ಎಡಿಟೋರಿಯಲ್

ಆಂದೋಲನ ಓದುಗರ ಪತ್ರ : 13 ಗುರುವಾರ 2022

ಓದುಗರ ಪತ್ರ

ಗುರವೇ ನಮಃ!

ಸಾವಿನಲ್ಲೂ ಸಾರ್ಥಕತೆ ಮೆರೆದ ಶಿಕ್ಷಕಿ (ಆಂ.ಸುದ್ದಿ,ಅ.೧೨)

ಅಂಗಾಂಗ ದಾನ ಮಾಡಿ
ಏಳೆಂಟು

ಮಂದಿಯ ಬಾಳಿಗೆ
’ಆಶಾ’ದೀಪವಾದರು

ಸಂಕಟದಲ್ಲಿರುವ ವಿದ್ಯಾರ್ಥಿಗಳಿಗೆ
‘ ವೆಂಕಟರಮಣ’ನಂತಾಗಿದ್ದಾರೆ!

ಸಿದ್ದಯ್ಯನಪುರದ ಶಿಕ್ಷಕ ನಾರಾಯಣ!

ಗುರುಗಳ ಉದಾರ ಗುಣಕೆ

ಹೇಳೋಣ ನಮೋ ನಮಃ

ಮ ಗು ಬಸವಣ್ಣ, ಜೆಎಸ್‌ಎಸ್ ಸಂಸ್ಥೆ, ಸುತ್ತೂರು.


ಯಾತ್ರೆಗಳ ಜಾತ್ರೆ

ರಾಜ್ಯದಲ್ಲೀಗ ಯಾತ್ರೆಗಳ ಜಾತ್ರೆಯೇ ನಡೆಯುತ್ತಿದೆ. ಒಂದು ಕಡೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾರತ್ ಜೋಡೋ ಯಾತ್ರೆ ನಡೆಸುತ್ತಿದ್ದಾರೆ. ಪಾದಯಾತ್ರೆ ಮೂಲಕ ಯಾತ್ರೆ ಮುಂದುವರೆದಿದೆ. ಈಗ ಆಡಳಿತಾರೂಢ ಬಿಜೆಪಿ ನಾಯಕರು ರಾಯಚೂರಿನಿಂದ ಜನಸಂಕಲ್ಪ ಯಾತ್ರೆ ಆರಂಭಿಸಿದ್ದಾರೆ. ಯಾತ್ರೆಗಳ ಉದ್ದೇಶ ಜನರ ಉದ್ದಾರಕ್ಕಾಗಿಯೇ ಇರಬಹುದು. ಆದರೆ, ಚುನಾವಣೆ ಸಮೀಪಿಸುತ್ತಿರುವುದರಿಂದ ಯಾತ್ರೆಗಳನ್ನು ಮತಗಳಿಕೆಗಾಗಿ ಮಾಡುತ್ತಿದ್ದಾರೆಯೇ ಎಂಬ ಅನುಮಾನ ಬರುತ್ತದೆ. ಏರಿರುವ ಬೆಲೆ ಇಳಿದರೆ, ಜನರಿಗೆ ನೆಮ್ಮದಿ. ಆಡಳಿತಾರೂಢ ಪಕ್ಷವು ತೆರಿಗೆಗಳನ್ನು ಕಡಿತ ಮಾಡಿ ಏರಿರುವ ಬೆಲೆಯನ್ನು ಇಳಿಸುವ ಮೂಲಕ ಜನಸಂಕಲ್ಪ ಮಾಡಿದರೆ ಒಳಿತು. ಆಗ ಯಾತ್ರೆಯನ್ನು ಯಾರೂ ಅನುಮಾನದಿಂದ ನೋಡುವುದಿಲ್ಲ.

ನಂದಕುಮಾರ್, ಸರಸ್ವತಿ ಪುರಂ, ಮೈಸೂರು.


ಬೇಲಿಯೇ ಎದ್ದು ಹೊಲ ಮೇಯ್ದರೆ?

ಕಂಪೆನಿಯೊಂದರ ಜಾಗವನ್ನು ನಕಲಿ ದಾಖಲೆ ಸೃಷ್ಟಿಸಿ ಬೇರೊಬ್ಬರಿಗೆ ಖಾತೆ ಮಾಡಿ ವಂಚಿಸಿರುವ ಪ್ರಕರಣದಲ್ಲಿ ತಹಶೀಲ್ದಾರ್, ರೆವಿನ್ಯೂ ಇನ್‌ಸ್ಪೆಕ್ಟರ್, ಗ್ರಾಮ ಲೆಕ್ಕಿಗ ಸೇರಿದಂತೆ ಐವರ ವಿರುದ್ಧ ದೂರು ದಾಖಲಾಗಿರುವ ಸುದ್ದಿ ಓದಿ ಅಚ್ಚರಿಯೇನೂ ಆಗಲಿಲ್ಲ. ಬೇಲಿಯೇ ಎದ್ದು ಹೊಲ ಮೇಯುವುದಿಲ್ಲಿ ಸಾಮಾನ್ಯವಾಗಿಬಿಟ್ಟಿದೆ. ನಕಲಿ ದಾಖಲೆ ಸೃಷ್ಟಿಸಿ ಆಸ್ತಿಯನ್ನು ಪರಭಾರೆ ಮಾಡುವ ಅಕ್ರಮ ವ್ಯವಹಾರಗಳಲ್ಲಿ ತಹಶೀಲ್ದಾರ್, ರೆವಿನ್ಯೂ ಇನ್‌ಸ್ಪೆಕ್ಟರ್, ಗ್ರಾಮಲೆಕ್ಕಗರು ಸೇರಿದಂತೆ ಕಂದಾಯ ಇಲಾಖೆಯವರ ಪಾತ್ರ ದೊಡ್ಡದು. ಅವರಿಗೆ ನಕಲಿ ಯಾವುದು ಅಸಲಿ ಯಾವುದು ಗೊತ್ತಿರುತ್ತದೆ. ಗೊತ್ತಿದ್ದೇ ಅಕ್ರಮ ವ್ಯವಹಾರ ಮಾಡುತ್ತಾರೆ. ಕೆಲವು ಪ್ರಕರಣಗಳಲ್ಲಿ ಸಿಕ್ಕಿ ಬೀಳುತ್ತಾರೆ. ಸರ್ಕಾರಿ ಭೂಮಿಗಳನ್ನು ಪರಭಾರೆ ಮಾಡಿದ ಪ್ರಕರಣಗಳಲ್ಲಿ ಸಿಕ್ಕಿ ಬೀಳುವುದು ಅಪರೂಪ. ಏನೇ ಆಗಲಿ, ಇಂತಹ ಪ್ರಕರಣಗಳಲ್ಲಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ನೀಡಬೇಕು. ಆಗಮಾತ್ರ ಬೇಲಿಯೇ ಎದ್ದು ಹೊಲ ಮೇಯುವುದು ನಿಲ್ಲುತ್ತದೆ.

-ಚಂದ್ರಶೇಖರ್, ತಿಲಕ್ ನಗರ, ಮೈಸೂರು.


ಶುಚಿಪ್ಯಾಡ್ ವಿತರಣೆ ನಿಲ್ಲಿಸಿದ್ದೇಕೆ?

ಹಿಂದಿನ ಸರ್ಕಾರದ ಅವಧಿಯಲ್ಲಿ ರಾಜ್ಯಕ್ಕೆ ಅನೇಕ ಸೌಲಭ್ಯಗಳು ದೊರಕುತ್ತಿದ್ದವು. ಮಹಿಳೆಯರ ಶುಚಿತ್ವಕ್ಕಾಗಿ ಸ್ಯಾನಿಟರಿ ಪ್ಯಾಡ್‌ಗಳನ್ನು ಆರ್ಥಿಕವಾಗಿ ಹಿಂದುಳಿದವರಿಗೆ ಉಚಿತವಾಗಿ ವಿತರಿಸಲಾಗುತ್ತಿತ್ತು. ಕೋವಿಡ್ ನಂತರದಲ್ಲಿ ಸ್ಯಾನಿಟರಿ ಪ್ಯಾಡ್ ಗಳನ್ನು ವಿತರಿಸುತ್ತಿಲ್ಲ. ಇದರಿಂದಾಗಿ ಆರ್ಥಿಕವಾಗಿ ಹಿಂದುಳಿದ ಹೆಣ್ಣು ಮಕ್ಕಳು, ಮಹಿಳೆಯರಿಗೆ ಅನನಕೂಲವಾಗಿದೆ. ಸರ್ಕಾರ ಈ ನಿಟ್ಟಿನಲ್ಲಿ ಗಮನ ಹರಿಸಿ ತ್ವರಿತವಾಗಿ ಕ್ರಮಕೈಗೊಳ್ಳಬೇಕು.

ನಾಗೇಶ್, ಮಾನಸಗಂಗೋತ್ರಿ, ಮೈಸೂರು.


