ಎಡಿಟೋರಿಯಲ್

ಆಂದೋಲನ ಓದುಗರ ಪತ್ರ: 21 ಶನಿವಾರ 2023

ಇ-ಬಸ್ ಸಂಚಾರ ಸ್ವಾಗತಾರ್ಹ

ಇತ್ತೀಚೆಗೆ ಮೈಸೂರು – ಬೆಂಗಳೂರು ರಸ್ತೆಯಲ್ಲಿ ಎಲೆಕ್ಟ್ರಿಕ್ ಬಸ್‌ಗಳು ಸೇವೆಯನ್ನು ಆರಂಭಿಸಿದ್ದು, ಕೆಎಸ್‌ಆರ್‌ಟಿಸಿಯ ಈ ಪ್ರಯೋಗ ಯಶಸ್ವಿಯಾಗುವ ಭರವಸೆ ವ್ಯಕ್ತವಾಗಿದೆ. ಇ- ಬಸ್‌ನಲ್ಲಿ ಪ್ರಯಾಣ ದರ 200ರೂ.ಗಳಿದ್ದು, ಕೇವಲ 2 ಗಂಟೆ ಪ್ರಯಾಣದಲ್ಲಿ ಈ ಐಷಾರಾಮಿ ಬಸ್‌ನಲ್ಲಿ ಬೆಂಗಳೂರು ತಲುಪಬಹುದಾಗಿದೆ. ಈ ಪರಿಸರ ಸ್ನೇಹಿ ಬಸ್‌ಗಳಿಂದ ಇಂಧನ ಸಮಸ್ಯೆಯೂ ತಗ್ಗಲಿದೆ. ವಾಯು ಮಾಲಿನ್ಯವೂ ಕಡಿಮೆಯಾಗಲಿದೆ. ಹಾಗಾಗಿ ಕೆಎಸ್‌ಆರ್‌ಟಿಸಿಯು ಇಂತಹ ಬಸ್‌ಗಳು ಹೆಚ್ಚಿನ ಸಂಖ್ಯೆಯಲ್ಲಿ ಸಂಚರಿಸಲು ಅವಕಾಶ ಕಲ್ಪಿಸಬೇಕು. ಆರಾಮದಾಯಕ ಆಸನ, ಟಿವಿ ಸ್ಕ್ರೀನ್, ಪ್ರೀಮಿಯಂ ಸೀಟ್‌ಗಳು, ಚಾರ್ಜಿಂಗ್ ಸಾಕೆಟ್‌ಗಳು, ಎಸಿ ಸೇರಿದಂತೆ ಅನೇಕ ಸೌಲಭ್ಯಗಳನ್ನು ಈ ಬಸ್‌ಗಳು ಹೊಂದಿವೆ. ಬಸ್‌ಗಳ ಸಮಸ್ಯೆಯಿರುವ ಭಾಗಗಳಿಗೆ ಹೆಚ್ಚಿನ ಬಸ್ ಸೌಲಭ್ಯ ಒದಗಿಸಲೂ ಅನುಕೂಲವಾಗುತ್ತದೆ. ಜೊತೆಗೆ ಖರ್ಚು ಕಡಿಮೆಯಾಗಿ ಸಾರಿಗೆ ನಿಗಮಕ್ಕೆ ಆದಾಯವೂ ಹೆಚ್ಚಲಿದೆ.

–ಎಂ.ವಿ.ಪ್ರಕಾಶ್, ಮಚ್ಚರೆ, ಎಚ್.ಡಿ.ಕೋಟೆ ತಾ.


