ಎಡಿಟೋರಿಯಲ್

ಆಂದೋಲನ ಓದುಗರ ಪತ್ರ : 18 ಗುರುವಾರ 2022

ಇದು ಸನ್ನಡತೆ ಅಲ್ಲ!

ಸಾವಕರರ್ ಮತ್ತು ಟಿಪ್ಪು ಫ್ಲೆಕ್ಸ್ ವಿಚಾರವಾಗಿ ಶಿವಮೊಗ್ಗದಲ್ಲಿ ಗಲಾಟೆ ನಡೆದಿದೆ. ಗಲಾಟೆ ಹಿಂಸಾಚರಕ್ಕೂ ತಿರುಗಿದೆ. ಆಯ್ದ ಮತ್ತು ವಿಶೇಷ ಸಂದರ್ಭಗಳಲ್ಲೇ ಇಂತಹ ಅಹಿತಕರ ಘಟನೆಗಳು ಶಿವಮೊಗ್ಗದಲ್ಲಿ ,ಇಲ್ಲವೇ ಕರಾವಳಿ ಪ್ರದೇಶದಲ್ಲಿ ನಡೆಯುತ್ತಿವೆ. ಆಡಳಿತಾರೂಢ ಬಿಜೆಪಿ ಇಂತಹ ಸಂದರ್ಭದಲ್ಲಿ ಒಂದು ಸಮುದಾಯದವರಿಗೆ ಮಾತ್ರ ಸಾಂತ್ವನ ಹೇಳುತ್ತಾ ಮತ್ತೊಂದು ಸಮುದಾಯದ ವಿರುದ್ಧ ಪರೋಕ್ಷವಾಗಿ ಜನರನ್ನು ಎತ್ತಿಕಟ್ಟುವ ಕೆಲಸ ಮಾಡುತ್ತದೆ. ರಾಜ್ಯ ಸರ್ಕಾರ ತನ್ನ ಆಡಳಿತ ವೈಫಲ್ಯಗಳನ್ನು ಮುಚ್ಚಿಟ್ಟುಕೊಳ್ಳಲು ಇಂತಹ ಘಟನೆಗಳು ಪದೇ ಪದೇ ಆಗುವುದನ್ನು ತಡೆಯುವ ಪ್ರಯತ್ನ ಮಾಡುತ್ತಲೇ ಇಲ್ಲ. ಜನರ ಗಮನವನ್ನು ಭಾವನಾತ್ಮಕ ವಿಚಾರಗಳತ್ತ ಸೆಳೆಯುವ ಮೂಲಕ ತನ್ನ ವೈಫಲ್ಯಗಳನ್ನು ಮುಚ್ಚಿಕೊಳ್ಳುತ್ತದೆ. ಇದು ಸನ್ನಡತೆ ಅಲ್ಲ.

-ನಂದಕುಮಾರ್, ಸರಸ್ವತಿಪುರಂ, ಮೈಸೂರು.


ಎಲ್ಲಿಗೆ ಬಂದಿದೆ ಸ್ವಾತಂತ್ರ್ಯ!?

ಸ್ವಾತಂತ್ರ್ಯ ಬಂದು ೭೫ ವರ್ಷಗಳೇ ಕಳೆದಿದೆ.

ಅಮೃತಮಹೋತ್ಸವದ ಸಂಭ್ರಮ ಮುಗಿಲು ಮುಟ್ಟಿದೆ.

ಹರ್ ಘರ್ ತಿರಂಗಾ ಅಂದುಕೊಂಡಂತೆಯೇ ಜರುಗಿದೆ.

ಬಡತನ, ನಿರುದ್ಯೋಗ, ಭ್ರಷ್ಟಾಚಾರ ಹಾಗೆಯೇ ಉಳಿದಿದೆ!

ಹೀಗಾದರೆ ಅಮೃತಮಹೋತ್ಸವದ ಸಂತೋಷಕ್ಕೆ ಅರ್ಥವೇನಿದೆ!?

-ಹರಳಹಳ್ಳಿಪುಟ್ಟರಾಜು, ಪಾಂಡವಪುರ.


