ಸಿದ್ದಾಪುರ: ಕಾಡಾನೆ ದಾಳಿಗೆ ಮಹಿಳೆಯೊಬ್ಬರು ಬಲಿಯಾದ ಘಟನೆ ವಿರಾಜಪೇಟೆ ತಾಲ್ಲೂಕಿನ ಅಮ್ಮತ್ತಿ ಸಮೀಪದ ಹೊಸೂರುವಿನಲ್ಲಿ ನಡೆದಿದೆ.
ಹೊಸೂರು ನಿವಾಸಿ ಬೇಬಿ(55) ಮೃತ ಮಹಿಳೆ. ನಿನ್ನೆ ( ಜನವರಿ 24 ) ಸಂಜೆ ವೇಳೆ ದಿನಸಿ ಸಾಮಾಗ್ರಿಗಳನ್ನು ಖರೀದಿಸಿ ಮನೆಗೆ ಹಿಂತಿರುಗುವ ಸಂದರ್ಭದಲ್ಲಿ ಕಾಡಾನೆ ದಾಳಿ ಮಾಡಿದ ಪರಿಣಾಮ ಬೇಬಿ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.
ಕಾಡಾನೆ ಹಾವಳಿ ತಡೆಗಟ್ಟಲು ವಿಫಲವಾಗಿರುವ ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಶಾಸಕ ಎ.ಎಸ್. ಪೊನ್ನಣ್ಣ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸಿದ್ದಾಪುರ ಸಮುದಾಯ ಆರೋಗ್ಯ ಕೇಂದ್ರಕ್ಕೆ ರವಾನಿಸಲಾಗಿದೆ.