ಜಿಲ್ಲೆಗಳು

ವಿವಾಹಿತನ ಜೊತೆ ಯುವತಿ ಸಾವಿಗೆ ಶರಣು

ಮೈಸೂರು: ವಿವಾಹಿತ ವ್ಯಕ್ತಿಯ ಜೊತೆ ನದಿಗೆ ಹಾರಿ ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಿ.ನರಸೀಪುರ ತಾಲ್ಲೂಕಿನ ಕಪಿಲಾ ನದಿಯಲ್ಲಿ ನಡೆದಿದೆ. ಗುಂಡ್ಲುಪೇಟೆ ತಾಲೂಕಿನ ಲಕ್ಕೂರು ಗ್ರಾಮದ ಮಣಿ(30), ಮೈಸೂರಿನ ರಮಾಬಾಯಿ ನಗರ ನಿವಾಸಿ ವಸಂತ ಮೃತ ದುರ್ದೈವಿಗಳು. ಶುಕ್ರವಾರ ರಾತ್ರಿ 12ರ ವೇಳೆ ಬೈಕ್​ನಲ್ಲಿ ಬಂದ ಮಣಿ ಹಾಗೂ ವಸಂತ, ಬೈಕ್ ಅನ್ನು ಕಪಿಲಾ ಸೇತುವೆ ರಸ್ತೆಯಲ್ಲಿಯೇ ನಿಲ್ಲಿಸಿ, ನದಿಗೆ ಹಾರಿದ್ದಾರೆ.ಬೆಳಗ್ಗೆ ಸೇತುವೆ ಮೇಲೆ ಬೈಕ್ ನಿಂತಿದ್ದನ್ನು ನೋಡಿದ ಸ್ಥಳೀಯರು, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಬೈಕ್ ಬಳಿ ಬಂದಿದ್ದಾರೆ. ಆ ವೇಳೆ ಬೈಕ್​ನಲ್ಲಿ ಇಟ್ಟಿದ್ದ ಮೊಬೈಲ್ ರಿಂಗ್ ಆಗಿದೆ. ಕರೆ ಸ್ವೀಕರಿಸಿದ ಪೊಲೀಸರು, ಮಣಿ ಸಂಬಂಧಿಕರಿಂದ ಮಾಹಿತಿ ಪಡೆದಿದ್ದಾರೆ. ಆಗ ಇಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಮಾಹಿತಿ ಬೆಳಕಿಗೆ ಬಂದಿದೆ.
ಮಣಿ ಸಂಬಂಧಿಕರು ಸ್ಥಳಕ್ಕಾಗಮಿಸಿದ್ದು, ಮಣಿ ಆತ್ಮಹತ್ಯೆಯನ್ನು ಖಚಿತ ಪಡಿಸಿಕೊಂಡಿದ್ದಾರೆ. ಯುವತಿ ಕಡೆಯವರು ಇನ್ನು ಸ್ಥಳಕ್ಕೆ ಆಗಮಿಸಿಲ್ಲ. ಮೃತ ವಿವಾಹಿತನ ಪೋಷಕರು, ಯುವತಿ ಜೊತೆ ಸಂಬಂಧ ಇರಿಸಿಕೊಂಡಿದ್ದ ಎಂದು ಮಾಹಿತಿ ನೀಡಿದ್ದಾರೆ. ವಸಂತಳ ಮೃತದೇಹ ಇನ್ನೂ ಪತ್ತೆಯಾಗಿಲ್ಲ, ವಸಂತಳ ಕುಟುಂಬಸ್ಥರಿಂದ ಮಾಹಿತಿ ಕಲೆಹಾಕಿದ ನಂತರವಷ್ಟೇ ಪೊಲೀಸರಿಗೆ ಸತ್ಯಾಂಶ ತಿಳಿಯಲಿದೆ. ಈ ಸಂಬಂಧ ತಿ.ನರಸೀಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

andolanait

Recent Posts

ಗಗನಚುಕ್ಕಿ | ಕಾಡಾನೆ ದಾಳಿಗೆ ಸ್ಟೀಲ್‌ ಕಂಬಿಗಳು ನಾಶ

ಮಳವಳ್ಳಿ : ತಾಲ್ಲೂಕಿನ ಗಗನಚುಕ್ಕಿ ಜಲಪಾತದ ಆವರಣಕ್ಕೆ ನುಗ್ಗಿದ್ದ ಕಾಡಾನೆಗಳು ಪ್ರವಾಸಿಗರು ಜಲಪಾತ ವೀಕ್ಷಣೆಗೆ ಇಳಿಯುವ ಎರಡು ಕಡೆಗಳಲ್ಲೂ ಹಾಕಲಾಗಿದ್ದ…

5 mins ago

ಮೈಸೂರು | ಹೊಸ ವರ್ಷಾಚರಣೆಗೆ ಮಾರ್ಗಸೂಚಿ ಪ್ರಕಟ ; ಬೆಟ್ಟಕ್ಕಿಲ್ಲ ಪ್ರವೇಶ?

