ಜಿಲ್ಲೆಗಳು

ಯುವಜನರನ್ನು ಸಾಂಸ್ಕೃತಿಕ ಗುಲಾಮಗಿರಿಗೆ ತಳ್ಳುತ್ತಿರುವ ಬಿಜೆಪಿ: ಜನ್ನಿ

ಬುದ್ಧವಿಹಾರದಲ್ಲಿ ಎಸ್‌ಎಫ್‌ಐನ ೧೧ನೇ ಜಿಲ್ಲಾ ಸಮ್ಮೇಳನ ಉದ್ಘಾಟನೆ
* ಆಧುನಿಕ ಆಂಜನೇಯರನ್ನು ಸೃಷ್ಟಿಸಿ ಸಾಂಸ್ಕೃತಿಕ ಗುಲಾಮಗಿರಿಗೆ ಮತ್ತೆ ತಳ್ಳಲು ಯತ್ನ
* ಎಸ್‌ಎಫ್‌ಐನಿಂದ ನೂತನ ಶಿಕ್ಷಣ ನೀತಿಯ ವಿರುದ್ಧ ದೇಶಾದ್ಯಂತ ತೀವ್ರ ಹೋರಾಟದ ಎಚ್ಚರಿಕೆ
* ಎಸ್‌ಎಫ್‌ಐ ನೂತನ ಜಿಲ್ಲಾ ಪದಾಧಿಕಾರಿಗಳ ಆಯ್ಕೆ

ಮೈಸೂರು: ಪ್ರಸ್ತುತ ಆಡಳಿತದಲ್ಲಿರುವ ಸರ್ಕಾರ ಆಧುನಿಕ ಆಂಜನೇಯರನ್ನು ಸೃಷ್ಟಿಸಿ ಸಾಂಸ್ಕೃತಿಕ ಗುಲಾಮಗಿರಿಗೆ ಮತ್ತೆ ತಳ್ಳಲು ಯತ್ನಿಸುತ್ತಿದೆ ಎಂದು ರಂಗಾಯಣ ಮಾಜಿ ನಿರ್ದೇಶಕ ಎಚ್.ಜನಾರ್ಧನ್(ಜನ್ನಿ) ಬೇಸರಿಸಿದರು.
ನಗರದ ಬುದ್ಧವಿಹಾರದಲ್ಲಿ ನಡೆದ ಭಾರತ ವಿದ್ಯಾರ್ಥಿ ಫೆಡರೇಷನ್(ಎಸ್‌ಎಫ್‌ಐ)ನ ೧೧ನೇ ಜಿಲ್ಲಾ ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಅವರು, ಸಂವಿಧಾನ ಇಂದು ಅಪಾಯದಲ್ಲಿದೆ. ಸಂವಿಧಾನದಡಿ ಆಯ್ಕೆಯಾದವರೇ ಇಂದು ಸಂವಿಧಾನದ ಆಶಯವನ್ನು ನಾಶ ಮಾಡಲು ನಿಂತಿದ್ದಾರೆ. ಇದನ್ನು ತಡೆಯಲು ವಿದ್ಯಾರ್ಥಿಗಳು ಸಂಘಟಿತರಾಗಬೇಕಿದೆ ಎಂದರು.
ಇಂದು ವಿದ್ಯಾರ್ಥಿಗಳಲ್ಲಿ ವೈಚಾರಿಕತೆ ಬೆಳೆಸಿ, ಬುದ್ಧಿವಂತರನ್ನಾಗಿಸಿ, ಬದುಕಿನ ಮೌಲ್ಯಗಳನ್ನು ಕಲಿಸಬೇಕಾದ ಶಿಕ್ಷಣ, ಇಂದು ಮಕ್ಕಳ ನಡುವೆ ಕಂದಕವನ್ನು ಸೃಷ್ಟಿಸಲು ಎಳೆಯ ಮನಸ್ಸಿನಲ್ಲಿ ಭೇದವನ್ನು ಸೃಷ್ಟಿಸುತ್ತಿದೆ. ಕುವೆಂಪುರವರು ಶತಮಾನಗಳ ಹಿಂದಿಯೇ ನಮಗೆಂತ ಶಿಕ್ಷಣ ಬೇಕು, ನಮಗೆಂತ ವ್ಯವಸ್ಥೆ ಬೇಕು ಎಂದು ಹೇಳಿದ್ದರು. ಆ ಮತದ ಈ ಮತದ ಹಳೆ ಮತದ ಸಹವಾಸ ಸಾಕಿನ್ನು ಸೇರಿರಿ ಮನುಜ ಮತಕ್ಕೆ ಎಂದು ಕರೆ ನೀಡಿದ್ದರು. ಆದರೆ, ಇಂದು ಯುವ ಜನರನ್ನು ಮತಗಳ ವ್ಯಾಮೋಹಕ್ಕೆ ಸಿಲುಕಿಸಲು ಆಳುವವರು ಪಠ್ಯ ಪುಸ್ತಕದ ಕೇಸರೀಕರಣಕ್ಕೆ ಹೊರಟಿದೆ ಎಂದು ಕಿಡಿಕಾರಿದರು.
ಎಸ್‌ಎಫ್‌ಐ ರಾಜ್ಯ ಕಾರ್ಯದರ್ಶಿ ವಾಸುದೇವ ರೆಡ್ಡಿ ಮಾತನಾಡಿ, ನೂತನ ಶಿಕ್ಷಣ ನೀತಿಯನ್ನು ಕರ್ನಾಟಕದಲ್ಲಿಯೇ ಮೊದಲು ಜಾರಿ ಮಾಡುತ್ತೇವೆಂದು ರಾಜ್ಯದ ತುಂಬೆಲ್ಲಾ ಹೇಳಲಾಗುತ್ತಿದೆ. ಆದರೆ, ಈ ನೂತನ ಶಿಕ್ಷಣ ನೀತಿಯ ಉದ್ದೇಶ ಬಡವರು, ದಲಿತರು, ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳನ್ನು ಶಿಕ್ಷಣದಿಂದ ದೂರ ಇಡುವುದೇ ಆಗಿದೆ. ಈ ನೀತಿ ಶಿಕ್ಷಣದ ಖಾಸಗೀಕರಣವನ್ನು ಪ್ರೋತ್ಸಾಹಿಸುತ್ತದೆ ಹಾಗೂ ಸರ್ಕಾರವನ್ನು ಶಿಕ್ಷಣದ ಹೊಣೆಗಾರಿಕೆಯಿಂದ ದೂರ ಇಡುವ ಹುನ್ನಾರವೂ ಇದೆ ಎಂದು ಹೇಳಿದರು.
ವಿಶ್ವವಿದ್ಯಾನಿಲಯಗಳನ್ನು ದುರ್ಬಲಗೊಳಿಸುವುದು, ಉಪ ಕುಲಪತಿಗಳನ್ನು ಕೇವಲ ಉತ್ಸವ ಮೂರ್ತಿಗಳಾಗಿಸಲು ಈ ನೂತನ ಶಿಕ್ಷಣ ನೀತಿ ಹೊರಟಿದೆ. ಉದ್ಯೋಗಾಧಾರಿತ ಶಿಕ್ಷಣವನ್ನು ನೀಡಬೇಕಾದ ಶಿಕ್ಷಣ ಇಂದು ವಿದ್ಯಾರ್ಥಿಗಳನ್ನು, ಯುವಜನರನ್ನು ಶ್ರೀಮಂತ ಕಂಪೆನಿಗಳ ಸೆಕ್ಯೂರಿಟಿ ಗಾರ್ಡ್‌ಗಳನ್ನಾಗಿ ಮಾಡಲು ಹೊರಟಿದೆ. ಇದರ ವಿರುದ್ಧ ಭಾರತ ವಿದ್ಯಾರ್ಥಿ ಫೆಡರೇಷನ್ ನಿರಂತರವಾಗಿ ಹೋರಾಡುತ್ತಿದೆ. ಮುಂದಿನ ದಿನಗಳಲ್ಲಿ ಈ ನೂತನ ಶಿಕ್ಷಣ ನೀತಿಯ ವಿರುದ್ಧ ದೇಶಾದ್ಯಂತ ತೀವ್ರ ಹೋರಾಟ ನಡೆಸಲಿದೆ ಎಂದು ತಿಳಿಸಿದರು.