ಮಾನಸಗಂಗೋತ್ರಿಯ ಕ್ಲಾಕ್ ಟವರ್ ಗಡಿಯಾರ ಸರಿಪಡಿಸಿ

ಮೈಸೂರು ಮಹಾರಾಜರಾದ ನಾಲ್ವಡಿ ಕೃಷ್ಣರಾಜ ಒಡೆಯರ್‌ರವರ ಆಳ್ವಿಕೆಯ ರಜತ ಮಹೋತ್ಸವದ ಸ್ಮರಣಾರ್ಥ ದೊಡ್ಡ ಗಡಿಯಾರ ಹಾಗೂ ಭಾರತದ ವೈಸ್‌ರಾಯ್ ಆಗಿದ್ದ ಲಾರ್ಡ್ ಡಫರಿನ್‌ರವರ ಗೌರವಾರ್ಥ ಚಿಕ್ಕ ಗಡಿಯಾರವನ್ನು ಮೈಸೂರಿನ ಪ್ರಮುಖ ಸ್ಥಳಗಳಲ್ಲಿ ಸ್ಥಾಪಿಸಲಾಗಿತ್ತು. ಮೈಸೂರು ವಿಶ್ವವಿದ್ಯಾನಿಲಯದ ಮಾನಸ ಗಂಗೋತ್ರಿ ಆವರಣದಲ್ಲಿರುವ ಕೆ.ಎಸ್.ಸಿ.ಎ. ಕ್ರೀಡಾಂಗಣದ ಬಳಿಯೂ ಕ್ಲಾಕ್ ಟವರ್ (ಗಡಿಯಾರ ಗೋಪುರ) ಅನ್ನು ಮೈಸೂರು ವಿವಿ ಶತಮಾನೋತ್ಸವದ ಅಂಗವಾಗಿ ನಿರ್ಮಿಸಲಾಗಿದ್ದು, ಇದೀಗ 7ವರ್ಷಗಳು ಕಳೆದಿವೆ. ಆದರೆ ಕೆಲ ದಿನಗಳಿಂದ ತಾಂತ್ರಿಕ ಸಮಸ್ಯೆಗಳಿಂದ ಗಡಿಯಾರ ತನ್ನ ಕಾರ್ಯವನ್ನು ನಿಲ್ಲಿಸಿದೆ. ವಿದ್ಯಾರ್ಥಿಗಳಿಗೆ ಸಮಯ ಸೂಚಿಯಾಗುವ ಜೊತೆಗೆ ಪ್ರತಿ ದಿನ ಬೆಳಿಗ್ಗೆ ಇಲ್ಲಿಗೆ ಬರುವ ವಾಯುವಿಹಾರಿಗಳಿಗೂ ಸಮಯ ಅರಿಯಲು ಸಾಧ್ಯವಾಗುತ್ತಿತ್ತು. ಆದರೆ ಈಗ ಗಡಿಯಾರ ಕಾರ್ಯನಿರ್ವಹಿಸುತ್ತಿಲ್ಲ. ಪ್ರತಿಯೊಂದು ಗಡಿಯಾರಗಳೂ ಮೂರು ಬದಿಗಳಲ್ಲಿ ಇಂಗ್ಲಿಷ್, ಕನ್ನಡ ಮತ್ತು ರೋಮನ್ ಅಂಕಿಗಳನ್ನು ಹೊಂದಿದ್ದು, ೫ ಅಡಿ ವ್ಯಾಸವನ್ನು ಹೊಂದಿ ವಿಶೇಷವೆನಿಸಿವೆ. ಆದ್ದರಿಂದ ಮೈಸೂರು ವಿ.ವಿ ಆಡಳಿತ ಮಂಡಳಿಯು ಗಡಿಯಾರವನ್ನು ಅಳವಡಿಸಿದ ಎಚ್‌ಎಂಟಿ ಕಂಪೆನಿಯ ಗಮನಕ್ಕೆ ತಂದು ಸರಿಪಡಿಸುವ ಕೆಲಸವನ್ನು ಶೀಘ್ರದಲ್ಲೇ ಮಾಡಲಿ.

–ಮನೋಜ್ ಕಬ್ಬಹಳ್ಳಿ, ಪತ್ರಿಕೋದ್ಯಮ ವಿಭಾಗ, ಮಾನಸ ಗಂಗೋತ್ರಿ

andolanait

Recent Posts

ಓದುಗರ ಪತ್ರ: ‘ಪ್ರತಾಪ’ಕ್ಕೆ ಸವಾಲು ಈ ನೀಲಿ

‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…

6 mins ago

ಓದುಗರ ಪತ್ರ: ಟೆಲಿಕಾಂ ಕಂಪೆನಿಗಳ ಹಗಲು ದರೋಡೆ ನಿಯಂತ್ರಿಸಿ

ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…

7 mins ago

ಓದುಗರ ಪತ್ರ: ಸರ್ಕಾರಿ ಕಚೇರಿಗಳ ಅನಗತ್ಯ ಬಾಡಿಗೆ ವೆಚ್ಚಗಳನ್ನು ತಪ್ಪಿಸಿ

ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…

9 mins ago

ರಂಗದ ಮೇಲೆ ಜಿನುಗಿದ ಜೀವಸೆಲೆ

ಜಿ.ಪಿ.ಬಸವರಾಜು ಯಾಂತ್ರಿಕ ಬದುಕಿನ ಹಲವು ಪ್ರಶ್ನೆಗಳಿಗೆ ಉತ್ತರಗಳನ್ನು ತೋರಿಸುವ ನಾಟಕ ‘ಅಮೃತಬಳ್ಳಿ ಕಷಾಯ’ ಮಾಯಾ ನಗರಿಯಂತೆ ಕಾಣುವ ಮುಂಬೈ ನಗರ…

12 mins ago

ಸಮವಸ್ತ್ರದ ಆತ್ಮಸಾಕ್ಷಿ ಮತ್ತು ಮೂರು ಪ್ರಜ್ಞೆಗಳು

ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು ಕರ್ನಾಟಕ ಪೊಲೀಸ್‌ ಅಕಾಡೆಮಿ ಮೈಸೂರು  ಸದಾ ಜಾಗೃತವಾಗಿರುವ ಸಮಯಪಾಲನೆಯ ವಿವೇಚನೆ ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು…

17 mins ago

ದಸರಾ ಕಾರ್ಯಕ್ರಮಕ್ಕೆ ಸವಾಲಾದ ಬಸ್ ಸೇವೆ

ಕೆ.ಬಿ.ರಮೇಶನಾಯಕ ಉತ್ತನಹಳ್ಳಿ ಗ್ರಾಮದ ಬಳಿ ಯುವ ದಸರಾ, ಸಾತಗಳ್ಳಿ ವಿಟಿಯು ಸಮೀಪ ಕಂಬಳ ಕ್ರೀಡೆ ಆಯೋಜನೆ; ವೀಕ್ಷಕರ ಬೇಡಿಕೆಗೆ ತಕ್ಕಂತೆ…

25 mins ago