ಮೈಸೂರು : ಇನ್ನೇನು ಹೊಸ ವರ್ಷಾಚರಣೆಗೆ ಕೆಲವೇ ದಿನಗಳು ಬಾಕಿ ಇದೆ. ಆದ್ದರಿಂದ ಸಾರ್ವಜನಿಕ ಹಿತದೃಷ್ಟಿಯಿಂದ ಮೈಸೂರು ನಗರ ಪೊಲೀಸ್‌…

12 mins ago

ಕೋಗಿಲು ಕಲಹ | ಅರ್ಹರಿಗೆ ಪರ್ಯಾಯ ಮನೆ ಹಂಚಿಕೆ ; ಸಿಎಂ ಘೋಷಣೆ

ಬೆಂಗಳೂರು : ಬೆಂಗಳೂರಿನ ಕೋಗಿಲು ಬಡಾವಣೆಯಲ್ಲಿ ಸೂರು ಕಳೆದುಕೊಂಡವರಿಗೆ ಬೈಯ್ಯಪ್ಪನಹಳ್ಳಿಯಲ್ಲಿ ಪರ್ಯಾಯ ಮನೆ ಹಂಚಿಕೆ ಮಾಡಲು ಸಿಎಂ ಸಿದ್ದರಾಮಯ್ಯ ತೀರ್ಮಾನಿಸಿದ್ದಾರೆ.…

47 mins ago

ಚಾಮರಾಜನಗರ ಹೇಮಂತ್‌ಗೆ ಮಿಸ್ಟರ್‌ ಇಂಡಿಯಾ ಕಿರೀಟ!

ಚಾಮರಾಜನಗರ : ರಾಷ್ಟ್ರ ಮಟ್ಟದ ಪುರುಷರ ಮೈಕಟ್ಟು ಸ್ಪರ್ಧೆಯಲ್ಲಿ ವಿಜೇತರಾಗುವ ಮೂಲಕ ತಾಲ್ಲೂಕಿನ ಕೋಡಿಮೋಳೆ ಬಸವನಪುರ ಬಿ.ಆರ್.ಹೇಮಂತ್ ಅವರು ಮಿಸ್ಟರ್…

1 hour ago

ವ್ಯಕ್ತಿಯ ಭೀಕರ ಕೊಲೆ : ಹಳೇ ವೈಷಮ್ಯ ಹಿನ್ನೆಲೆ ಪತಿ,ಪತ್ನಿಯಿಂದ ಕೃತ್ಯ

ಕೊಳ್ಳೇಗಾಲ : ಹಳೇ ವೈಷಮ್ಯ ಹಿನ್ನೆಲೆ ವ್ಯಕ್ತಿಯೋರ್ವನನ್ನು ಪತಿ ಪತ್ನಿ ಇಬ್ಬರು ಮಾರಕಾಸ್ತ್ರದಿಂದ ಹೊಡೆದು ಭೀಕರವಾಗಿ ಹತ್ಯೆಗೈದಿರುವ ಘಟನೆ ತಾಲ್ಲೂಕಿನ…

2 hours ago

ಬಂಧನ್‌ ಬ್ಯಾಂಕ್‌ನಲ್ಲಿ ಕನ್ನಡಿಗರ ವಜಾ : ಕರ್ನಾಟಕ ರಕ್ಷಣಾ ವೇದಿಕೆ ಖಂಡನೆ

ಮೈಸೂರು : ಬಂಧನ್ ಬ್ಯಾಂಕ್‌ನ ವಿದ್ಯಾರಣ್ಯಪುರಂ ಶಾಖೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದ 30 ರಿಂದ 40ಜನ ಕನ್ನಡಿಗರನ್ನು ಏಕಾಏಕಿ ಕೆಲಸದಿಂದ ವಜಾ…

2 hours ago