ಹನೂರು: ಶೈಕ್ಷಣಿಕ ವಲಯದ ರಾಮಾಪುರ ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ವಿಜಯ್ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮದಲ್ಲಿ ಛದ್ಮ ವೇಷ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿ ಶೈಕ್ಷಣಿಕ ವಲಯಕ್ಕೆ ಕೀರ್ತಿ ತಂದಿದ್ದಾರೆ.
ಜಿಲ್ಲಾ ಆಡಳಿತ ಮತ್ತು ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಚಾಮರಾಜನಗರ ವತಿಯಿಂದ ನಡೆದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಸ್ಪರ್ಧೆಯಲ್ಲಿ ಈ ಸಾಧನೆಗೈದಿದ್ದಾರೆ.
ಶಿಕ್ಷಕ ರಮೇಶ್ ಮಾರ್ಗದರ್ಶನದಲ್ಲಿ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನಗಳಿಸಿರುವ ವಿದ್ಯಾರ್ಥಿಗಳು ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ಈ ಸಂದರ್ಭದಲ್ಲಿ ಶಿಕ್ಷಕ ರಮೇಶ್ ಮಾತನಾಡಿ ನಮ್ಮ ಶಾಲೆಯ ವಿದ್ಯಾರ್ಥಿಗಳು ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳಲ್ಲಿ ಸದಾ ಮುಂದಿದ್ದಾರೆ, ಪ್ರಮುಖವಾಗಿ , ಛದ್ಮವೇಷ, ನೃತ್ಯ ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುವುದು ಸಂತಸದ ವಿಚಾರ. ಎಲ್ಲಾ ಶಿಕ್ಷಕರ ಶ್ರಮದಿಂದ ನಮ್ಮ ವಿದ್ಯಾರ್ಥಿಗಳು ಈ ಸಾಧನಗೈದಿದ್ದಾರೆ ಎಂದು ತಿಳಿಸಿದರು.
ಈ ಸಾಧನೆಗೆ ಕಾರಣೀಭೂತರಾದ ಶಿಕ್ಷಕ ರಮೇಶ್ ಹಾಗೂ ವಿದ್ಯಾರ್ಥಿಗಳನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಶಿವರಾಜು ಸೇರಿದಂತೆ ರಾಮಪುರ ಉನ್ನತಿಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕರು ಅಭಿನಂದನೆ ಸಲ್ಲಿಸಿದ್ದಾರೆ.