ಎಡಿಟೋರಿಯಲ್

ಹಿಮ ಹೊದ್ದ ಬೆಟ್ಟದ ಮೇಲೆ ಕಣ್ತಣಿಸುವ ದೇಗುಲ ತಾಣ

ಗುಂಡ್ಲುಪೇಟೆ ತಾಲ್ಲೂಕಿನ ಪ್ರಸಿದ್ಧ ಹಿಮವದ್ ಗೋಪಾಲಸ್ವಾಮಿ ಬೆಟ್ಟವು ಪ್ರವಾಸಿಗರನ್ನು ಆಕರ್ಷಿಸುತ್ತಿದೆ. ಇದು ಬಂಡೀಪುರ ರಾಷ್ಟ್ರೀಯ ಹುಲಿ ಸಂರಕ್ಷಿತ ಪ್ರದೇಶ ಹಾಗೂ ಉದ್ಯಾನವವನ್ನು ಒಳಗೊಂಡಿರುವ ಪ್ರವಾಸಿ ತಾಣವಾಗಿದೆ. ಬೆಟ್ಟಕ್ಕೆ ಪ್ರತಿದಿನ ಪ್ರವಾಸಿಗರು ಬರುತ್ತಲೇ ಇರುತ್ತಾರೆ.

ಇಲ್ಲಿ ಪ್ರತಿವರ್ಷ ಜಾತ್ರೆ ನಡೆಯುತ್ತದೆ. ಜಾತ್ರೆ ಸಂದರ್ಭದಲ್ಲಿ ಹಿಮವದ್ ಗೋಪಾಲಸ್ವಾಮಿ ಕಲ್ಯಾಣೋತ್ಸವವನ್ನು ಏರ್ಪಡಿಸಲಾಗುತ್ತದೆ. ನಂತರ ಗೋಪಾಲಸ್ವಾಮಿಯ ದಿವ್ಯ ಬ್ರಹ್ಮರಥೋತ್ಸವ ಅದ್ಧೂರಿಯಾಗಿ ನೆರವೇರುತ್ತದೆ.

ಹಿಮವದ್ ಗೋಪಾಲಸ್ವಾಮಿ ಬೆಟ್ಟವು ರಾಜ್ಯದ ಅತ್ಯಂತ ಎತ್ತರದ ಬೆಟ್ಟಗಳಲ್ಲಿ ಮೂರನೇ ಬೆಟ್ಟವಾಗಿದ್ದು, ಸುಮಾರು ೧,೪೫೦  ಅಡಿ ಎತ್ತರವಿದೆ. ಬೆಟ್ಟಪ್ರದೇಶವು ಅತಿ ಎತ್ತರದ ವಿಶಾಲ ಪ್ರದೇಶವನ್ನು ಹೊಂದಿದ್ದು, ತಂಗಾಳಿಯೊಂದಿಗೆ ಮುಂಜಾನೆ ಹಾಗೂ ಸಂಜೆ ಸದಾ ಹಿಮದಿಂದ ಆವೃತವಾಗುವುದರಿಂದ ಮತ್ತು ಗೋಪಾಲಸ್ವಾಮಿ ನೆಲೆ ನಿಂತಿರುವುದರಿಂದ ಹಿಮವದ್ ಗೋಪಾಲಸ್ವಾಮಿ ಬೆಟ್ಟ ಎಂಬ ಹೆಸರಿನಿಂದ ಪ್ರಸಿದ್ಧಿಯಾಗಿದೆ.

ಹಿಮವದ್ ಗೋಪಾಲಸ್ವಾಮಿ ದೇಗುಲಕ್ಕೆ ಸುಮಾರು ಏಳು ಶತಮಾನಗಳಿಗೂ ಹೆಚ್ಚಿನ ಇತಿಹಾಸವಿದೆ ಎನ್ನಲಾಗಿದೆ. ಇತಿಹಾಸದ ಪ್ರಕಾರ ಹೊಯ್ಸಳ ದೊರೆ ಚೋಳ ಬಲ್ಲಾಳ ಈ ದೇವಾಲಯವನ್ನು ನಿರ್ಮಿಸಿದ್ದು, ಮೈಸೂರಿನ ಒಡೆಯರ ಕಾಲದಲ್ಲಿ ಇನ್ನಷ್ಟು ಅಭಿವೃದ್ಧಿಗೊಳಿಸಲಾಯಿತು ಎನ್ನಲಾಗಿದೆ. ಒಂದೇ ಸುತ್ತು ಪೌಳಿಯಲ್ಲಿ ನಿರ್ಮಾಣವಾಗಿರುವ ದೇವಾಲಯ ವಿಶಾಲ ಆವರಣವನ್ನು ಹೊಂದಿದ್ದು, ಮುಖಮಂಟಪದಲ್ಲಿ ದಶಾವತಾರದ ಕೆತ್ತನೆಗಳು, ಬಲಿಪೀಠ, ಧ್ವಜ ಸ್ತಂಭಗಳು ಆಕರ್ಷಕವಾಗಿವೆ.

