ಜಿಲ್ಲೆಗಳು

ಗಂಡನ ಜೊತೆ ಸೇರಿ ತಾಯಿಯನ್ನೇ ಕೊಲೆಗೈದಳಾ ಮಗಳು?

ಗಂಡನ ಜತೆ ಸೇರಿ ತಾಯಿಯನ್ನೇ ಕೊಲೆ ಮಾಡಿ ರಾತ್ರೋರಾತ್ರಿ ಶವ ಹೂತಿಟ್ಟ ಘಟನೆ ಮಂಡ್ಯ ಜಿಲ್ಲೆಯ ಹೆಬ್ಬಕವಾಡಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಶಾರದಮ್ಮ(50) ಮೃತ ಮಹಿಳೆ. ಶಾರದಮ್ಮ ತಮ್ಮ ಮಗಳು ಅನುಷಾಳನ್ನು ಮೈಸೂರಿನ ಹಾರೋಹಳ್ಳಿಯ ದೇವರಾಜ್‌ ಎಂಬಾತನಿಗೆ ಮದುವೆ ಮಾಡಿದ್ದರು.

ಒಬ್ಬಳೇ ಮಗಳಾದ ಕಾರಣ ಶಾರದಮ್ಮ ಆಗಾಗ ಅಳಿಯನ ಮನೆಗೆ ತೆರಳಿ ಮಗಳ ಯೋಗಕ್ಷೇಮ ವಿಚಾರಿಸಿಕೊಂಡು ಬರುತ್ತಿದ್ದರು. ಹೀಗೆ ನವೆಂಬರ್‌ 2022ರಲ್ಲಿ ಮಗಳ ಮನೆಗೆ ತೆರಳಿದ್ದ ಶಾರದಮ್ಮ ಜಗಳದಲ್ಲಿ ಸಾವನ್ನಪ್ಪಿದ್ದಾರೆ. ತಾಯಿ ಹಾಗೂ ಮಗಳ ನಡುವಿನ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಹೀಗೆ ಹಾರೋಹಳ್ಳಿಯಲ್ಲಿ ಸತ್ತ ತಾಯಿಯನ್ನು ಅನುಷಾ ಹಾಗೂ ದೇವರಾಜ್‌ ಹಾರೋಹಳ್ಳಿಯಿಂದ ಹೆಬ್ಬಕವಾಡಿಗೆ ತಂದು ಗುಟ್ಟಾಗಿ ಹೂತುಹಾಕಿದ್ದಾರೆ.

ಬಳಿಕ ಆರೇಳು ತಿಂಗಳು ಸುಮ್ಮನಿದ್ದ ಮಗಳು 2023ರ ಜೂನ್‌ ತಿಂಗಳಿನಲ್ಲಿ ತನ್ನ ತಾಯಿ ಕಾಣೆಯಾಗಿರುವುದರ ಬಗ್ಗೆ ವರುಣಾ ಪೊಲೀಸ್‌ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದಾಳೆ. ಇಷ್ಟು ದಿನಗಳ ಕಾಲ ಹುಡುಕಿದರೂ ಪ್ರಯೋಜನೆಯಾಗದ ಹಿನ್ನೆಲೆಯಲ್ಲಿ ಪೊಲೀಸರು ಅನುಮಾನಗೊಂಡು ಮಗಳು ಹಾಗೂ ಅಳಿಯನನ್ನು ವಿಚಾರಣೆ ನಡೆಸಿದಾಗ ನಡೆದ ಘಟನೆ ಬೆಳಕಿಗೆ ಬಂದಿದೆ. ನಂತರ ಪ್ರಕರಣವನ್ನು ಮಂಡ್ಯ ಗ್ರಾಮಾಂತರ ಠಾಣೆಗೆ ವರ್ಗಾವಣೆಯಾಗಿದ್ದು, ಆರೋಪಿಗಳು ಶವ ಹೂತಿಟ್ಟ ಜಾಗವನ್ನು ತೋರಿಸಿದ್ದು ಮೃತದೇಹಕ್ಕಾಗಿ ಶೋಧ ಕಾರ್ಯ ಆರಂಭಗೊಂಡಿದೆ.

