ಜಿಲ್ಲೆಗಳು

work from home ಭರವಸೆ; ಮಹಿಳೆಗೆ 2.75 ಲಕ್ಷ ರೂ.ವಂಚನೆ

ಮೈಸೂರು: ಮಹಿಳೆಯೊಬ್ಬರು ವರ್ಕ್ ಫ್ರಮ್ ಹೋಮ್ ಕೆಲಸಕ್ಕೆ ಹಣ ಹೂಡಿಕೆ ಮಾಡಿ 2.75 ಲಕ್ಷ ರೂ. ಕಳೆದುಕೊಂಡಿದ್ದಾರೆ.

ಕುವೆಂಪು ನಗರದ ಸ್ಮಿತಾ ಶರ್ಮ ಎಂಬವರೇ ಹಣವನ್ನು ಕಳೆದುಕೊಂಡವರು. ಇವರು ಇನ್ ಸ್ಟಾ ಗ್ರಾಂನಲ್ಲಿ ವರ್ಕ್ ಫ್ರಮ್ ಹೋಮ್ ಎಂಬ ಲಿಂಕ್ ಮೇಲೆ ಕ್ಲಿಕ್ ಮಾಡಿದ್ದು, ಈ ಸಂಬಂಧ ವಾಟ್ಸ್ ಆ್ಯಪ್‌ಗೆ ಮೆಸೇಜ್ ಬಂದಿದೆ. ಕಮಿಷನ್ ಬೇಸ್ಡ್ ಕೆಲಸ ಎಂದು ತಿಳಿಸಿ, ಮೊದಲು ಹಣವನ್ನು ಹೂಡಿಕೆ ಮಾಡಿ ಪ್ರಾಡಕ್ಟ್ ಖರೀದಿಸಿದರೆ ನಿಮ್ಮ ಹಣದೊಂದಿಗೆ ಲಾಭದ ಹಣವನ್ನು ಪಡೆಯಬಹುದು ಎಂದು ತಿಳಿಸಿದ್ದು, ಇದನ್ನು ನಂಬಿ ಸ್ಮಿತಾ ಅವರು ೨,೭೫,೭೧೭ ರೂ. ಹಣವನ್ನು ಹೂಡಿಕೆ ಮಾಡಿದ್ದು, ಇತ್ತ ಲಾಭದ ಹಣವನ್ನೂ ನೀಡದೆ, ಹೂಡಿಕೆ ಮಾಡಿದ ಹಣವನ್ನೂ ಹಿಂತಿರುಗಿಸದೆ ಮೋಸ ಮಾಡಲಾಗಿದೆ. ಈ ಸಂಬಂಧ ನಗರದ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

andolanait

Recent Posts

ಎಲ್‌ಪಿಜಿ ಸಿಲಿಂಡರ್‌ ಸಿಗುತ್ತದೆ, ಜನರಲ್ಲಿ ಭೀತಿ ಬೇಡ : ಕೇಂದ್ರ

ಹೊಸದಿಲ್ಲಿ : ಮಧ್ಯಪ್ರಾಚ್ಯದ ಸಂಘರ್ಷದಿಂದ ಉಂಟಾಗಿರುವ ಎಲ್‌ಪಿಜಿ ಸಿಲಿಂಡರ್ ಕೊರತೆ ಬಗ್ಗೆ ಸಾರ್ವಜನಿಕರಲ್ಲಿ ಉದಿಸಿದ ಆತಂಕದ ನಡುವೆ, ಕೇಂದ್ರ ಸರ್ಕಾರವು…

9 hours ago

IPL 2026 | ಮಾ.28ರಿಂದ ಪಂದ್ಯ ಆರಂಭ, ಬೆಂಗಳೂರಿನಲ್ಲಿ ಉದ್ಘಾಟನೆ, ಹೀಗಿದೆ ವೇಳಾಪಟ್ಟಿ

ಬೆಂಗಳೂರು : ಬಹುನಿರೀಕ್ಷಿತ 2026ನೇ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟಿ-20 ಕ್ರಿಕೆಟ್ ಟೂರ್ನಿಯ ಮೊದಲ ಹಂತದ ವೇಳಾಪಟ್ಟಿಯನ್ನು…

9 hours ago

“ಸಂಶೋಧನೆಗೆ AI ನಿಂದಲ್ಲ, ಸ್ವಂತಿಕೆಯಿಂದ ಕೂಡಿರಲಿ” : ಕುಲಪತಿ ಶರಣಪ್ಪ ಹಲಸೆ ಸಲಹೆ

ಮೈಸೂರು : ಸಂಶೋಧನೆ ಮಾಡುವಾಗ ವಿದ್ಯಾರ್ಥಿಗಳು ತಮ್ಮ ಸಂಪೂರ್ಣ ಪರಿಶ್ರಮದಿಂದ ಸಂಶೋಧನೆಗಳನ್ನು ಸಿದ್ಧಪಡಿಸಬೇಕು, AI ತಂತ್ರಜ್ಞಾನದ ಕಡೆ ಮೊರೆಹೋಗುವುದನ್ನು ಕಡಿಮೆ…

9 hours ago

ಖಾತೆ ಮಾಡಿಕೊಡದ ಅಧಿಕಾರಿಗಳು : ರೈತನಿಂದ ವಿಷ ಸೇವನೆ ಯತ್ನ

ಸಾಲಿಗ್ರಾಮ : ತನ್ನ ಜಮೀನಿಗೆ ಸಂಬಂಧಿಸಿದ ಖಾತೆಯನ್ನು ಮಾಡಿಕೊಡದೆ ಸಾಲಿಗ್ರಾಮ ನಾಡಕಚೇರಿ ಅವರು ಸತಾಯಿಸುತ್ತಿದ್ದಾರೆ ಎಂದು ಮನನೊಂದು ಸಾಲಿಗ್ರಾಮದ ನಾಡ…

9 hours ago

ಹಡುಗುಗಳ ಮೇಲೆ ದಾಳಿ : ಇಬ್ಬರು ಭಾರತೀಯರ ಸಾವು

ಹೊಸದಿಲ್ಲಿ : ಪಶ್ಚಿಮ ಏಷ್ಯಾದ ಸಂಘರ್ಷ ಪೀಡಿತ ಸಮುದ್ರ ವಲಯದಲ್ಲಿ ವ್ಯಾಪಾರಿ ಹಡಗುಗಳ ಮೇಲೆ ನಡೆದ ದಾಳಿಯಲ್ಲಿ ಇಬ್ಬರು ಭಾರತೀಯರು…

10 hours ago

ಗುಂಡ್ಲುಪೇಟೆ | ಕತ್ತು ಕೂಯ್ದು ವ್ಯಕ್ತಿಯ ಬರ್ಬರ ಹತ್ಯೆ

ಗುಂಡ್ಲುಪೇಟೆ : ಪಟ್ಟಣದ ಹೊರವಲಯದ ವಿಜಯಪುರ ಅಮಾನಿ ಕೆರೆಯ ಬಳಿ ವ್ಯಕ್ತಿಯೊಬ್ಬ ಬರ್ಬರವಾಗಿ ಕೊಲೆಯಾಗಿರುವ ಘಟನೆ ನಡೆದಿದೆ. ತಾಲ್ಲೂಕಿನ ಮೂಖಹಳ್ಳಿ…

10 hours ago