ಮೈಸೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಿರಿಯ ಸಹೋದರ ರಾಮೇಗೌಡ ಅವರ ಅಂತ್ಯಕ್ರಿಯೆಯು ಶನಿವಾರ ಸಿದ್ದರಾಮನಹುಂಡಿ ಪಕ್ಕದ ಹೊಸಹಳ್ಳಿ ಬಳಿ ಇರುವ ಜಮೀನಿನಲ್ಲಿ ನೆರವೇರಿತು. ಸಿದ್ದರಾಮಯ್ಯ ಅವರ ತಂದೆ, ತಾಯಿ, ಅಣ್ಣನ ಸಮಾಧಿ ಬಳಿಯೇ ಕಿರಿಯ ತಮ್ಮನ ಪಾರ್ಥೀವ ಶರೀರವನ್ನು ಮಣ್ಣು ಮಾಡಲಾಯಿತು.
ತೀವ್ರ ಅನಾರೋಗ್ಯದಿಂದ ರಾಮೇಗೌಡ ಶುಕ್ರವಾರ ರಾತ್ರಿ ಮೃತಪಟ್ಟಿದ್ದರು. ಬೆಳಿಗ್ಗೆಯೇ ಬೆಂಗಳೂರಿನಿಂದ ಹೊರಟು ಸಿದ್ದರಾಮನಹುಂಡಿಗೆ ಬಂದ ಮಾಜಿ ಸಿಎಂ ಸಿದ್ದರಾಮಯ್ಯ, ಪುತ್ರ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಪಾರ್ಥೀವ ಶರೀರದ ದರ್ಶನ ಪಡೆದರು. ಬಳಿಕ ಚಿಕ್ಕಪ್ಪನ ಪಾರ್ಥೀವ ಶರೀರಕ್ಕೆ ಹೆಗಲು ಕೊಟ್ಟ ಶಾಸಕ ಡಾ. ಯತೀಂದ್ರ ಭಾವುಕರಾದರು. ಚಿಕ್ಕಪ್ಪನ ಪಾರ್ಥಿವ ಶರೀರಕ್ಕೆ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಹೆಗಲು ನೀಡಿದರು.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…