ಪ್ರತಿಭಾವಂತರಿಗೆ ಮನ್ನಣೆ ನೀಡಿ

ಭ್ರಷ್ಟಾಚಾರ ನಮ್ಮ ದೇಶದಲ್ಲಿ ಕುಣಿದು ಕುಪ್ಪಳಿಸುತ್ತಿದೆ. ಪಿ.ಎಸ್.ಐ. ನೇಮಕ ಸೇರಿದಂತೆ ಹಲವು ನೇಮಕಾತಿಗಳಲ್ಲಿ ಭ್ರಷ್ಟಾಚಾರ ನಡೆದಿದೆ. ಈ ಭ್ರಷ್ಟಾಚಾರ ಎಲ್ಲೆಡೆ ವ್ಯಾಪಿಸುತ್ತಿದೆ. ಇದರಿಂದಾಗಿ ಪ್ರತಿಭಾವಂತರಿಗೆ ಅನ್ಯಾಯವಾಗುತ್ತಿದೆ. ದೇಶದಲ್ಲಿ ಪ್ರತಿಭಾವಂತರಿಗೆ ಕೊರತೆ ಇಲ್ಲ. ಆದರೆ, ಅವರ ಪ್ರತಿಭೆಗೆ ಮನ್ನಣೆ ದೊರೆಯದ ಕಾರಣ ಬೇರೆ ದೇಶಗಳಲ್ಲಿ ನೆಲೆಸುತ್ತಿದ್ದಾರೆ. ಅವರ ಪ್ರತಿಭೆಯ ಫಲ ನಮಗೆ ದಕ್ಕದಂತಾಗುತ್ತಿದೆ. ಯುವಜನತೆಯ ಪ್ರತಿಭೆಗೆ ಮನ್ನಣೆ ಕೊಟ್ಟು ನಮ್ಮ ದೇಶದ ಪ್ರಗತಿಗೆ ಅವಕಾಶ ಮಾಡಿಕೊಟ್ಟರೆ ದೇಶದ ಭವಿಷ್ಯ ಉಜ್ವಲವಾಗುತ್ತದೆ. ಪ್ರತಿಭಾವಂತ ಯುವಜನತೆ ಭ್ರಷ್ಟಾಚಾರವನ್ನು ಬುಡಸಮೇತ ಕಿತ್ತು ಹಾಕಿ ದೇಶವನ್ನು ಉಳಿಸಲು ಸಾಧ್ಯವಾಗುತ್ತದೆ.

-ನಿಸರ್ಗ ಮುತ್ತಪ್ಪ ಎಂ, ಮಹಾರಾಜ ಕಾಲೇಜು, ಮೈಸೂರು.


ಉತ್ತಮ ನಿರ್ಧಾರ

ಕರ್ನಾಟಕ ರಾಜ್ಯ ಸರ್ಕಾರ ಈ ವರ್ಷ ದಸರಾ ಮಹೋತ್ಸವದ ಉದ್ಘಾಟನೆಗೆ ಮಣ್ಣಿನ ಮಗ, ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರ ಅವರನ್ನುಆಹ್ವಾನಿಸುವ ಪ್ರಸ್ತಾಪ ಮಾಡಿರುವುದು ಸ್ವಾಗತಾರ್ಹ ನಿರ್ಧಾರ. ಈ ವಯಸ್ಸಿನಲ್ಲಿಯೂ ನಾಡು ನುಡಿ ಸಂಸ್ಕೃತಿ ಬಗ್ಗೆ ಕಾಳಜಿ ಇರುವ ಮೇರು ವ್ಯಕ್ತಿ ದೇವೇಗೌಡರು. ಕಾವೇರಿ ನದಿ ನೀರಿನಲ್ಲಿ ಅಗ್ರಪಾಲು ನಮಗೆ ದಕ್ಕಿರುವುದರಲ್ಲಿ ದೇವೆಗೌಡರ ಪಾತ್ರ ಬಹಳ ಮುಖ್ಯ. ದೇವೇಗೌಡರು ಎಲ್ಲ ಪಕ್ಷಗಳ ಮುಖಂಡರ ಜೊತೆ ಉತ್ತಮ ಬಾಂಧವ್ಯದಿಂದ ಇದ್ದಾರೆ. ದೇವೆಗೌಡರು ಪ್ರಬುದ್ಧ ರಾಜಕೀಯ ಮುತ್ಸದ್ದಿ. ಅವರನ್ನು ದಸರಾ ಉದ್ಘಾಟನೆಗೆ ಆಹ್ವಾನಿಸುವುದೆಂದರೆ ರಾಜ್ಯದ ಮಣ್ಣಿನ ಮಕ್ಕಳಾದ ರೈತರನ್ನೇ ಗೌರವಿಸಿದಂತಾಗುತ್ತದೆ.

-ಸಿದ್ದಲಿಂಗೆಗೌಡ. ಹೈರಿಗೆ ಗ್ರಾಮ. ಎಚ್ ಡಿ ಕೊಟೆ ತಾಲ್ಲೂಕು.


