Mysore
17
clear sky

Social Media

ಶುಕ್ರವಾರ, 16 ಜನವರಿ 2026
Light
Dark

ಮಹಿಳಾ ಮತ್ತು ಮಕ್ಕಳ ದಸರಾ ಸಭೆ

ಮೈಸೂರು: ಮಹಿಳಾ ಮತ್ತು ಮಕ್ಕಳ ದಸರಾ ಉಪಸಮಿತಿ ಸಭೆಯು ಅಧ್ಯಕ್ಷರಾದ ಸುನಂದ ರಾಜ್ ಅಧ್ಯಕ್ಷತೆಯಲ್ಲಿ ಜಿಪಂ ಸಭಾಂಗಣದಲ್ಲಿ ನಡೆಸಲಾಯಿತು.

ಸೆ.೨೭ರಿಂದ ಅ.೧ರವರೆಗೆ ಜೆ.ಕೆ. ಮೈದಾನದಲ್ಲಿ ನಡೆಯುವ ಮಹಿಳಾ ದಸರಾ ಹಾಗೂ ಸೆ.೨೯ ಮತ್ತು ಸೆ.೩೦ರವರೆಗೆ ಜಗನ್ಮೋಹನ ಅರಮನೆಯಲ್ಲಿ ನಡೆಯುವ ಮಕ್ಕಳ ದಸರಾ ಕಾರ್ಯಕ್ರಮದ ರೂಪರೇಷೆಗಳ ಬಗ್ಗೆ ಸಭೆಯಲ್ಲಿ ಚರ್ಚಿಸಿ ಕಾರ್ಯಕ್ರಮ ಯಶಸ್ವಿಗೊಳಿಸಲು ಸಹಕರಿಸುವಂತೆ ಕೋರಲಾಯಿತು.
ಸಮಿತಿಯ ಉಪಾಧ್ಯಕ್ಷರಾದ ಹೇಮಾ ನಂದೀಶ್, ಮಂಜುಳ ಶಿವರಾಮೇಗೌಡ, ಮಮತಾ ಶಿವಪ್ರಸಾದ್, ಸದಸ್ಯರಾದ ರಾಘವೇಂದ್ರ, ಜಿಪಂ ಉಪ ಕಾರ್ಯದರ್ಶಿ ಎಚ್.ಎನ್.ಪ್ರೇಮ್‌ಕುಮಾರ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಬಿ.ಬಸವರಾಜ್, ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಬಿ.ಎಸ್.ರಾಮಚಂದ್ರರಾಜೇ ಅರಸ್, ಸಮಿತಿಯ ನೋಡೆಲ್ ಅಧಿಕಾರಿಗಳಾದ ರಾಜಶೇಖರ, ಡಿ.ಉದಯಕುಮಾರ್ ಹಾಜರಿದ್ದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!