ಮೈಸೂರು : .(ಕರ್ನಾಟಕ ವಾರ್ತೆ):- ೨೦೨೨-೨೩ ಸಾಲಿಗೆ ಸಹಕಾರಿಗಳಿಗಾಗಿ yಶಸ್ವಿನಿ ಸಹಕಾರ ರೈತರ ಆರೋಗ್ಯ ರಕ್ಷಣ ಯೋಜನೆಯನ್ನು ರಾಜ್ಯದಲ್ಲಿ ಮರು ಜಾರಿಗೊಳಿಸಿ ಆದೇಶಿಸಿರುತ್ತದೆ. ಈ ಯೋಜನೆಯ ಬಗ್ಗೆ ಮಾರ್ಗಸೂಚಿಗಳನ್ನು ನೀಡಲಾಗಿದ್ದು, ಮಾರ್ಗಸೂಚಿಯಲ್ಲಿ ತಿಸಿರುವಂತೆ ಸದರಿ ಯೋಜನೆಯಡಿ ೧೬೫೦ ಖಾಯಿಲೆಗಳಿಗೆ ಶಸ್ತ್ರ ಚಿಕಿತ್ಸೆಗಳನ್ನು ಒಳಗೊಂಡಂತೆ ಚಿಕಿತ್ಸೆ ನೀಡಲಾಗುತ್ತದೆ. ಈ ಹಿಂದೆ ಯಶಸ್ವಿನಿ ಯೋಜನೆಯಲ್ಲಿ ನೊಂದಾಯಿಸಿದ ನೆಟ್‌ವರ್ಕ್ ಆಸ್ಪತ್ರೆಗಳನ್ನೇ ಮುಂದುವರೆಸಲಾಗಿರುತ್ತದೆ.
ಮೈಸೂರು ಜಿಲ್ಲೆಯ ಸಹಕಾರ ಸಂಘಗಳಲ್ಲಿ ಸದಸ್ಯರಾಗಿರುವ ೦೪ ಸದಸ್ಯರ ಕುಟುಂಬದ ನಗರ ಪ್ರದೇಶಕ್ಕೆ ರೂ.೧೦೦೦/- ಗಳ ವಂತಿಗೆ ಮತ್ತು ಗ್ರಾಮೀಣ/ ಸ್ವಸಹಾಯ ಗುಂಪುಗಳಿಗೆ ರೂ.೫೦೦/- ಗಳ ವಂತಿಗೆಯನ್ನು ಪಾವತಿಸುವುದು, ಪ್ರತಿ ಹೆಚ್ಚುವರಿ ಸದಸ್ಯರಿಗೆ ಶೇ.೨೦ ಅಂದರೆ ರೂ.೧೦೦/- ಗಳನ್ನು ಪಾವತಿಸಿ ಯೋಜನೆಯ ಸದುಪಯೋಗಪಡಿಸಿಕೊಳ್ಳುವಂತೆ ಕೋರಿದೆ. ಸಹಕಾರಿಗಳು ಸಂಘಕ್ಕೆ ಭೇಟಿ ನೀಡಿ ತಮ್ಮ ಕುಟುಂಬದ ಸದಸ್ಯರ ಆಧಾರ ಕಾರ್ಡ್, ಪಡಿತರ ಕಾರ್ಡು ಮತ್ತು ಭಾವಚಿತ್ರಗಳನ್ನು ಕಾರ್ಯದರ್ಶಿಗಳಿಗೆ ನೀಡಿ ನೊಂದಣಿ ಮಾಡಿಸಿಕೊಳ್ಳಬಹುದು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: ೦೮೨೧-೨೫೨೧೯೫೬ ಮತ್ತು ೦೮೨೧-೨೪೪೩೩೨೧ ನ್ನು ಸಂಪರ್ಕಿಸಿ ಎಂದು ಮೈಸೂರು ಜಿಲ್ಲೆಯ ಸಹಕಾರ ಸಂಘಗಳ ಉಪನಿಬಂಧಕರಾದ ಜಿ.ಆರ್.ವಿಜಯ್ ಕುಮಾರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಡಿಕೇರಿ: ಪಾಂಡಂಡ ಕುಟ್ಟಪ್ಪ ಅವರ ಕನಸಿನ ಕೂಸಾದ ಕೊಡವ ಕೌಟುಂಬಿಕ ಹಾಕಿ ಉತ್ಸವದ ಬೆಳ್ಳಿ ಮಹೋತ್ಸವವನ್ನು ಆಚರಿಸಿಕೊಂಡ ಹಿನ್ನೆಲೆಯಲ್ಲಿ ಕೊಡವ…
ಗಿರೀಶ್ ಹುಣಸೂರು ೨೦೨೫ನೇ ಸಾಲಿನಲ್ಲಿ ದೇಶ, ರಾಜ್ಯದಲ್ಲಿ ಹಲವು ದಾಖಲೆಗಳಿಗೆ ಸಾಕ್ಷಿಯಾಗಿದೆ. ಭಾರತ ಮೂಲದ ಶುಭಾಂಶು ಶುಕ್ಲಾ ಬಾಹ್ಯಾಕಾಶದಲ್ಲಿ ೧೮…
ಕೆ.ಬಿ.ರಮೇಶನಾಯಕ ಮೈಸೂರು: ಮಾನವ-ವನ್ಯಜೀವಿಗಳ ಸಂಘರ್ಷವನ್ನು ತಡೆಯಲು ಬಂಡೀಪುರ, ನಾಗರ ಹೊಳೆ ಅಭಯಾರಣ್ಯ ಪ್ರದೇಶದಲ್ಲಿ ಸಫಾರಿಗೆ ನಿರ್ಬಂಧ ವಿಧಿಸಿರುವುದರ ನಡುವೆಯೂ ಕ್ರಿಸ್ಮಸ್,…
ಮೈಸೂರು : ಮೈಸೂರು ಅರಮನೆ ಮುಂಭಾಗ ನಿನ್ನೆ ಸಂಜೆ ನಡೆದಿದ್ದ ಹೀಲಿಯಂ ಸ್ಫೋಟ ಪ್ರಕರಣದಲ್ಲಿ ಸಾವಿನ ಸಂಖ್ಯೆ ಇದೀಗ ಮೂರಕ್ಕೆ…
ಮೈಸೂರು : ಹುಬ್ಬಳ್ಳಿಯಲ್ಲಿ ನಡೆದ ಮರ್ಯಾದಗೇಡು ಹತ್ಯೆ ವಿರೋಧಿಸಿ ಮತ್ತು ಮರ್ಯಾದೆಗೇಡು ಹತ್ಯೆ ತಡೆಗೆ ಕಠಿಣ ಕಾಯಿದೆ ರೂಪಿಸಬೇಕು ಎಂದು…
ಮೈಸೂರು : ಇಲ್ಲಿನ ಕೆ.ಆರ್. ಆಸ್ಪತ್ರೆಯ ಶೆಡ್ ನಲ್ಲಿ ಬೆಂಕಿ ಕಾಣಿಸಿಕೊಂಡು ಆಸ್ಪತ್ರೆಯ ಹಾಸಿಗೆಗಳು ಬೆಂಕಿಗಾಹುತಿಯಾಗಿವೆ. ಆಸ್ಪತ್ರೆಯ ಚೆಲುವಾಂಬ ವಾರ್ಡ್…