ಭೈರಪ್ಪ ಕುರಿತ ಟೀಕೆ ಸರಿಯಲ್ಲ
ಅಡಗೂರು ವಿಶ್ವನಾಥ್ ಅವರು ಮೊಸರಲ್ಲಿ ಕಲ್ಲು ಹುಡುಕುವ ಜಾಯಮಾನದವರು ಅನಿಸುತ್ತದೆ. ಸಾಹಿತಿ ಎಸ್.ಎಲ್.ಭೈರಪ್ಪನವರು ತಮಗೆ ಕೇಂದ್ರ ಸರ್ಕಾರ ನೀಡಿದ ಪದ್ಮವಿಭೂಷಣ ಪ್ರಶಸ್ತಿಯು, ನರೇಂದ್ರ ಮೋದಿಯವರು ಪ್ರಧಾನಿ ಆದ್ದರಿಂದಲೇ ಲಭಿಸಿತು ಎಂದು ಹೇಳಿರುವುದರಲ್ಲಿ ಉತ್ಪ್ರೇಕ್ಷೆ ಇಲ್ಲ. 92 ವರ್ಷದ ಭೈರಪ್ಪನವರ ಸಾಹಿತ್ಯ ಮತ್ತು ಅವರು ಬರೆದ ಪುಸ್ತಕಗಳು ಇತರ ಭಾಷೆಗಳಿಗೆ ತರ್ಜುಮೆಗೊಂಡು ಅವರು ಒಬ್ಬ ಮಹಾನ್ ಸಾಹಿತಿ ಎಂದು ಗುರುತಿಸಿವೆ. ಹಿಂದಿನ ಸರ್ಕಾ ರಗಳು ಅವರಿಗೆ ಯಾವುದೇ ಪ್ರಶಸ್ತಿ ನೀಡಿ ಗೌರವಿಸಲೇ ಇಲ್ಲ. ಈಗ ಆ ಕೆಲಸವನ್ನು ಮೋದಿ ಸರ್ಕಾರ ಮಾಡಿತು. ಅದಕ್ಕಾಗಿ ಅವರು ತಮ್ಮ ಕೃತಜ್ಞತೆ ಅರ್ಪಿಸಿದ್ದಾರೆ. ಆದರೆ ಮೋದಿಯವರನ್ನು ಓಲೈಸಿರುವುದರಿಂದ ಮುಂದೆ ನಿಮಗೆ ಜ್ಞಾನಪೀಠ ಪ್ರಶಸ್ತಿ ಬರುತ್ತದೆ, ಸ್ವಲ್ಪ ಕಾಯಿರಿ ಎಂದು ಕುಹಕವಾಡಿದ್ದಾರೆ ವಿಶ್ವನಾಥ್. ಜ್ಞಾನಪೀಠ ಪ್ರಶಸ್ತಿ ನೀಡುವುದು ಕೇಂದ್ರ ಸರ್ಕಾರವಲ್ಲ ,ಸಂಸ್ಥೆ ಕೊಡುವ ಪ್ರಶಸ್ತಿ ಎಂದು ವಿಶ್ವನಾಥ್ ಅವರಿಗೆ ತಿಳಿದಿಲ್ಲವೇ? ವಿಶ್ವನಾಥ್‌ರವರು ವಯಸ್ಸಿಗೆ ತಕ್ಕಂತೆ ವರ್ತಿಸಲಿ.
-ಬ್ಯಾಂಕ್ ಶಿವಕುಮಾರ್, ಜೆ.ಪಿ.ನಗರ, ಮೈಸೂರು.
