Mysore
19
clear sky

Social Media

ಶುಕ್ರವಾರ, 02 ಜನವರಿ 2026
Light
Dark

ಕಾಲು ಜಾರಿ ಕೆರೆಗೆ ಬಿದ್ದು ಯುವತಿ ದುರ್ಮರಣ : ಕಿರುಂದಾಡು ಗ್ರಾಮದಲ್ಲಿ ಘಟನೆ

ಮಡಿಕೇರಿ: ಯುವತಿಯೊಬ್ಬಳು ಕಾಲು ಜಾರಿ ಕೆರೆಗೆ ಬಿದ್ದು ಮೃತಪಟ್ಟಿರುವ ಘಟನೆ ಕೊಣಂಜಗೇರಿ ಪಾರಾಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಿರುಂದಾಡು ಗ್ರಾಮದಲ್ಲಿ ನಡೆದಿದೆ.

ಪಾರಾಣೆ ಗ್ರಾ.ಪಂ ಸದಸ್ಯೆ ದಾಕ್ಷಾಯಿಣಿ ಹಾಗೂ ಕುಶಾಲಪ್ಪ ಅವರ ಪುತ್ರಿ ಚಸ್ಮಿಕಾ (20) ಮೃತ ದುರ್ದೈವಿ.

ಮೂರ್ನಾಡು ಸರ್ಕಾರಿ ಅನುದಾನಿತ ಕಾಲೇಜಿನಲ್ಲಿ ಬಿ.ಕಾಂ. ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿ ಚಸ್ಮಿಕಾ ಇಂದು ಬೆಳಗ್ಗೆ ಗದ್ದೆಯಲ್ಲಿ ದನ ಕಟ್ಟಲು ಕೆರೆಯ ಪಕ್ಕದ ದಾರಿಯಲ್ಲಿ ಹೋಗುವಾಗ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದಿದ್ದಾಳೆ ಎಂದು ತಿಳಿದು ಬಂದಿದೆ. ಮಗಳನ್ನು ಕಳೆದುಕೊಂಡ ತಂದೆ-ತಾಯಿಯ ಆಕ್ರಂದನ ಮುಗಿಲು ಮುಟ್ಟಿದೆ. ಸ್ಥಳಕ್ಕೆ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಜಿ.ಬೋಪಯ್ಯ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದರು. ಮೃತದೇಹವನ್ನು ಕೆರೆಯಿಂದ ಹೊರತೆಗೆಯಲು ನಾಪೋಕ್ಲುವಿನ ಯುವಕರಾದ ಅಬ್ದುಲ್ ರಜಾಕ್, ಅಬ್ದುಲ್ ಮಜೀದ್ ಹಾಗೂ ಶಮೀರ್ ಸಹಕರಿಸಿದರು.

ಸ್ಥಳಕ್ಕೆ ನಾಪೋಕ್ಲು ಠಾಣಾಧಿಕಾರಿ ಸದಾಶಿವ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!