ಕಾಮುಕ ಶಿಕ್ಷಕನಿಗೆ ತಕ್ಕ ಶಿಕ್ಷೆಯಾಗಲಿ!
ಮಂಡ್ಯ ಜಿಲ್ಲೆ ಮಳವಳ್ಳಿಯಲ್ಲಿ ಮನೆ ಪಾಠಕ್ಕೆಂದು ತೆರಳಿದ್ದ ಬಾಲಕಿಯೊಬ್ಬಳನ್ನು ಶಿಕ್ಷಕನೊಬ್ಬ ಅತ್ಯಾಚಾರವೆಸಗಿ ಕೊಲೆ ಮಾಡಿದ ಪೈಶಾಚಿಕ ಕೃತ್ಯ ಖಂಡನೀಯ . ಸದ್ವಿದ್ಯೆಯನ್ನು ಕಲಿಸಿ, ಸನ್ನಡತೆಯ ತೋರುವಾತನೆ ಗುರು. ಇಂತಹ ಗುರುವೇ ಈ ರೀತಿಯ ನೀಚಕೃತ್ಯದಲ್ಲಿ ಭಾಗಿಯಾದರೆ ಶಿಕ್ಷಕ ವೃತ್ತಿಗೆ ಅರ್ಥವೇನಿದೆ? ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ವಿದ್ಯೆ ಕಲಿಸಿ ತಿಳಿವಳಿಕೆ ಹೇಳಬೇಕಾದ ಶಿಕ್ಷಕನೇ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರವೆಸಗಿ ಕೊಲೆಯಂಥ ಕ್ರೂರ ಕೃತ್ಯದಲ್ಲಿ ಭಾಗಿಯಾಗಿರುವುದು ನಾಚಿಕೆಗೇಡಿತನ ಸಂಗತಿ. ಶಿಕ್ಷಕರನ್ನು ನಂಬಿ ಪಾಲಕರು ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸುತ್ತಿದ್ದಾರೆ. ಯಾರೋ ಒಬ್ಬ ಮತಿಗೇಡಿ ಶಿಕ್ಷಕ ಮಾಡಿದ ತಪ್ಪಿನಿಂದಾಗಿ ಇಡೀ ಸಮಾಜ, ಶಿಕ್ಷಕವಲಯವನ್ನು ಕೆಟ್ಟ ದೃಷ್ಟಿಯಿಂದ ನೋಡುವಂತಾಗಿದೆ. ಇಂತಹ ಶಿಕ್ಷಕರಿಗೆ ಕಠಿಣ ಶಿಕ್ಷೆ ನೀಡಬೇಕು. ಸೇವೆಯಿಂದಲೇ ವಜಾ ಮಾಡಬೇಕು. ಈ ರೀತಿ ಮಾಡುವುದರಿಂದ ಕೆಟ್ಟ ಶಿಕ್ಷಕರಿಗೆ ತಕ್ಕ ಪಾಠ ಕಲಿಸಿದಂತಾಗುತ್ತದೆ ಹಾಗೂ ಇನ್ಮುಂದೆ ಈ ರೀತಿಯ ಘಟನೆಗಳು ಮರುಕಳಿಸದಂತೆ ತಡೆಯಲು ನೆರವಾಗುತ್ತದೆ. ಈ ನಿಟ್ಟಿನಲ್ಲಿ ಅನ್ಯಾಯಕ್ಕೆ ಒಳಗಾದ ಕುಟುಂಬಕ್ಕೆ ನ್ಯಾಯ ದೊರಕಿಸಿಕೊಡಲು ಮುಂದಾಗಬೇಕಿದೆ.
-ಹರಳಹಳ್ಳಿಪುಟ್ಟರಾಜು, ಪಾಂಡವಪುರ.
ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಲಿ
ಸರ್ಕಾರಿ ಶಾಲೆ ಎಂದಾಕ್ಷಣ ಬಹಳಷ್ಟು ಪಾಲಕರು ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸಲು ಹಿಂದೇಟು ಹಾಕುತ್ತಾರೆ. ಅದರಲ್ಲೂ ರಾಜಕಾರಣಿಗಳು ತಮ್ಮ ಮಕ್ಕಳು ಮೊಮ್ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸುವುದಿರಲಿ ಆ ಕಡೆ ಮುಖವನ್ನೂ ಮಾಡುವುದಿಲ್ಲ. ಇತ್ತೀಚೆಗೆ ಉತ್ತರ ಪ್ರದೇಶದ ಹೈಕೋರ್ಟ್ ಜನಪ್ರತಿನಿಧಿಗಳಿಗೆ ತಮ್ಮ ಮಕ್ಕಳು ಮತ್ತು ಮೊಮ್ಮಕ್ಕಳನ್ನು ಸರ್ಕಾರಿ ಶಾಲೆಗೇ ಸೇರಿಸುವಂತೆ ಆದೇಶಿಸಿದೆ. ರಾಜಕಾರಣಿಗಳ ಮಕ್ಕಳು, ಮೊಮ್ಮಕ್ಕಳನ್ನು ಸರ್ಕಾರಿ ಶಾಲೆ ಸೇರಿಸುವುದನ್ನು ಪರಿಶೀಲಿಸುವಂತೆ ಅಲ್ಲಿನ ಮುಖ್ಯ ಕಾರ್ಯದರ್ಶಿಗಳಿಗೆ ತಾಕೀತು ಮಾಡಿದೆ. ನಮ್ಮಲ್ಲಿ ಸರ್ಕಾರಿ ಶಾಲೆಗಳು, ಖಾಸಗಿ ಶಾಲೆಗಳನ್ನು ಮೀರಿಸಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಸಿಗಬೇಕೆಂದರೆ ಜನಪ್ರತಿನಿಧಿಗಳು ತಮ್ಮ ಮಕ್ಕಳು ಮತ್ತು ಮೊಮ್ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಸೇರಿಸುವುದನ್ನು ಕಡ್ಡಾಯಗೊಳಿಸಬೇಕು. ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಸರ್ಕಾರಿ ಶಾಲೆಗಳಲ್ಲಿ ಓದಿದ ವಿಧ್ಯಾರ್ಥಿಗಳಿಗೆ ಮಾತ್ರ ನಮ್ಮ ರಾಜ್ಯದ ಸರ್ಕಾರಿ ನೌಕರಿ ಎಂದು ಆದೇಶ ಹೊರಡಿಸಿಬೇಕು. ಆಗ ಮಾತ್ರ ರಾಜಕಾರಣಿಗಳು ಅಷ್ಟೇ ಅಲ್ಲದೆ ಬಹಳಷ್ಟು ಪಾಲಕರು ಖಾಸಗಿ ಶಾಲೆಯ ಬದಲಾಗಿ ಸರ್ಕಾರಿ ಶಾಲೆಗೆ ತಮ್ಮ ತಮ್ಮ ಮಕ್ಕಳನ್ನು ಕಳುಹಿಸುತ್ತಾರೆ. ಒಟ್ಟಿನಲ್ಲಿ ಆಗ ಮಾತ್ರ ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಸರ್ಕಾರಿ ಶಾಲೆಗಳು ಶ್ರಮಿಸುತ್ತವೆ.
-ವಿಜಯಕುಮಾರ್ ಎಚ್.ಕೆ. ಸಾಮಾಜಿಕ ಕಾರ್ಯಕರ್ತ, ಮೈಸೂರು.
ಗೌರವಧನ ಗೌರವಯುತವಾಗಿ ನೀಡಲಿ!
