Mysore
18
scattered clouds

Social Media

ಶುಕ್ರವಾರ, 26 ಡಿಸೆಂಬರ್ 2025
Light
Dark

ಮೈಸೂರು: ಕೌಟುಂಬಿಕ ಕಲಹಕ್ಕೆ ಬೇಸತ್ತು ಯುವಕ ಸಾವಿಗೆ ಶರಣು

ಮೈಸೂರು: ಕೌಟುಂಬಿಕ ಕಲಹದ ಹಿನ್ನೆಲೆ ಮನನೊಂದ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಂಜನಗೂಡು ತಾಲೂಕಿನ ಹುಣಸನಾಳು ಗ್ರಾಮದಲ್ಲಿ ನಡೆದಿದೆ.

ಹುಣಸನಾಳು ಗ್ರಾಮದ ಮಹದೇವ ಶೆಟ್ಟಿ ಎಂಬವರ ಪುತ್ರ ಮಹೇಂದ್ರ(20) ಮೃತಪಟ್ಟ ಯುವಕ. ಮನೆಯಲ್ಲಿ ಆಗಾಗ ಗಲಾಟೆ ನಡೆಯುತ್ತಿತ್ತು. ಇದರಿಂದ ಮನನೊಂದ ಮಗ ಆತ್ಮಹತ್ಯೆಗೆ ಶರಣಾಗಿದ್ದಾನೆ.ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ನಂಜನಗೂಡು ಗ್ರಾಮಾಂತರ ಪೊಲೀಸರು ಪರಿಶೀಲನೆ ನಡೆಸಿದ್ದು, ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ತಾಲೂಕಿನ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!