ಸೋಮವಾರಪೇಟೆ: ಕರ್ತವ್ಯದಲ್ಲಿದ್ದ ಸಂದರ್ಭವೇ ಉತ್ತರಾಖಂಡ್‌ನ ಜೋಷಿಮಟ್‌ನಲ್ಲಿ ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟ ತಾಕೇರಿ ಗ್ರಾಮದ ಯೋಧ ನಾಪಂಡ ಸಿ. ಮಹೇಶ್(೪೬) ಅವರ ಅಂತ್ಯಕ್ರಿಯೆಯನ್ನು ಹುಟ್ಟೂರಿನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಸಲಾಯಿತು.
ಕಿರಗಂದೂರು ಸರ್ಕಾರಿ ಮಾದರಿ ಪ್ರಾಥಮಿಕ ಶಾಲಾ ಆವರಣದಲ್ಲಿ ಸಾರ್ವಜನಿಕರ ದರ್ಶನಕ್ಕೆ ಇಟ್ಟು ಸಕಲ ಸರ್ಕಾರಿ ಗೌರವಗಳನ್ನು ಸಲ್ಲಿಸಲಾಯಿತು. ನಂತರ ಮೆರವಣಿಗೆ ಮೂಲಕ ಸ್ವಗ್ರಾಮಕ್ಕೆ ಕೊಂಡೊಯ್ದು, ಅಂತ್ಯಕ್ರಿಯೆ ನೆರವೇರಿಸಲಾಯಿತು.
ಕುಟುಂಬಸ್ಥರು, ಸುತ್ತಮುತ್ತಲ ಗ್ರಾಮಸ್ಥರು, ಮಾಜೀ ಸೈನಿಕರು, ಹಿತೈಷಿಗಳು ಆಗಮಿಸಿ ಅಂತಿಮ ನಮನ ಸಲ್ಲಿಸಿದರು. ಉತ್ತರಾಖಂಡ್‌ನ ಜೋಷಿಮಟ್‌ನಿಂದ ಆಗಮಿಸಿದ್ದ ಸುಬೇದಾರ್ ವಿ. ಮಣಿ, ಹವಾಲ್ದಾರ್ ಪ್ರಸಾದ್, ನಾಯಕ್ ಟಿ.ಆರ್. ರಾಹುಲ್ ಅವರುಗಳು ರಾಷ್ಟ್ರಧ್ವಜವನ್ನು ಶವಪೆಟ್ಟಿಗೆಯ ಮೇಲಿರಿಸಿ ನಮನ ಸಲ್ಲಿಸಿದರು.
ಕೊಡಗು ಪೊಲೀಸ್ ಇಲಾಖೆಯ ವತಿಯಿಂದ ಡಿವೈಎಸ್‌ಪಿ ಗಂಗಾಧರಪ್ಪ, ಪೊಲೀಸ್ ಇನ್ಸ್‌ಪೆಕ್ಟರ್ ರಾಮಚಂದ್ರ ನಾಯಕ್ ಅವರುಗಳು ಹೂಗುಚ್ಛ ಅರ್ಪಿಸಿ ಗೌರವ ವಂದನೆ ಸಲ್ಲಿಸಿದರು. ಮಡಿಕೇರಿ ಡಿಎಆರ್ ಘಟಕದ ಸಿಬ್ಬಂದಿಗಳು ಆರಕ್ಷಕ ಉಪನಿರೀಕ್ಷಕ ಡಿ. ಬಸವರಾಜ ಅವರ ನೇತೃತ್ವದಲ್ಲಿ ಕುಶಾಲತೋಪು ಸಿಡಿಸಿದರು. ಎಎಸ್‌ಐ ಸಿದ್ದೇಶ್ ಅವರ ನೇತೃತ್ವದಲ್ಲಿ ಪೊಲೀಸರ ತಂಡ ಬ್ಯಾಂಡ್ ಬಾರಿಸಿ ನಮನ ಸಲ್ಲಿಸಿತು.
ಉಪ ವಿಭಾಗಾಧಿಕಾರಿ ಯತೀಶ್ ಉಳ್ಳಾಲ್, ತಹಶೀಲ್ದಾರ್ ನರಗುಂದ್ ಸೇರಿದಂತೆ ಕಂದಾಯ ಇಲಾಖಾ ಅಧಿಕಾರಿಗಳು, ಕಿರಗಂದೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ರಘು ಸೇರಿದಂತೆ ಸದಸ್ಯರುಗಳು, ಗ್ರಾಮಾಭಿವೃದ್ಧಿ ಸಮಿತಿ ಪ್ರಮುಖರು, ಗ್ರಾಮದ ಹಿರಿಯರು ಅಂತ್ಯಕ್ರಿಯೆ ಸಂದರ್ಭ ಭಾಗಿಯಾಗಿ ನಮನ ಸಲ್ಲಿಸಿದರು.
ಕಠ್ಮಂಡು: ನೇಪಾಳದಲ್ಲಿ ಮತ್ತೆ ಪ್ರವಾಹ, ಭೂಕುಸಿತದ ಆರ್ಭಟ ಮುಂದುವರಿದಿದ್ದು, ಕೇವಲ 8 ಸೆಕೆಂಡ್‌ಗಳಲ್ಲಿ ಪರ್ವತವೇ ಕುಸಿದು ಬಿದ್ದಿದೆ! ವಿವಿಧೆಡೆ ಸಂಭವಿಸಿದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪಳನಿಮೇಡ್ ಗ್ರಾಮದಲ್ಲಿ ರೈತನ ಮೇಲೆ ಕಾಡುಹಂದಿ ದಾಳಿ ಮಾಡಿದ್ದು,…
ಮೈಸೂರು: ಮುಡಾ 50:50 ಸೈಟ್ ವಿಚಾರದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಮಹತ್ವದ ಮಾಹಿತಿ ನೀಡಿದ್ದಾರೆ. ಶೀಘ್ರದಲ್ಲೇ ಅಕ್ರಮ ಸೈಟ್‌ಗಳ…
ಕೊಪ್ಪಳ: ಮೈಸೂರು ದಸರಾ ಉದ್ಘಾಟನೆ ಕುರಿತು ಹರಿದಾಡುತ್ತಿದ್ದ ವದಂತಿಗಳಿಗೆ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿ ತೆರೆ ಎಳೆದಿದ್ದಾರೆ. ಮೈಸೂರು ದಸರಾ ಉದ್ಘಾಟನೆಗೆ…
ನವದೆಹಲಿ: ಬ್ಯಾಂಕ್ ಗ್ರಾಹಕರಿಗೆ ಯಾವುದೇ ಆತಂಕ ಬೇಡ. ಇಂದಿನಿಂದ ನಡೆಯಬೇಕಿದ್ದ 3 ದಿನಗಳ ಬ್ಯಾಂಕ್ ಮುಷ್ಕರ ಮುಂದೂಡಿಕೆಯಾಗಿದೆ. ಬ್ಯಾಂಕ್ ಸೇವೆಗಳಲ್ಲಿ…
ಪ್ರಜಾತಂತ್ರ ವ್ಯವಸ್ಥೆಯ ಭಾರತದಲ್ಲಿ ಪ್ರತಿ ಐದು ವರ್ಷಗಳಿಗೊಮ್ಮೆ ಸಂಸತ್ತು ಮತ್ತು ವಿಧಾನಸಭೆಗಳಿಗೆ ಮುಕ್ತ ಮತ್ತು ನಿಷ್ಪಕ್ಷಪಾತ ಚುನಾವಣೆಯನ್ನು ನಡೆಸುವ ಮೂಲಕ…