ಎಡಿಟೋರಿಯಲ್

ಆಂದೋಲನ ಓದುಗರ ಪತ್ರ: 04 ಬುಧವಾರ 2023

ಶ್ರೀ ಸಿದ್ದೇಶ್ವರ ಸ್ವಾಮೀಜಿ ಓರ್ವ ಶ್ರೇಷ್ಠ ಸಂತ

ವಿಜಯಪುರದ ಜ್ಞಾನ ಯೋಗಾಶ್ರಮದ ಶ್ರೀ ಸಿದ್ದೇಶ್ವರ ಸ್ವಾಮೀಜಿ ಅಧ್ಯಾತ್ಮದ ಬಗ್ಗೆ ತುಂಬಾ ಆಳವಾದ ಅಧ್ಯಯನ ಚಿಂತನೆಗಳನ್ನು ನಡೆಸಿರುವ ಶ್ರೇಷ್ಠ ಸಂತ, ಅನುಭವಿಯಾಗಿದ್ದರು. ವಿಜಯಪುರದ ಜ್ಞಾನ ಯೋಗಾಶ್ರಮವು ಪ್ರಪಂಚದ ಜನತೆಗೆ ಜ್ಞಾನ ದಾಸೋಹ ನೀಡುವ ವಿಶಿಷ್ಟ ಕೇಂದ್ರವಾಗಿತ್ತು. ಯಾರ ಹಂಗಿಗೂ ಒಳಗಾಗದೆ ಸರ್ವ ಜನರಿಂದ ಪ್ರೀತಿ ಪಡೆದುಕೊಂಡಿರುವ ಶ್ರೀ ಸಿದ್ದೇಶ್ವರ ಸ್ವಾಮೀಜಿ, ಅನೇಕ ಪದವಿ, ಸನ್ಮಾನ ಮತ್ತು ಸರ್ಕಾರದ ಅನುದಾನವನ್ನೇ ನಯವಾಗಿ ತಿರಸ್ಕರಿಸಿದ ಮಹಾನುಭಾವರು. ಅವರು ಐದು ಭಾಷೆಗಳಲ್ಲಿ ನಿರರ್ಗಳವಾಗಿ ಪ್ರವಚನ ಮಾಡುತ್ತಿದ್ದರು, ನಾಡಿನ ಮೂಲೆ ಮೂಲೆಗಳಿಂದ ಲಕ್ಷಾಂತರ ಜನ ಪ್ರವಚನ ಕೇಳಲು ಆಗಮಿಸಿ ಶಾಂತ ಚಿತ್ತತೆಯಿಂದ ಆಲಿಸಿ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವ ಯತ್ನ ಮಾಡುತ್ತಿ ದ್ದರು. ಅದೆಷ್ಟೋ ಜನರು ತಾವು ಮಾಡು ತ್ತಿದ್ದ ಕೊಲೆ, ಸುಲಿಗೆ, ಮೋಸ, ವಂಚನೆ, ಕೆಟ್ಟ ಕೆಲಸಗಳಿಗೆ ತಿಲಾಂಜಲಿ ಇಟ್ಟು, ಬದುಕಿನಲ್ಲಿ ಪರಿವರ್ತನೆಯಾಗಿ ನೆಮ್ಮದಿಯ ಜೀವನವನ್ನು ಕಟ್ಟಿಕೊಂಡಿದ್ದಾರೆ, ಆಡುಭಾಷೆಯಲ್ಲಿ ಅವರು ಮಾತನಾಡುವ ಪರಿ, ಅಸಂಖ್ಯಾತ ಭಕ್ತರ ಮನ ಮತ್ತು ಹೃದಯವನ್ನು ತಲುಪುತ್ತಿತ್ತು, ಸೂಜಿ ಗಲ್ಲಿನಂತಹ ಸೆಳೆತ, ಅವರು ಭಾಷೆ, ಧಾಟಿ, ಪದ ಪ್ರಯೋಗ, ಕಥೆ ಮತ್ತು ಉದಾಹರಣೆಗಳ ಮೂಲಕ ಪ್ರಚಲಿತ ಸಂಗತಿಗಳನ್ನು ಸಮ್ಮಿಳಿತಗೊಳಿ ಸುತ್ತಿದ್ದರು, ಜೊತೆಗೆ ಪರಿಸರವೆಂದರೆ ಪಂಚಪ್ರಾಣ ಅದರಲ್ಲಿರುವ ಕಲ್ಲು, ಮಣ್ಣು, ಗಿಡ, ಮರ, ಹೂ, ಪಕ್ಷಿ, ಪ್ರಾಣಿಗಳಲ್ಲಿ ಜೀವಚೈತನ್ಯವಿದೆ ಎಂಬುದನ್ನು ವಿವರಿಸುವ ರೀತಿ ಅದ್ಬುತ ಮತ್ತು ಜನರನ್ನು ಮೂಕವಿಸ್ಮಿತ ರನ್ನಾಗಿ ಮಾಡುತ್ತಿದ್ದುದು ಸೋಜಿಗವಾಗಿತ್ತು. ಅವರ ನಿಧನದಿಂದ ಈ ನಾಡಿಗೆ ತುಂಬಲಾರದ ನಷ್ಟ ಉಂಟಾಗಿದೆ ಎಂದು ಹೇಳಬಹುದು.

-ಎನ್.ಪಿ.ಪರಶಿವಮೂರ್ತಿ, ನಂಜೀಪುರ, ಸರಗೂರು ತಾ.

andolanait

Share
Published by
andolanait

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

4 hours ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

5 hours ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

6 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

6 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

7 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

8 hours ago