Mysore
24
broken clouds

Social Media

ಸೋಮವಾರ, 23 ಫೆಬ್ರವರಿ 2026
Light
Dark

ಜನ ಧ್ವನಿ ಬಿ ವೆಂಕಟೇಶ್ ನೇತೃತ್ವದಲ್ಲಿ ಇತರೆ ಪಕ್ಷಗಳ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ

ಹನೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ ಹಾಗೂ ರಾಜ್ಯದ ಬಿಜೆಪಿ ಸರ್ಕಾರದ ಅಭಿವೃದ್ಧಿ ಕಾರ್ಯಕ್ರಮಗಳನ್ನು ಮೆಚ್ಚಿ, ಬಿಜೆಪಿ ಸೇರ್ಪಡೆಯಾಗುತ್ತಿರುವುದು ಸಂತಸದ ವಿಚಾರ ಎಂದು ಹಿಂದುಳಿದ ವರ್ಗಗಳ ಕಾರ್ಯಕಾರಿಣಿ ಸದಸ್ಯ ಜನಧ್ವನಿ ಬಿ ವೆಂಕಟೇಶ್ ತಿಳಿಸಿದರು.

ತಾಲೂಕಿನ ಶಾಗ್ಯ ಗ್ರಾಮದ ಆದಿ ಜಾಂಬವ ಬಡಾವಣೆಯಲ್ಲಿ ಡಾ. ಬಾಬು ಜಗಜೀವನ್ ರಾಮ್ ಪುತ್ತಳಿ ಶಿಲಾನ್ಯಾಸ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಪ್ರಧಾನ ಮಂತ್ರಿ ನರೇಂದ್ರ ಮೋದಿ ರವರು ಬಡವರು, ರೈತರು,ರಸ್ತೆ ಬದಿ ವ್ಯಾಪಾರಿಗಳು ಸೇರಿದಂತೆ ಎಲ್ಲ ವರ್ಗದವರಿಗೂ ಅನುಕೂಲವಾಗುವ ನಿಟ್ಟಿನಲ್ಲಿ ಹಲವು ಜನಪರ ಅಭಿವೃದ್ಧಿ ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದಾರೆ.ರಾಜ್ಯದಲ್ಲಿ ಯಡಿಯೂರಪ್ಪ ಹಾಗೂ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ರವರ ಜನಪರ ಕಾರ್ಯಕ್ರಮಗಳನ್ನು ಮೆಚ್ಚಿ ಕ್ಷೇತ್ರದ ವಿವಿಧ ಪಕ್ಷಗಳ ಕಾರ್ಯಕರ್ತರು ಬಿಜೆಪಿ ಸೇರ್ಪಡೆಯಾಗುತ್ತಿದ್ದಾರೆ. ಈ ಬಾರಿ ಹನೂರು ಕ್ಷೇತ್ರದಲ್ಲಿ ಕಮಲ ಅರಳಿಸುವುದೇ ನನ್ನ ಗುರಿ ಎಂದು ತಿಳಿಸಿದರು.

ಈ ವೇಳೆ ಕಾಂಗ್ರೆಸ್ ಹಾಗೂ ಜೆಡಿಎಸ್ ಮುಖಂಡರುಗಳು ಪಕ್ಷ ತೊರೆದು ಬಿಜೆಪಿ ಸೇರ್ಪಡೆಗೊಂಡರು.

ಈ ಸಂದರ್ಭದಲ್ಲಿ ಮುಖಂಡರುಗಳಾದ ಮಾದಪ್ಪ ಪುಟ್ಟಪ್ಪ, ಮಾದೇವ, ಶೇಖರ್, ಚಿಕ್ಕಲಿಂಗೇಗೌಡ, ಚಿಕ್ಕರಾಯಪ್ಪ, ಮರಿಗೌಡ್ರು, ಮಾದಯ್ಯ, ಕೆಂಡರಾಜು ನಂಜಪ್ಪ, ಸಿದ್ದಪ್ಪ ಹಾಜರಿದ್ದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!