ಶೌಚಾಲಯ ಸೌಲಭ್ಯ ಒದಗಿಸಿ

ಹುಣಸೂರಿನಲ್ಲಿರುವ ಡಿ . ದೇವರಾಜು ಅರಸು ಕಾಲೇಜು ವ್ಯಾಸಂಗಕ್ಕೆ ಉತ್ತಮ ಶ್ರೇಣಿಯ ಕಾಲೇಜಾಗಿದೆ. ಇಲ್ಲಿ ಸುಮಾರು ಎರಡು ಸಾವಿರ ವಿದ್ಯಾರ್ಥಿ, ವಿದ್ಯಾರ್ಥಿನಿಯರು ವ್ಯಾಸಂಗ ಮಾಡುತ್ತಿದ್ದಾರೆ. ಇಷ್ಟು ಬೃಹತ್ ಸಂಖ್ಯೆಯಲ್ಲಿ ವಿದ್ಯಾರ್ಥಿಗಳಿದ್ದರೂ ಕಾಲೇಜಿನಲ್ಲಿ ಸರಿಯಾದ ಶೌಚಾಲಯ ವ್ಯವಸ್ಥೆ ಇಲ್ಲ. ಇದರಿಂದಾಗಿ ವಿದ್ಯಾರ್ಥಿ ವಿದ್ಯಾರ್ಥಿನಿಯರು ನಿತ್ಯವೂ ಪರದಾಡುವಂತಾಗಿದೆ. ಸಂಬಂಧ ಅಧಿಕಾರಿಗಳು ತಕ್ಷಣ ವ್ಯವಸ್ಥಿತವಾದ ಶೌಚಾಲಯ ಸೌಲಭ್ಯ ಒದಗಿಸಬೇಕಿದೆ.

– ಶಿವರಾಜು, ಮಹಾರಾಜ ಕಾಲೇಜು, ಮೈಸೂರು.

 

 

andolana

Recent Posts

ಪಶ್ಚಿಮ ಏಷ್ಯಾದಲ್ಲಿ ಹೆಚ್ಚಾದ ಉದ್ವಿಗ್ನತೆ: ಮನ್‌ ಕಿ ಬಾತ್‌ನಲ್ಲಿ ಪ್ರಧಾನಿ ಮೋದಿ ಹೇಳಿದ್ದಿಷ್ಟು.!

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವಂತೆ ಭಾರತೀಯ ನಾಗರಿಕರು ಒಗ್ಗಟ್ಟಾಗಿರುವಂತೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಪ್ರಧಾನಿ ನರೇಂದ್ರ…

6 mins ago

ಆರೋಗ್ಯ ಕೇಂದ್ರದ ಮುಂಭಾಗವೇ ವಾಹನಗಳ ಪಾರ್ಕಿಂಗ್:‌ ಸಾರ್ವಜನಿಕರಿಗೆ ಕಿರಿಕಿರಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ಪ್ರಾಥಮಿಕ ಆರೋಗ್ಯ ಕೇಂದ್ರದ…

19 mins ago

ಹನೂರು: ಸಮರ್ಪಕ ಕುಡಿಯುವ ನೀರು ಪೂರೈಸುವಂತೆ ನಿವಾಸಿಗಳಿಂದ ಪ್ರತಿಭಟನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಹೂಗ್ಯಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಭೋವಿ ಸಮುದಾಯದ ಕಾಲೋನಿಗೆ…

25 mins ago

ನ್ಯಾಯ ವಿತರಣೆಯಲ್ಲಿ ಪೊಲೀಸರು ರಾಜಿಯಾಗಬಾರದು: ಸಿಎಂ ಸಿದ್ದರಾಮಯ್ಯ

ಮೈಸೂರು: ನ್ಯಾಯ ವಿತರಣೆಯಲ್ಲಿ ಪೊಲೀಸರು ರಾಜಿಯಾಗಬಾರದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರು ಘಟಕದ 46ನೇ ತಂಡದ ಸಿವಿಲ್‌ ಪೊಲೀಸ್‌…

59 mins ago

ಅಮೇರಿಕಾದಲ್ಲಿ ಡೊನಾಲ್ಡ್‌ ಟ್ರಂಪ್‌ ವಿರುದ್ಧವೇ ಭುಗಿಲೆದ್ದ ಆಕ್ರೋಶ

ಅಮೇರಿಕಾದಲ್ಲಿ ಡೊನಾಲ್ಡ್‌ ಟ್ರಂಪ್‌ ವಿರುದ್ಧವೇ ಭುಗಿಲೆದ್ದ ಆಕ್ರೋಶ 80 ಲಕ್ಷ ಜನರಿಂದ ನೋ ಕಿಂಗ್ಸ್‌ ಚಳುವಳಿ ಟ್ರಂಪ್‌ ನೀತಿ ವಿರೋಧಿಸಿ…

1 hour ago

ರಸ್ತೆ ಇಕ್ಕೆಲಗಳ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

೫೦ ಜೆಸಿಬಿ, ೩೦ ಟಿಪ್ಪರ್‌ಗಳು, ೮ ಟ್ರಾಕ್ಟರ್‌ಗಳು, ೫೦೦ ಮಂದಿ ಪೌರಕಾರ್ಮಿಕರು ಭಾಗಿ ಮೈಸೂರು: ನಗರದ ಹೊರ ವರ್ತುಲ ರಸ್ತೆಯಲ್ಲಿ…

2 hours ago