ಶಾಲೆಗಳು ಮಕ್ಕಳ ದಸರಾ ರಜೆ ಕಡಿತ!

ರಾಜ್ಯಸರ್ಕಾರ ಈ ಬಾರಿಯ ೨೦೨೨-೨೩ ರ ಶೈಕ್ಷಣಿಕ ವರ್ಷವನ್ನು ಕಲಿಕಾ ಚೇತರಿಕಾ ವರ್ಷವನ್ನಾಗಿ ಆಚರಿಸುತ್ತಿದೆ. ಈ ಕಾರಣದಿಂದಾಗಿಯೇ ಈ ಹಿಂದೆ ಇದ್ದಂತಹ ಒಂದು ತಿಂಗಳ ದಸರಾ ರಜೆಯನ್ನು ೧೪ ದಿನಗಳಿಗೆ ಕಡಿತಗೊಳಿಸಿ ಮಕ್ಕಳ ಕಲಿಕೆಗೆ ಹೆಚ್ಚು ಒತ್ತನ್ನು ಸರ್ಕಾರ ನೀಡಿದೆ. ಆದರೆ ಕೆಲವು ಖಾಸಗಿ ಶಾಲೆಗಳು ಸರ್ಕಾರ ನೀಡಿರುವ ೧೪ ದಿನಗಳ ದಸರಾ ರಜೆಯನ್ನು ಸಹ ಕಡಿತಗೊಳಿಸಿ, ಮಕ್ಕಳಿಗೆ ಕೇವಲ ಏಳೆಂಟು ದಿನಗಳಷ್ಟೇ ದಸರಾ ರಜೆಯನ್ನು ನೀಡಿ ಈಗಾಗಲೇ ಶಾಲೆಗಳನ್ನು ಪುನರಾರಂಭಿಸಿವೆ.
ರಾಜ್ಯಸರ್ಕಾರ ರಾಜ್ಯದ ಎಲ್ಲಾ ಸರ್ಕಾರಿ ಅನುದಾನಿತ ಹಾಗೂ ಅನುದಾನರಹಿತ ಶಿಕ್ಷಣ ಸಂಸ್ಥೆಗಳಿಗೆ ಅನ್ವಯವಾಗುವಂತೆ ಅಕ್ಟೋಬರ್ ೩ ರಿಂದ ೧೬ ರವರೆಗೆ ಅಂದರೆ ೧೪ ದಿನಗಳ ದಸರಾ ರಜೆಯನ್ನು ನೀಡಿ, ಅಕ್ಟೋಬರ್ ೧೭ರಿಂದ ಶಾಲೆಗಳನ್ನು ಪುನರಾರಂಭಿಸುವಂತೆ ಸೂಚಿಸಿದೆ. ಆದರೆ ಕೆಲವು ಖಾಸಗಿ ಶಿಕ್ಷಣ ಸಂಸ್ಥೆಗಳು ಸರ್ಕಾರದ ನಿಯಮವನ್ನು ಗಾಳಿಗೆ ತೂರಿ, ಮಕ್ಕಳಿಗೆ ಕೊಟ್ಟಿರುವ ದಸರಾರಜೆಯನ್ನು ಕಡಿತಗೊಳಿಸಿ ಈಗಾಗಲೇ ಶಾಲೆಗಳನ್ನು ಒಂದು ವಾರ ಮುಂಚಿತವಾಗಿಯೇ ಆರಂಭಿಸಿವೆ!
ಸರ್ಕಾರ ನೀಡಿರುವ ೧೪ ದಿನಗಳ ದಸರಾ ರಜೆಯನ್ನು ಮೊಟುಕುಗೊಳಿಸಿ ಒಂದು ವಾರ ಮುಂಚಿತವಾಗಿ ಶಾಲೆಗಳನ್ನು ಆರಂಭಿಸಿರುವುದು ಮಕ್ಕಳ ಸ್ವಾತಂತ್ರ್ಯವನ್ನು ಕಿತ್ತುಕೊಂಡಂತಾಗಿದೆ. ಈ ಬಗ್ಗೆ ಸರ್ಕಾರ ಗಮನಹರಿಸಿ ಸೂಕ್ತ ಕ್ರಮ ಕೈಗೊಳ್ಳಲಿ.

-ಹರಳಹಳ್ಳಿಪುಟ್ಟರಾಜು, ಪಾಂಡವಪುರ.

andolanait

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

11 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

12 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

13 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

14 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

19 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

19 hours ago