ದ್ವಾಪರ ಯುಗದ ಗೋವರ್ಧನಗಿರಿಯೇ ಈ ಗೋಪಾಲಸ್ವಾಮಿ ಬೆಟ್ಟ ಎಂಬ ಪ್ರತೀತಿ ಇದೆ. ಇಲ್ಲಿನ ದೇಗುಲದಲ್ಲಿ ರುಕ್ಮಿಣಿ, ಸತ್ಯಭಾಮೆಯರ ಸಹಿತ ಶ್ರೀಕೃಷ್ಣನನ್ನು ಸಂತಾನ ಗೋಪಾಲಕೃಷ್ಣ ಎಂದೂ ಕರೆಯಲಾಗುತ್ತದೆ. ಇಲ್ಲಿನ ಮೂಲ ಮೂರ್ತಿಯನ್ನು ಅಗಸ್ತ್ಯ ಮಹರ್ಷಿಗಳು ಪ್ರತಿಷ್ಠಾಪಿಸಿದರೆಂದೂ ಹೇಳಲಾಗುತ್ತದೆ. ಈ ಬೆಟ್ಟವನ್ನು ತ್ರಯಂಬಕಾದ್ರಿ, ನೀಲಾದ್ರಿ, ಮಂಗಳಾದ್ರಿ, ಶಂಖರಾದ್ರಿಗಿರಿ, ಹಂಸಾದ್ರಿ, ಗರುಡಾದ್ರಿ, ಪಲ್ಲವಾದ್ರಿ, ಮಲ್ಲಿಕಾರ್ಜುನ ಗಿರಿ ಮೊದಲಾದ ಬೆಟ್ಟಗಳು ಸುತ್ತುವರಿದಿವೆ.

ವಿಶೇಷ ಬಸ್ ಸೌಲಭ್ಯ: ಹಿವಮದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಪ್ರತಿನಿತ್ಯ ಬಸ್ ವ್ಯವಸ್ಥೆ ಇದೆ. ಆದರೆ ಬ್ರಹ್ಮ ರಥೊತ್ಸವದ ದಿನ ಗುಂಡ್ಲುಪೇಟೆ ಕೆಎಸ್‌ಆರ್‌ಟಿಸಿ ನಿಲ್ದಾಣದಿಂದ ಹೆಚ್ಚುವರಿ ಬಸ್‌ಗಳ ವ್ಯವಸ್ಥೆ ಇರುತ್ತದೆ. ಖಾಸಗಿ ವಾಹನಗಳಲ್ಲಿ ತೆರಳುವವರು, ಚೆಕ್‌ಪೋಸ್ಟ್ ಬಳಿ ಇರುವ ಅರಣ್ಯ ಇಲಾಖೆ ಆವರಣದಲ್ಲಿ ಪಾರ್ಕಿಂಗ್ ಮಾಡಿ, ಬೆಟ್ಟಕ್ಕೆ ಸೀಮಿತವಾಗಿ ನಿಗದಿಪಡಿಸಿರುವ ಕೆಎಸ್‌ಆರ್‌ಟಿಸಿ ಬಸ್‌ಗಳ ಮೂಲಕ ತೆರಳಲು ವ್ಯವಸ್ಥೆ ಕಲ್ಪಿಸಲಾಗಿದೆ. ಅರಣ್ಯ ಇಲಾಖೆಯಿಂದ ಜೀಪ್‌ನಲ್ಲಿ ಕರೆದೊಯ್ಯುವ ವ್ಯವಸ್ಥೆಯೂ ಇದೆ.

“ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಹೋದಾಗ ಊಟಿಯಲ್ಲಿರುವ ಅನುಭವವಾಗುತ್ತದೆ. ಬೇಸಿಗೆಯಲ್ಲೂ ತಂಪಾದ ವಾತಾವರಣ ಇರುತ್ತದೆ. ಶೀತ ಗಾಳಿ ಬೀಸುತ್ತದೆ. ಇನ್ನು ಬೇರೆ ದಿನಗಳಲ್ಲಿ ಮಂಜು ಕವಿದ ವಾತಾವರಣದ ಆಹ್ಲಾದಕರ ಅನುಭವದ ಜೊತೆಗೆ ದೇವಾಲಯದ ಸುತ್ತಲಿನ ಮನಮೋಹಕ ದೃಶ್ಯ ಎಲ್ಲರನ್ನೂ ಆಕರ್ಷಿಸುತ್ತದೆ. ಹಾಗಾಗಿಯೇ ವಿವಿಧ ರಾಜ್ಯಗಳಿಂದ, ವಿದೇಶಗಳಿಂದಲೂ ಪ್ರವಾಸಿಗರು ಆಗಮಿಸುತ್ತಾರೆ. ವಿವಿಧ ಕ್ಷೇತ್ರಗಳ ಗಣ್ಯರು ಕೂಡ ಭಾಗಿಯಾಗಿ ಕಣ್ತುಂಬಿ ಕೊಳ್ಳುತ್ತಾರೆ.”