andolana

Recent Posts

ಕಾರ್ಕಹಳ್ಳಿ ಬಸವೇಶ್ವರ ಜಾತ್ರೆ: ಇಂದು ಕೊಂಡೋತ್ಸವ

ಅಣ್ಣೂರು ಸತೀಶ್ ನಾಳೆ ಸಂಜೆ ವಿಜೃಂಭಣೆಯ ರಥೋತ್ಸವ,ಅನ್ನಸಂತರ್ಪಣೆ  ಭಾರತೀನಗರ: ಕಾರ್ಕಹಳ್ಳಿ ಶ್ರೀ ಬಸವೇಶ್ವರ ಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ಮಾ.೩ರ…

20 mins ago

‘ಮಕ್ಕಳ ವ್ಯಕ್ತಿತ್ವ ವಿಕಸನಕ್ಕಾಗಿ ಶಾಲೆಗಳಲ್ಲಿ ರಂಗಶಿಕ್ಷಣ ನೀಡಿ’

ಗಿರೀಶ್ ಹುಣಸೂರು ಕೆಪಿಎಸ್, ಪಿಎಂಶ್ರೀ ಶಾಲೆಗಳಲ್ಲಿ ರಂಗಶಿಕ್ಷಕರ ನೇಮಕಕ್ಕೆ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಶಿಫಾರಸು ಮೈಸೂರು: ಇಂದಿನ ಮಕ್ಕಳಲ್ಲಿ…

25 mins ago

1000 ಕೋಟಿ ರೂ. ಸಂಪನ್ಮೂಲ ಕ್ರೋಢೀಕರಣಕ್ಕೆ ಎಂಡಿಎ ಪ್ಲಾನ್!

ಕೆ.ಬಿ.ರಮೇಶನಾಯಕ ಮೈಸೂರು: ಹಲವು ಅವ್ಯವಹಾರಗಳಿಂದಾಗಿ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಟೀಕೆಗೆ ಗುರಿ ಯಾಗಿದ್ದ ಹಿಂದಿನ ಮುಡಾ, ಎಂಡಿಎ ಆಗಿ ಪರಿವರ್ತನೆಯಾದ…

29 mins ago

ಮಾನವತೆಯ ಸಂದೇಶ ಸಾರಿದ ಯತೀಂದ್ರ

ಡಾ.ಎಸ್‌. ಕೃಷ್ಣಪ್ಪ ಕಿತ್ತೂರು  ಇಂದು ಕೈವಾರ ತಾತಯ್ಯ ಅವರ ಜಯಂತಿ ‘ಉತ್ತಮ ಕುಲವೆಂದು ಹೇಳುವ ಮಾತು ಯುಕ್ತವಲ್ಲಣ್ಣ’... ೧೮ನೇ ಶತಮಾ…

34 mins ago

ಪ್ರಮುಖ ತಂತ್ರಜ್ಞಾನ ಸ್ಟಾರ್ಟ್ ಅಪ್‌ಗಳ ಹೋರಾಟ

ವಿಶ್ವಪ್ರಸಾದ್ ಆಳ್ವ ಒಂದೆರಡು ವರ್ಷಗಳ ಹಿಂದೆ ದೇಶದ ಹಣಕಾಸು ಸಚಿವರು ಮೂಲ ತಂತ್ರಜ್ಞಾನ ಹಾಗೂ ಸಂಶೋಧನೆ ಮತ್ತು ಅಭಿವೃದ್ಧಿ (ಆರ್…

39 mins ago

ಇರಾನ್ ಸಂಘರ್ಷದ ಪೂರ್ವಾಪರ

ಪ್ರೊ.ಪ್ರೇಮ ಶೇಖರ ಒಂದೂವರೆ ತಿಂಗಳಿನಿಂದ ಜಗತ್ತು ಆತಂಕದಿಂದ ಎದುರು ನೋಡುತ್ತಿದ್ದಂತಹ ಯುದ್ಧ ಪಶ್ಚಿಮ ಏಷ್ಯಾದಲ್ಲಿ ಪ್ರಾರಂಭವಾಗಿದೆ. ಜನವರಿ ಮೊದಲ ಭಾಗದಲ್ಲಿ…

43 mins ago