ಜಿಲ್ಲೆಗಳು

ಕಾಡಾನೆ ದಾಳಿಗೆ ಮಹಿಳೆ ಬಲಿ

ಸಿದ್ದಾಪುರ: ಕಾಡಾನೆ ದಾಳಿಗೆ ಮಹಿಳೆಯೊಬ್ಬರು ಬಲಿಯಾದ ಘಟನೆ ವಿರಾಜಪೇಟೆ ತಾಲ್ಲೂಕಿನ ಅಮ್ಮತ್ತಿ ಸಮೀಪದ ಹೊಸೂರುವಿನಲ್ಲಿ ನಡೆದಿದೆ.

ಹೊಸೂರು ನಿವಾಸಿ ಬೇಬಿ(55) ಮೃತ ಮಹಿಳೆ. ನಿನ್ನೆ ( ಜನವರಿ 24 ) ಸಂಜೆ ವೇಳೆ ದಿನಸಿ ಸಾಮಾಗ್ರಿಗಳನ್ನು ಖರೀದಿಸಿ‌ ಮನೆಗೆ ಹಿಂತಿರುಗುವ ಸಂದರ್ಭದಲ್ಲಿ ಕಾಡಾನೆ ದಾಳಿ ಮಾಡಿದ ಪರಿಣಾಮ ಬೇಬಿ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ಕಾಡಾನೆ ಹಾವಳಿ ತಡೆಗಟ್ಟಲು ವಿಫಲವಾಗಿರುವ ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಶಾಸಕ ಎ.ಎಸ್. ಪೊನ್ನಣ್ಣ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸಿದ್ದಾಪುರ ಸಮುದಾಯ ಆರೋಗ್ಯ ಕೇಂದ್ರಕ್ಕೆ ರವಾನಿಸಲಾಗಿದೆ.

andolana

Recent Posts

ಹಸಿರುಕ್ರಾಂತಿ ಹರಿಕಾರ ಡಾ.ಬಾಬು ಜಗಜೀವನರಾಮ್

ಎಚ್.ಹಾಲಪ್ಪ ಸಮಾನತೆ ಇಲ್ಲದೆ ಪ್ರಜಾಪ್ರಭುತ್ವ ಅಪೂರ್ಣ ಎಂದು ನಂಬಿದ್ದ ತಮ್ಮ ಕಾರ್ಯಪ್ರವೃತ್ತಿಯಿಂದ ಸಮಾಜದಲ್ಲಿ ಸಮಾನತೆಯನ್ನು ಜೀವಂತಗೊಳಿಸಿದ ದೇಶದಾದ್ಯಂತ ಬಾಬೂಜಿ ಎಂದೇ…

6 mins ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ಕರ್ನಾಟಕ, ಮಹಾರಾಷ್ಟ್ರದಲ್ಲಿ ಮತ್ತೆ ಹಿಂದಿ ವಿವಾದ

ಹಿಂದಿ ಭಾಷೆಯ ಪ್ರಶ್ನೆ ಮತ್ತೆ ವಿವಾದವನ್ನು ಉಂಟು ಮಾಡಿದೆ. ತನ್ನ ಮಾತೃ ಭಾಷೆಯಲ್ಲದ ಮತ್ತು ಉತ್ತರ ಭಾರತದ ರಾಜ್ಯಗಳ ಮಾತೃ…

12 mins ago

ಕಾಫಿ ಉದ್ಯಮದ ಮೇಲೆ ಮಧ್ಯಪ್ರಾಚ್ಯ ಯುದ್ಧದ ಎಫೆಕ್..!

ನವೀನ್ ಡಿಸೋಜ ಶಿಪ್‌ಮೆಂಟ್ ವಿಳಂಬ, ಕಂಟೇನರ್ ಕೊರತೆ, ಹಡಗುಗಳ ಅಭಾವ, ಇಂಧನ ಅನಿಶ್ಚಿತತೆ ಕಾಫಿ ಉತ್ಪಾದನಾ ವಲಯದಲ್ಲಿ ಗೊಂದಲದ ವಾತಾವರಣ …

17 mins ago

ಭೂತ್ ಜೋಲೋಕಿಯಾ: ಖಾರ ಎನ್ನಬೇಕೋ ಇಲ್ಲಾ ಬೆಂಕಿಯ ಬಾಣ ಎನ್ನಬೇಕೋ

ನಂದಿನಿ ಎನ್. ಹತ್ತು ಜನರಿಗಾಗುವಷ್ಟು ಅಡುಗೆಗೆ ಕೇವಲ ೨ ಮೆಣಸಿನ ಕಾಯಿ ಸಾಕು ಎಂದರೆ ನಂಬುತ್ತೀರಾ!? ನಾಗಾಲ್ಯಾಂಡ್ ಪ್ರವಾಸದಲ್ಲಿ ಅಲ್ಲಿನ…

21 mins ago

ಬಿಕೋ ಎನ್ನುತ್ತಿರುವ ದುಬಾಯಿ ಬೀದಿಗಳು, ಭವಿಷ್ಯದ ಕಳವಳದಲ್ಲಿ ಅನಿವಾಸಿ ಭಾರತೀಯರು

ತಾಜ್ ಗಡಿನಾಡು ಇರಾನ್ ಮೇಲೆ ಫೆಬ್ರವರಿ ಅಂತ್ಯಕ್ಕೆ ಆರಂಭಗೊಂಡ ಅಮೆರಿಕ-ಇಸ್ರೇಲ್ ದೇಶಗಳ ಜಂಟಿ ಯುದ್ಧ ತಿಂಗಳು ಕಳೆದರೂ ಇನ್ನೂ ಅಂತ್ಯಗೊಂಡಿಲ್ಲ.…

25 mins ago

ಅನೈತಿಕ ಚಟುವಟಿಕೆಗಳ ತಾಣವಾದ ಬಾಬೂಜಿ ಭವನ

ಮಂಜು ಕೋಟೆ ಕೋಟೆ: ೧೦ ವರ್ಷಗಳಿಂದ ಬಳಕೆಗೆ ಬಾರದ ಕಟ್ಟಡ; ಮತ್ತೊಂದು ಕಾಮಗಾರಿಯೂ ನನೆಗುದಿಗೆ  ಎಚ್.ಡಿ.ಕೋಟೆ: ಪಟ್ಟಣದ ಹೃದಯ ಭಾಗದಲ್ಲಿ…

31 mins ago