ನೂತನ ಪದಾಧಿಕಾರಿಗಳ ಆಯ್ಕೆ: ಜಿಲ್ಲಾಧ್ಯಕ್ಷರಾಗಿ ಟಿ.ಎಸ್.ವಿಜಯ್‌ ಕುಮಾರ್‌ , ಜಿಲ್ಲಾ ಕಾರ್ಯದರ್ಶಿಯಾಗಿ  ಡಿ.ಅಭಿ, ಉಪಾಧ್ಯಕ್ಷರಾಗಿ ಸಂತೋಷ್, ಪ್ರೀತಮ್, ಮಹೇಂದ್ರ, ಭೂಮಿಕಾ, ಸಹ  ಕಾರ್ಯದರ್ಶಿಯಾಗಿ ದರ್ಶನ್, ಸಚಿನ್ ದೇವ್, ಗೋಕುಲ್ ಸೇನ್, ರಕ್ಷಿತಾ ಅವಿರೋಧವಾಗಿ ಆಯ್ಕೆಯಾದರು.
ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಕಾರ್ಯದರ್ಶಿ ಜಗದೀಶ್ ಸೂರ್ಯ ಮಾತನಾಡಿದರು. ಎಸ್‌ಎಫ್‌ಐ ಜಿಲ್ಲಾ ಸಂಚಾಲಕ ಟಿ.ಎಸ್.ವಿಜಯ್‌ ಕುಮಾರ್‌, ಜಿಲ್ಲೆಯ ವಿವಿಧ ತಾಲ್ಲೂಕುಗಳಿಂದ ನಗರ ವಿವಿಧ ಕಾಲೇಜುಗಳಿಂದ ವಿದ್ಯಾರ್ಥಿಗಳು ಈ ಸಮ್ಮೇಳನದಲ್ಲಿ ಭಾಗವಹಿಸಿ ಜಿಲ್ಲೆಯ ಶೈಕ್ಷಣಿಕ ಸಮಸ್ಯೆಗಳ ಬಗ್ಗೆ ಚರ್ಚಿಸಿದರು.

ಅಂಬೇಡ್ಕರ್, ಕುವೆಂಪು, ನಾರಾಯಣ ಗುರು ಮುಂತಾದವರ ಆಶಯಗಳನ್ನು ವಿದ್ಯಾರ್ಥಿಗಳಿಂದ ದೂರವಿಡುವ ಪ್ರಯತ್ನಗಳು ನಡೆಯುತ್ತಿವೆ. ಇದರ ಹಿಂದಿನ ಹುನ್ನಾರಗಳನ್ನು ವಿದ್ಯಾರ್ಥಿಗಳು ಅರ್ಥೈಸಿಕೊಂಡು ಸಂಘಟಿತರಾಗಬೇಕು.
-ಎಚ್.ಜನಾರ್ಧನ್(ಜನ್ನಿ), ರಂಗಕರ್ಮಿ.

andolanait

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

7 hours ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

7 hours ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

8 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

8 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

10 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

10 hours ago