ಕಬಿಗೆ ವೈಜ್ಞಾನಿಕ ಬೆಲೆ ನಿಗದಿಪಡಿಸಲಿ
ರೈತರನ್ನು ದೇಶದ ಬೆನ್ನೆಲುಬು ಎನ್ನುತ್ತಾರೆ. ಬೆಳಗಾವಿಯ ವಿಧಾನಸಭೆ ಅಽವೇಶನದಲ್ಲಿ ಸಿದ್ದರಾಮಯ್ಯರವರು ರೈತರ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಘೋಷಿಸುವಂತೆ ಸರ್ಕಾರವನ್ನು ಒತ್ತಾಯಿಸಿದರು. ರಾಜ್ಯದಲ್ಲಿ 7 ಕೋಟಿ ಜನ ಸಂಖ್ಯೆಯಿದ್ದು, ಶೇ.೬೦ರಷ್ಟು ಹಳ್ಳಿಗಳಿವೆ. ಕೃಷಿ ಕ್ಷೇತ್ರ ಸುಮಾರು ಶೇ.50ಲಕ್ಷದಷ್ಟು ಜನರಿಗೆ ಉದ್ಯೋಗ ಕಲ್ಪಿಸಿದೆ. ಸುಮಾರು 3 ಕೋಟಿ ಜನರು ಕೃಷಿ ಅವಲಂಬಿಸಿದ್ದಾರೆ. ಆದರೆ ಸರ್ಕಾರ ಬೆಳೆಗಳಿಗೆ ಸರಿಯಾದ ಬೆಲೆ ನಿಗದಿ ಮಾಡದೆ, ರೈತರು ಸಂಕಷ್ಟ ಎದುರಿಸುವಂತಾಗಿದೆ. ತಮಿಳುನಾಡು, ಪಂಜಾಬ್, ಉತ್ತರ ಪ್ರದೇಶ, ಗುಜರಾತ್ ರಾಜ್ಯಗಳಲ್ಲಿ ಟನ್ ಕಬ್ಬಿನ ಬೆಲೆ ನಮ್ಮ ರಾಜ್ಯಕ್ಕಿಂತ ಹೆಚ್ಚಿದೆ. ಕರ್ನಾಟಕದಲ್ಲಿ ಸುಮಾರು 15 ಲಕ್ಷ ಹೆಕ್ಟೇರ್‌ನಲ್ಲ್ಲಿ ಕಬ್ಬು ಬೆಳೆಯುತ್ತಾರೆ. 25 ಲಕ್ಷ ರೈತ ಕುಟುಂಬಗಳು ಕಬ್ಬಿನ ಬೆಲೆಯನ್ನು ಅವಲಂಬಿಸಿವೆ. ಆದ್ದರಿಂದ ರೈತರ ಬೆಳೆಗೆ ವೈಜ್ಞಾನಿಕ ಬೆಲೆಯನ್ನು ನಿರ್ಧರಿಸಿ ರೈತರ ಸಮಸ್ಯೆಯನ್ನು ಸರ್ಕಾರ ಪರಿಹರಿಸಬೇಕಿದೆ.
–ಆರ್.ಎಸ್.ಶಶಿ, ಪತ್ರಿಕೋದ್ಯಮ ವಿಭಾಗ, ಮಹಾರಾಜ ಕಾಲೇಜು, ಮೈಸೂರು.
ವಕ್ಫ್ ನಲ್ಲಿ ಜಮೀನು ಲೂಟಿಯಾಗಿದ್ದರೆ ಸಿಬಿಐ ತನಿಖೆಗೆ ವಹಿಸಿ: ಪ್ರತಿಪಕ್ಷ ನಾಯಕ ಕೋಲಾರ: ವಕ್ಫ್ ಅಧಿಕಾರಿಗಳು ರೈತರ ಬಳಿ ಬಂದರೆ…
ಮಂಡ್ಯ: ಇಲ್ಲಿನ ಬೂದನೂರು ಗ್ರಾಮದ ಬಳಿ ಅನ್ಯಕ್ರಾಂತವಾಗದ ಜಮೀನಿನಲ್ಲಿ ಹುಕ್ಕಾ ಬಾರ್ ನಡೆಸಲು ಅನಧಿಕೃತ ಲೈಸೆನ್ಸ್ ನೀಡಿದ ಪಿಡಿಓ ವಿನಯ್‌ಕುಮಾರ್‌ನನ್ನು…
ಮಡಿಕೇರಿ: ಶನಿವಾರಸಂತೆಯ ವಿಜಯ ವಿನಾಯಕ ದೇವಾಲಯದಲ್ಲಿ ಭಾನುವಾರ ರಾತ್ರಿ ಬಾಗಿಲು ಮುರಿದು ದೇವಾಲಯದ ಒಳಗಡೆ ಇದ್ದ ಹುಂಡಿ ಹೊತ್ತು ಕಳ್ಳರು…
ಬೆಂಗಳೂರು: ಇನ್ನೂ ತಮ್ಮ ತಮ್ಮ ವಾಹನಗಳಿಗೆ ಹೈ ಸೆಕ್ಯುರಿಟಿ ರಿಜಿಸ್ಟ್ರೇಷನ್ ಪ್ಲೇಟ್(ಎಚ್‌ಎಸ್‌ಆರ್‌ಪಿ) ಅಳವಡಿಕೆ ಮಾಡದ ವಾಹನ ಸವಾರರಿಗೆ ರಾಜ್ಯ ಸರ್ಕಾರ…
ಮೈಸೂರು : ಸಾಂಸ್ಕೃತಿಕ ನಗರದಲ್ಲಿ ಇದೀಗ ಮತ್ತೊಂದು ಸಾಮೂಹಿಕ ಅತ್ಯಾಚಾರ ಪ್ರಕರಣ ನಡೆದಿದ್ದು ಯುವತಿಯ ಸ್ನೇಹಿತರಿಬ್ಬರು ವಿಜಯನಗರದ ಖಾಸಗಿ ಹೋಟೆಲ್…
ಚನ್ನಪಟ್ಟಣ: ಚನ್ನಪಟ್ಟಣ ಉಪಚುನಾವಣೆಯಲ್ಲಿ ಸಿ.ಪಿ.ಯೋಗೇಶ್ವರ್ ಗೆದ್ದರೆ ಚನ್ನಪಟ್ಟಣ ತಾಲೂಕಿನ ಸಮಗ್ರ ಅಭಿವೃದ್ಧಿಯಾಗಲಿದೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಭರವಸೆ ನೀಡಿದರು.…