ಈ ಬಾರಿಯ ನಾಡಹಬ್ಬ ದಸರಾ ಉತ್ಸವದಲ್ಲಿ ಹೆಚ್ಚಿನ ಜನರು ಪಾಲ್ಗೊಳ್ಳುವ ಮೂಲಕ ಯಶಸ್ವಿ ಗೊಳಿಸಿರುವುದು ಸ್ವಾಗತಾರ್ಹ ಸಂಗತಿ. ಆದರೆ ಕೆಲವು ನ್ಯೂನ್ಯತೆಗಳು ಇದ್ದದ್ದು ಕಂಡುಬಂದಿದೆ. ಈ ಬಾರಿಯ ನಾಡಹಬ್ಬದಲ್ಲಿ ಕನ್ನಡ ಪುಸ್ತಕಗಳ ಮಾರಾಟ ಮಳಿಗೆಗೆ ಅವಕಾಶ ಕಲ್ಪಿಸಲಾಗದೆ ಇರುವುದು ಪುಸ್ತಕ ಪ್ರೇಮಿಗಳಿಗೆ ತುಂಬಾ ನಿರಾಸೆಯಾಗಿದೆ. ಅದೇ ರೀತಿ ಕುಸ್ತಿ ಪಂದ್ಯಾವಳಿಯಲ್ಲಿ ಪಾಲ್ಗೊಂಡ ನಮ್ಮ ಕುಸ್ತಿ ಪಟುಗಳಿಗೆ ಗೌರವಧನ ನೀಡುವ ವಿಚಾರದಲ್ಲಿ ತೀರ್ಮಾನ ಕೈಗೊಂಡಿಲ್ಲ. ಇದರಿಂದ ಕುಸ್ತಿ ಪಟುಗಳ ಮನಸ್ಥಿತಿ ಹೇಗಿರುತ್ತದೆ ಎಂದು ಊಹಿಸಿಕೊಳ್ಳಲು ಸಾಧ್ಯವಿಲ್ಲ. ಈ ಬಾರಿಯ ದಸರಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ. ನಿಗದಿಗಿಂತ ಕಡಿಮೆ ಗೌರವಧನ ನೀಡಿರುವುದು, ಹಲವಾರು ಕ್ರೀಡಾ ಪಂದ್ಯಗಳಿಗೆ ನಗದು ಬಹುಮಾನ ನೀಡದಿರುವುದು ವಿಷಾದದ ಸಂಗತಿ. ಮುಂದಿನ ಬಾರಿಯಾದರೂ ಈ ನ್ಯೂನ್ಯತೆಗಳಿಂದ ಹೊರಬರಬೇಕು.
-ಬೆಸಗರಹಳ್ಳಿ ರವಿ ಪ್ರಸಾದ್, ಮೈಸೂರು.
ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತಾರಣ್ಯದಲ್ಲಿ ಪಶು ವೈದ್ಯರ ಕೊರತೆ ಎದ್ದು ಕಾಣುತ್ತಿದ್ದು, ಹೊರಗುತ್ತಿಗೆ ಆಧಾರದಲ್ಲಿ ವೈದ್ಯರ ಹುದ್ದೆಯ ನೇಮಕಾತಿಗೂ ಜಾಹೀರಾತು…
ಬೆಂಗಳೂರು: ರಾಜ್ಯದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದ ಹಣ್ಣುಗಳ ರಾಣಿ ಎಂದು ಕರೆಯಿಸಿಕೊಳ್ಳುವ ಮಾವಿಗೆ ಅನೇಕ ರೋಗಗಳು ಕಾಣಿಸಿಕೊಂಡಿದ್ದು, ರೈತರಿಗೆ ಇಳುವರಿ…
ಗುಂಡ್ಲುಪೇಟೆ: ಗಡಿ ಜಿಲ್ಲೆ ಚಾಮರಾಜನಗರದ ಗುಂಡ್ಲುಪೇಟೆ ತಾಲ್ಲೂಕಿನಲ್ಲಿರುವ ರಾಷ್ಟ್ರೀಯ ಉದ್ಯಾನವನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕುಂದಕೆರೆ ವಲಯದ ಚಿಕ್ಕ…
ಲಕ್ನೋ: ಆಕರ್ಷಣೀಯ ಪ್ರವಾಸಿತಾಣಗಳ ಪಟ್ಟಿಯಲ್ಲಿ ಅಯೋಧ್ಯೆ ರಾಮಮಂದಿರವು ತಾಜ್‌ಮಹಲನ್ನು ಹಿಂದಿಕ್ಕಿ ನಂಬರ್ ಒನ್ ಪಟ್ಟ ಪಡೆದಿದೆ. ಈ ಮೂಲಕ ಈಗ…
ಚಿಕ್ಕಬಳ್ಳಾಪುರ: ನಂದಿಗಿರಿಧಾಮದಲ್ಲಿ ಹೊ ವರ್ಷಾಚರಣೆಗೆ ಬ್ರೇಕ್ ನೀಡಲಾಗಿದ್ದು, ಪ್ರವಾಸಿಗರಿಗೆ ಬಿಗ್ ಶಾಕ್ ಎದುರಾಗಿದೆ. ಪ್ರಕೃತಿ ಮಡಿಲಿನಲ್ಲಿ ಕುಣಿಸು ಕುಪ್ಪಳಿಸಿ ಹೊಸ…
ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ನಡೆದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿಯಾಗಿ ಮುಕ್ತಾಯಗೊಂಡಿದೆ. ಕನ್ನಡ ಸಾಹಿತ್ಯ…