ನಿಷೇಧಿತ ಚಿತ್ರ ಪ್ರದರ್ಶನ ಒಳ್ಳೆಯ ಬೆಳವಣಿಗೆಯಲ್ಲ
ಬಿ.ಬಿ.ಸಿ. ನಿರ್ಮಿಸಿರುವ ‘ಇಂಡಿಯಾ: ದಿ ಮೋದಿ ಕ್ವಶ್ಚನ್’ ಸಾಕ್ಷ್ಯ ಚಿತ್ರವನ್ನು ಕೇಂದ್ರ ಸರ್ಕಾರ ನಿಷೇಧಿಸಿದೆ. ಆದರೆ ಹೊಸದಿಲ್ಲಿಯ ಜೆಎನ್‌ಯು, ಅಂಬೇಡ್ಕರ್ ವಿ.ವಿ, ಜಾಮಿಯಾ ವಿವಿ, ಹೈದರಾಬಾದ್ ವಿವಿ, ಕೊಲ್ಕತ್ತಾದ ಜೋಧಪುರ ವಿವಿ, ತಮಿಳುನಾಡು, ಕೇರಳದ ಅನೇಕ ವಿವಿಗಳು ಕೇಂದ್ರ ಸರ್ಕಾರದ ನಿರ್ಧಾರವನ್ನು ಧಿಕ್ಕರಿಸಿ ಪ್ರದರ್ಶನ ಏರ್ಪಡಿಸುತ್ತಿರುವುದು ಖಂಡನೀಯ. ರಿಚರ್ಡ್ ಕುಕ್ಸನ್ ಹಾಗೂ ಮೈಕ್ ರೇಡ್ ಫೋರ್ಡ್ ರವರು 2002ರ ಗೋಧ್ರಾ, ಮತ್ತು ಗೋಧ್ರೋತ್ತರ ಹತ್ಯಾಕಾಂಡಗಳ ಕುರಿತು 21 ವರ್ಷಗಳ ನಂತರ ಸಾಕ್ಷ್ಯಚಿತ್ರ ನಿರ್ಮಿಸಿರುವುದರ ಹಿಂದೆ ಯಾರದೋ ಕೈವಾಡವಿರುವ ಬಗ್ಗೆ ಅನುಮಾನ ಮೂಡುತ್ತದೆ. ಇಷ್ಟು ವರ್ಷ ಸುಮ್ಮನಿದ್ದವರಿಗೆ ಬಿಜೆಪಿ ಸರ್ಕಾರದ ೮ ವರ್ಷದ ಆಳ್ವಿಕೆಯ ನಂತರ ಹಾಗೂ ಮುಂದಿನ ಲೋಕಸಭಾ ಚುನಾವಣೆ ಒಂದು ವರ್ಷವಿರುವಾಗ ಏಕೆ ನೆನಪಾಯಿತು ಎಂಬ ಪ್ರಶ್ನೆ ಕೂಡ ಉದ್ಭವಿಸುವಂತೆ ಮಾಡಿದೆ. ಭಾರತದಲ್ಲಿ ಕೆಲ ವಿದ್ಯಾರ್ಥಿ ಸಂಘಟನೆಗಳು ಕೇಂದ್ರ ಸರ್ಕಾರ ನಿಷೇಽಸಿರುವ ಚಿತ್ರವನ್ನು ಪ್ರದರ್ಶನ ಮಾಡಲು ಮುಂದಾಗುತ್ತಿರುವುದು ಒಳ್ಳೆಯ ಬೆಳವಣಿಗೆಯಲ್ಲ.
ಮುಳ್ಳೂರು ಪ್ರಕಾಶ್, ಕನಕದಾಸ ನಗರ, ಮೈಸೂರು.
ಮಂಡ್ಯ: ಸಕ್ಕರೆ ನಗರಿಯಲ್ಲಿ ಶುಕ್ರವಾರ ಆಕ್ಷರಶಃ ದೊಡ್ಡ ಜಾತ್ರೆಯ ಸೊಬಗು ಮನೆ ಮಾಡಿತ್ತು. ಎಲ್ಲಿ ನೋಡಿದರಲ್ಲಿ ಜನವೋ ಜನ; ಅದು…
ಮೈಸೂರು: ಸಕ್ಕರೆ ನಾಡು ಮಂಡ್ಯದಲ್ಲಿ ಇಂದಿನಿಂದ (ಡಿ.20) 87ನೇ ಕನ್ನಡ ಸಾಹಿತ್ಯ ಸಮ್ಮೇಳನ ಶುರುವಾಗಿದೆ. ಆದರೆ ಈ ಸಮ್ಮೇಳನವನ್ನು ಯಾವ…
ಮಂಡ್ಯ: ಹಾಸ್ಯ ಸಾಹಿತ್ಯ ಆಧುನಿಕ ಬದುಕಿನಗೆ ಔಷಧಿಯಾಗಿದೆ ಎಂದು ಪ್ರಾಧ್ಯಾಪಕ ಡಾ.ಜೆ.ಕರಿಯಪ್ಪ ಮಾಳಿಗೆ ಹೇಳಿದರು. 87ಅಖಿಲ ಭಾರತ ಕನ್ನಡ ಸಾಹಿತ್ಯ…
ಮಡಿಕೇರಿ: ಸಿ ಮತ್ತು ಡಿ ಭೂಮಿಗೆ ಸಂಬಂಧಿಸಿದಂತೆ ಕಂದಾಯ ಸಚಿವರು ಉನ್ನತ ಮಟ್ಟದ ಸಮಿತಿ ರಚನೆಗೆ ಮುಂದಾಗಿದ್ದು, ಸಮಸ್ಯೆ ಪರಿಹಾರವಾಗಲಿ…
ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅಕ್ಷೇಪಾರ್ಹ ಪದ ಬಳಸಿದ್ದಾರೆ ಎಂಬ ಆರೋಪದ ಮೇಲೆ ಎಂಎಲ್‌ಸಿ ಸಿ.ಟಿ.ರವಿಯವರನ್ನು ಪೊಲೀಸರೇ ಕೊಲೆ…
ವಿರಾಜಪೇಟೆ: ಗೋಣಿಕೊಪ್ಪ-ಕೇರಳ ಹೆದ್ದಾರಿಯ ಬಿಟ್ಟಂಗಾಲ ಆಟೋ ನಿಲ್ದಾಣದ ಬಳಿ ಚಿರತೆ ಬೆಕ್ಕೊಂದು ಅಪಘಾತಕೀಡಾಗಿ ಸಾವನಪ್ಪಿದ ಘಟನೆ ಶುಕ್ರವಾರ ರಾತ್ರಿ 9…