ಓದುಗರ ಪತ್ರ
ಈ ಬಾರಿ ಪರಿಸರ ಸ್ನೇಹಿ ಗಣಪ ಇರಲಿ!
ಪ್ರತಿ ವರ್ಷದಂತೆ ಈ ವರ್ಷವೂ ಗೌರಿ ಗಣೇಶ ಹಬ್ಬ ಬಂದಿದೆ. ಈ ಸಂದರ್ಭದಲ್ಲಿ ಪ್ರತಿ ಮನೆ, ಗ್ರಾಮ, ನಗರ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿ ಕೂರಿಸಿ ಸಂಭ್ರಮಿಸುವ ಭಕ್ತಸಮೂಹ ದೊಡ್ಡದಿದೆ. ಇತ್ತೀಚೆಗೆ ಜನರು ಭಕ್ತಿಭಾವದ ಜೊತೆಗೆ ಆಡಂಬರದ ಪೂಜೆಯನ್ನು ಮಾಡುತ್ತಿದ್ದಾರೆ. ಬಹುದೊಡ್ಡ ಗಾತ್ರದ ಮತ್ತು ರಾಸಾಯನಿಕ ಬಣ್ಣಗಳಿಂದ ಹೊಳೆಯುವ ಗಣೇಶನನ್ನು ಕೂರಿಸುತ್ತಾರೆ. ಈ ನಿಟ್ಟಿನಲ್ಲಿ ದೊಡ್ಡ ದೊಡ್ಡ ಧ್ವನಿವರ್ಧಕಗಳನ್ನು ಬಳಸಿ, ಬೆಳಿಗ್ಗೆಯಿಂದ ಸಂಜೆ ತನಕ ಹಾಡನ್ನು ಹಚ್ಚಿಯೇ ಇಡುವುದು, ವಾಯು ಮಾಲಿನ್ಯ ಉಂಟಾಗುವಷ್ಟು ಪಟಾಕಿ ಸಿಡಿಸುವುದು ತಪ್ಪಬೇಕಿದೆ. ಇದರಿಂದ ವೃದ್ಧರಿಗೆ, ಪುಟಾಣಿಗಳಿಗೆ, ವಿವಿಧ ಕಾಯಿಲೆಗಳಿಂದ ಬಳಲುತ್ತಿರುವವರಿಗೆ ಕಷ್ಟವಾಗುತ್ತದೆ. ಮಣ್ಣು ಮತ್ತು ಪರಿಸರ ಸ್ನೇಹಿ ಬಣ್ಣಗಳಿಂದ ಮಾಡಿದ ಮೂರ್ತಿಯ ಹೊರತಾಗಿ ಪ್ಲಾಸ್ಟರ್ ಆಫ್ ಪ್ಯಾರಿಸ್, ಥರ್ಮಕೋಲ್, ರಾಸಾಯನಿಕ ಬಳಿದ ಮೂರ್ತಿಗಳು, ಅಂಟು ವಸ್ತುಗಳಿಂದ ಮಾಡಿದ, ಪ್ಲಾಸ್ಟಿಕ್‌ನಿಂದ ಮಾಡಿದ ಮೂರ್ತಿಗಳೆಲ್ಲವೂ ತೀವ್ರ ಹಾನಿಕರ ಮತ್ತು ವಿಷಕಾರಿ. ಕಾರಣ ಇವುಗಳು ನೀರಲ್ಲಿ ಕರಗುವುದಿಲ್ಲ. ಸಂಯೋಜಿತ ಬಣ್ಣಗಳಲ್ಲಿ ಅಪಾಯಕಾರಿ ಭಾರ ಲೋಹಗಳಾದ ಸತು, ಕ್ರೋಮಿಯಂ, ಸೀಸ, ನಿಕಲ್, ಕ್ಯಾಡ್ಮಿಯಂ ಇತ್ಯಾದಿಗಳಿರುತ್ತವೆ. ಇವುಗಳು ಮನುಷ್ಯರು, ಪ್ರಾಣಿ ಸಸ್ಯಗಳಿಗೆ ತೀವ್ರ ಹಾನಿಕರ. ಇನ್ನು ಪ್ಲಾಸ್ಟರ್ ಆಫ್ ಪ್ಯಾರಿಸ್‌ನಲ್ಲಿ ಕ್ಯಾನ್ಸರ್ ಕಾರಕ ಅಸ್ಬೆಸ್ಟಾಸ್ ಇರುತ್ತದೆ. ಇದಕ್ಕೆ ಬಳಿಯುವ ಆಯಿಲ್ ಪೈಂಟ್‌ಗಳಲ್ಲೂ ರಾಸಾಯನಿಕಗಳಿದ್ದು, ಗಣಪತಿ ವಿಸರ್ಜನೆ ಮಾಡಿದ ಕೆರೆ, ನದಿ ನೀರನ್ನು ಬಳಸುವುದರಿಂದ ಆರೋಗ್ಯದ ಮೇಲೆ ಅಲ್ಪಾವಧಿ ಮತ್ತು ದೀರ್ಘಾವಧಿ ಪರಿಣಾಮ ಬೀರಬಹುದು! ಆದ ಕಾರಣ ನಮ್ಮನ್ನು ಸಲಹುತ್ತಿರುವ ಪರಿಸರಕ್ಕೆ ಕ್ಷೋಭೆಯಾಗದಂತೆ ಗಣೇಶನ ಮೂರ್ತಿಯನ್ನು ಸಿದ್ಧಪಡಿಸಿ ಪೂಜಿಸುವುದು ನಮ್ಮ ಕೆಲಸವಾಗಬೇಕಿದೆ. ನಾವೆಲ್ಲರೂ ಪರಿಸರ ಕಾಪಾಡಿದರೆ ಪರಿಸರ ನಮ್ಮನ್ನು ಅಷ್ಟೇ ಚೆನ್ನಾಗಿ ಕಾಪಾಡಿಕೊಳ್ಳುತ್ತೆ ಎನ್ನುವುದನ್ನು ನೆನಪಿನಲ್ಲಿ ಇಡೋಣ. ಈ ಬಾರಿಯ ಗಣೇಶನ ಹಬ್ಬದಲ್ಲಿ ಎಲ್ಲರೂ ಪರಿಸರ ಸ್ನೇಹಿ ಗಣಪನ ಮೊರೆ ಹೋಗುವ ಮೂಲಕ ಪರಿಸರ ಸ್ನೇಹಿಯಾಗಿ ಸಂಭ್ರಮಿಸೋಣ.
-ಹರಳಹಳ್ಳಿ ಪುಟ್ಟರಾಜು, ಪಾಂಡವಪುರ.
ಹಿಂದಿ ಮೋಹಕ್ಕೆ ಕಡಿವಾಣ ಯಾವಾಗ?
ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಸಂಜೆಯ ವೇಳೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯ…
ಟೆಹರಾನ್: ಕುವೈತ್ ವಿದ್ಯುತ್ ಸ್ಥಾವರದ ಮೇಲೆ ಇರಾನ್ ಭೀಕರ ದಾಳಿ ನಡೆಸಿದ ಪರಿಣಾಮ ಭಾರತೀಯ ಕಾರ್ಮಿಕರೊಬ್ಬರು ಸಾವನ್ನಪ್ಪಿದ್ದಾರೆ. ಇದು ದೇಶದ…
ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಇಂದು ನಡೆದ ಗೌತಮ ಪಂಚಮಹಾರಥೋತ್ಸವದಲ್ಲಿ ದುರಂತವೊಂದು ಸಂಭವಿಸಿದ್ದು, ಜಗಜಂಗುಳಿಯಲ್ಲಿ ಸಿಲುಕಿ ಓರ್ವ ಭಕ್ತ ಸಾವನ್ನಪ್ಪಿರುವ…
ಹುಣಸೂರು: ಒಣಗಿದ್ದ ದಾಸವಾಳ ಹೂ ನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿರುವ ಮನಕಲಕುವ ಘಟನೆ ಹುಣಸೂರು ತಾಲ್ಲೂಕಿನ ದೊಡ್ಡಹೆಜ್ಜೂರಿನಲ್ಲಿ ನಡೆದಿದೆ. ದೊಡ್ಡಹೆಜ್ಜೂರಿನ…
ಜಾತಿ ಆಧಾರಿತ ಅಪರಾಧಕ್ಕೆ ತಡೆ, ಅಂತರ್ಜಾತಿ ವಿವಾಹಿತರಿಗೆ ರಕ್ಷಣೆ ಒದಗಿಸುವ ಮಹತ್ವಪೂರ್ಣವಾದ ‘ಇವ ನಮ್ಮವ ಇವ ನಮ್ಮವ’ ಮಸೂದೆಯನ್ನು ರಾಜ್ಯ…
ನಾಳೆ ಸೇವೆಯಿಂದ ನಿವೃತ್ತಿ ಹೊಂದಲಿರುವ ಮೇಷ್ಟ್ರು ಸಿ.ಹರಕುಮಾರ್, ಬರಹಗಾರ ಮೂರ್ನಾಲ್ಕು ದಶಕಗಳ ಹಿಂದೆ ಮ್ಯಾನೇಜ್ಮೆಂಟ್ ಕೋರ್ಸ್ ಅಥವಾ ಎಂಬಿಎ ಪದವಿ…