ಪ್ರತಿಕ್ರಿಯೆ ನೀಡಿದ್ದು ಸರಕಾರದ ನಿರ್ಧಾರವನ್ನು ಸ್ವಾಗತಿಸಿದ್ದಾರೆ. ಚಾಮುಂಡಿ ಬೆಟ್ಟದಲ್ಲಿ ನಡೆದ ಮಹಾರಥೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಹತ್ತನೇ ಚಾಮರಾಜ ಒಡೆಯರ್ ಕಾಲದಿಂದಲೂ ರೈಲ್ವೆ ಅಭಿವೃದ್ಧಿಯಾಗಿದೆ. ಒಡೆಯರ್ ಎಕ್ಸ್ ಪ್ರೆಸ್ ಎಂದು ನಾಮಕರಣ ಮಾಡಿರುವುದು ಸಂತೋಷದ ವಿಷಯ ಎಂದು ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿದರು.
ಶನಿವಾರವೇ ರೈಲುಗಳ ಮೇಲಿದ್ದ ಟಿಪ್ಪು ಎಕ್ಸ್ ಪ್ರೆಸ್ ಹೆಸರು ಇರೋ ಫಲಕ ತೆಗೆದು ಒಡೆಯರ್ ಎಕ್ಸ್ಪ್ರೆಸ್ ಎಂದು ಹಾಕಲಾಗಿದೆ.ಈ ಫೋಟೋಗಳನ್ನು ಸಂಸದ ಪ್ರತಾಪ್ ಸಿಂಹ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
ತಾಳಗುಪ್ಪ ರೈಲು ಕುವೆಂಪು ಎಕ್ಸ್ ಪ್ರೆಸ್
ಮೈಸೂರು-ಬೆಂಗಳೂರು ನಡುವಿನ ಟಿಪ್ಪು ಎಕ್ಸ್ ಪ್ರೆಸ್ ರೈಲಿನ ಹೆಸರನ್ನು ಬದಲಾವಣೆ ಮಾಡಲಾಗಿದ್ದು, ಒಡೆಯರ್ ಎಕ್ಸ್ ಪ್ರೆಸ್ (Wodeyar Express) ಎಂದು ಮರುನಾಮಕರಣ ಮಾಡಲಾಗಿದೆ. ಇನ್ನು ತಾಳಗುಪ್ಪ ಎಕ್ಸ್ ಪ್ರೆಸ್ ರೈಲಿನ ಹೆಸರನ್ನು ಕುವೆಂಪು ಎಕ್ಸ್ ಪ್ರೆಸ್ (Kuvempu Express) ಎಂದು ನಾಮಕರಣ ಮಾಡಿ ರೈಲ್ವೆ ಇಲಾಖೆ ಅಧಿಕೃತವಾಗಿ ಘೋಷಣೆ ಮಾಡಿದೆ. ಈ ರೈಲಿನ ನಾಮಫಲಕವನ್ನೂ ಬದಲಿಸಲಾಗಿದೆ.
ಜುಲೈ 25ರಂದು ಪತ್ರ ಬರೆದಿದ್ದ ಪ್ರತಾಪ್ ಸಿಂಹ
ಮೈಸೂರು-ಬೆಂಗಳೂರು ನಡುವಿನ ಟಿಪ್ಪು ಎಕ್ಸ್ ಪ್ರೆಸ್ ರೈಲಿಗೆ ಮರುನಾಮಕರಣ ಮಾಡುವಂತೆ ಕೋರಿ ಮೈಸೂರು ಕೊಡಗು ಸಂಸದ ಪ್ರತಾಪ್ ಸಿಂಹ ಜುಲೈ 25ರಂದು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದರು. ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ರಿಗೆ ಈ ಮನವಿಗೆ ಸ್ಪಂದಿಸಿದ್ದಾರೆ.
ಸಿದ್ದರಾಮಯ್ಯ ಆಕ್ರೋಶ
ಟಿಪ್ಪು ಎಕ್ಸ್ ಪ್ರೆಸ್ ಹೆಸರನ್ನು ಒಡೆಯರ್ ಎಕ್ಸ್ ಪ್ರೆಸ್ ಎಂದು ಹೆಸರು ಬದಲಾಯಿಸಿದ ಸರ್ಕಾರದ ನಿರ್ಧಾರವನ್ನು ಮಾಜಿ ಸಿಎಂ ಸಿದ್ದರಾಮಯ್ಯ ಖಂಡಿಸಿದ್ದಾರೆ.
ಬೆಂಗಳೂರು : ಚಿನ್ನದ ಹುಡುಗ ಜಾವೆಲಿನ್ ಥ್ರೋವರ್ ನೀರಜ್ ಚೋಪ್ರಾ ಮತ್ತು JSW ಸ್ಪೋರ್ಟ್ಸ್ ಸೋಮವಾರ ತಮ್ಮ ಅಧಿಕೃತ ಪಾಲುದಾರಿಕೆಯನ್ನು…
ಮೈಸೂರು : ಶಿಕ್ಷಣವಿಲ್ಲದಿದ್ದರೆ ಮನುಷ್ಯರಾಗಿ, ಸ್ವಾಭಿಮಾನಿಗಳಾಗಿ ಬದುಕಲು ಸಾಧ್ಯವಿಲ್ಲ. ಸಮಾಜದಲ್ಲಿ ಬದಲಾವಣೆ ತರಬೇಕಾದರೆ ವಿದ್ಯಾವಂತರಾಗಲೇಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.…
ಮೈಸೂರು : ಮಾಜಿ ಸಿ.ಎಂ ದಿವಂಗತ ದೇವರಾಜ್ ಅರಸ್ ಅವರ ಮುಖ್ಯಮಂತ್ರಿಯ ಸುದೀರ್ಘ ಅವಧಿಯ ದಾಖಲೆ ಮುರಿದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ…
ಮಹಾದೇಶ್ ಎಂ ಗೌಡ ಹನೂರು: ತನ್ನ ಜಮೀನಿನಲ್ಲಿ ಬೆಳೆಯಲಾಗಿದ್ದ ಜೋಳದ ಫಸಲು ಕಾಯುತ್ತಿದ್ದ ರೈತನ ಮೇಲೆ ಕಾಡಾನೆ ದಾಳಿ ನಡೆಸಿದ…
ಬೆಂಗಳೂರು: ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ನೆಲೆಸಿರುವ ಅಕ್ರಮ ವಲಸಿಗರಿಗೆ ಸರ್ಕಾರದ ವತಿಯಿಂದ ಮನೆ ನಿರ್ಮಾಣ ಮಾಡಿಕೊಡಲು ಅವಕಾಶ ಕೊಡುವುದಿಲ್ಲ. ಎಲ್ಲಾ…
ಬೆಂಗಳೂರು: ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ ವಾಕ್ಸಮರಕ್ಕೆ ಕಾರಣವಾಗಿರುವ ನಗರದ ಕೋಗಿಲು ಲೇಔಟ್‍ನಲ್ಲಿ ವಲಸಿಗರು ಅನಧಿಕೃತವಾಗಿ ಮನೆ ನಿರ್ಮಾಣ…