– ಮಹೇಂದ್ರ ಹಸಗೂಲಿ

ಆಂದೋಲನ ಡೆಸ್ಕ್

Recent Posts

ನೇಪಾಳದಲ್ಲಿ ಮತ್ತೆ ಪ್ರವಾಹ, ಭೂಕುಸಿತ

ಕಠ್ಮಂಡು: ನೇಪಾಳದಲ್ಲಿ ಮತ್ತೆ ಪ್ರವಾಹ, ಭೂಕುಸಿತದ ಆರ್ಭಟ ಮುಂದುವರಿದಿದ್ದು, ಕೇವಲ 8 ಸೆಕೆಂಡ್‌ಗಳಲ್ಲಿ ಪರ್ವತವೇ ಕುಸಿದು ಬಿದ್ದಿದೆ! ವಿವಿಧೆಡೆ ಸಂಭವಿಸಿದ…

15 hours ago

ಕಾಡುಹಂದಿ ದಾಳಿ: ರೈತನಿಗೆ ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪಳನಿಮೇಡ್ ಗ್ರಾಮದಲ್ಲಿ ರೈತನ ಮೇಲೆ ಕಾಡುಹಂದಿ ದಾಳಿ ಮಾಡಿದ್ದು,…

15 hours ago

ಶೀಘ್ರದಲ್ಲೇ ಅಕ್ರಮ ಸೈಟ್‌ಗಳ ಪಟ್ಟಿ ಬಿಡುಗಡೆ: ಸಚಿವ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಮುಡಾ 50:50 ಸೈಟ್‌ ವಿಚಾರದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಮಹತ್ವದ ಮಾಹಿತಿ ನೀಡಿದ್ದಾರೆ. ಶೀಘ್ರದಲ್ಲೇ ಅಕ್ರಮ ಸೈಟ್‌ಗಳ…

16 hours ago

ಮೈಸೂರು ದಸರಾ ಉದ್ಘಾಟನೆ ಆಹ್ವಾನ ತಿರಸ್ಕರಿಸಿಲ್ಲ: ಗವಿಸಿದ್ಧೇಶ್ವರ ಶ್ರೀಗಳಿಂದ ಸ್ಪಷ್ಟನೆ

ಕೊಪ್ಪಳ: ಮೈಸೂರು ದಸರಾ ಉದ್ಘಾಟನೆ ಕುರಿತು ಹರಿದಾಡುತ್ತಿದ್ದ ವದಂತಿಗಳಿಗೆ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿ ತೆರೆ ಎಳೆದಿದ್ದಾರೆ. ಮೈಸೂರು ದಸರಾ ಉದ್ಘಾಟನೆಗೆ…

18 hours ago

ಬ್ಯಾಂಕ್‌ ಗ್ರಾಹಕರಿಗೆ ಗುಡ್‌ನ್ಯೂಸ್‌: ಇಂದಿನಿಂದ 3 ದಿನ ಕರೆ ನೀಡಿದ್ದ ಬ್ಯಾಂಕ್‌ ಮುಷ್ಕರ ಮುಂದೂಡಿಕೆ

ನವದೆಹಲಿ: ಬ್ಯಾಂಕ್‌ ಗ್ರಾಹಕರಿಗೆ ಯಾವುದೇ ಆತಂಕ ಬೇಡ. ಇಂದಿನಿಂದ ನಡೆಯಬೇಕಿದ್ದ 3 ದಿನಗಳ ಬ್ಯಾಂಕ್‌ ಮುಷ್ಕರ ಮುಂದೂಡಿಕೆಯಾಗಿದೆ. ಬ್ಯಾಂಕ್‌ ಸೇವೆಗಳಲ್ಲಿ…

18 hours ago

ಎಸ್‌ಐಆರ್: ಜನಾಗ್ರಹಕ್ಕೆ ದೊರೆಯಲಿ ಮನ್ನಣೆ

ಪ್ರಜಾತಂತ್ರ ವ್ಯವಸ್ಥೆಯ ಭಾರತದಲ್ಲಿ ಪ್ರತಿ ಐದು ವರ್ಷಗಳಿಗೊಮ್ಮೆ ಸಂಸತ್ತು ಮತ್ತು ವಿಧಾನಸಭೆಗಳಿಗೆ ಮುಕ್ತ ಮತ್ತು ನಿಷ್ಪಕ್ಷಪಾತ ಚುನಾವಣೆಯನ್ನು ನಡೆಸುವ ಮೂಲಕ…

22 hours ago