ಸುಪ್ರೀಂ ಕೋರ್ಟ್ ತೀರ್ಪು ಸ್ವಾಗತಾರ್ಹ!
ಗರ್ಭಪಾತದ ಹಕ್ಕುಗಳ ವಿಚಾರವಾಗಿ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪು ಮಹಿಳೆಗೆ ತನ್ನ ದೇಹದ ವಿಚಾರದಲ್ಲಿ ಇರುವ ಸ್ವಾಯತ್ತತೆ ಹಾಗೂ ಸ್ವಾತಂತ್ರ್ಯವನ್ನು ಎತ್ತಿ ಹಿಡಿಯುವಂತಿದೆ. ವಿವಾಹಿತರೇ ಇರಲಿ, ಅವಿವಾಹಿತರೇ ಆಗಲಿ ಎಲ್ಲಾ ಮಹಿಳೆಯರು ಗರ್ಭಪಾತ ಮಾಡಿಸಿಕೊಳ್ಳಲು ಅರ್ಹರು, ಇವರ ನಡುವೆ ತಾರತಮ್ಯ ಮಾಡುವುದು ಅಸಾಂವಿಧಾನಿಕ ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿರುವುದು ಸ್ವಾಗತಾರ್ಹವಾಗಿದೆ. ಸಾಮಾನ್ಯವಾಗಿ ವಿವಾಹಿತ ಹಾಗೂ ಅವಿವಾಹಿತ ಮಹಿಳೆಯರು ತಮ್ಮ ದೇಹದ ಮೇಲೆ ಹಕ್ಕನ್ನು ಚಲಾಯಿಸಲು ಹೆಚ್ಚಿನ ಅಡೆತಡೆಗಳನ್ನು ಎದುರಿಸುತ್ತಾರೆ. ಇದರಿಂದಾಗಿ ಅಪಾಯಗಳು ಮತ್ತು ತೊಡಕುಗಳಿಗೆ ಕಾರಣವಾಗುತ್ತದೆ. ಸುಪ್ರೀಂ ಕೋರ್ಟ್ ಗಮನಿಸಿರುವಂತೆ ಆಸುರಕ್ಷಿತ ಗರ್ಭಪಾತಗಳು ತಾಯಂದಿರ ಮರಣಕ್ಕೆ ಪ್ರಮುಖ ಕಾರಣವಾಗುತ್ತವೆ. ಅಸುರಕ್ಷಿತ ಗರ್ಭಪಾತಗಳ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಸುಪ್ರೀಂ ಕೋರ್ಟ್, ಭಾರತದಲ್ಲಿ ನಡೆಸಲಾಗುವ ಶೇ. ೬೦ರಷ್ಟು ಗರ್ಭಪಾತಗಳು ಸುರಕ್ಷಿತವಾಗಿಲ್ಲ. ಸುರಕ್ಷಿತ ಗರ್ಭಪಾತ ಸೇವೆಗಳಿಗೆ ಅವಕಾಶ ನಿರಾಕರಿಸುವುದು, ನಿರ್ಬಂಧಿತ ಗರ್ಭಪಾತ ಅಭ್ಯಾಸಗಳು ಅಸುರಕ್ಷಿತ ಗರ್ಭಪಾತಗಳಿಗೆ ಎಡೆಮಾಡಿಕೊಡುತ್ತವೆ ಎಂದು ಅಭಿಪ್ರಾಯಪಟ್ಟಿದೆ. ಪ್ರಸ್ತುತ ಸುಪ್ರೀಂ ಕೋರ್ಟ್ ನೀಡಿರುವ ಈ ತೀರ್ಪು ಹೆಣ್ಣಿನ ಹಕ್ಕು ಮತ್ತು ಘನತೆಗೆ ಹೆಚ್ಚಿನ ಒತ್ತಾಸೆ ನೀಡಿದಂತಾಗಿದೆ.
-ಹರಳಹಳ್ಳಿ ಪುಟ್ಟರಾಜು, ಪಾಂಡವಪುರ.
ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…
ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…