ಎಡಿಟೋರಿಯಲ್

ಯಾರೋ ಮಾಡಿದ ತಪ್ಪಿಗೆ ಮನೆಪಾಠದ ಶಿಕ್ಷಕರ ಮೇಲೆ ಬರೆ ಏಕೆ?

ಮಂಡ್ಯ ಜಿಲ್ಲೆಯ ಮಳವಳ್ಳಿಯ10  ವರ್ಷದ ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾಚಾರ ಘಟನೆ ಖಂಡನೀಯ ಹಾಗೂ ವಿಷಾದನೀಯ ಕೃತ್ಯ. ಈ ಪೈಶಾಚಿಕ ಕೃತ್ಯಕ್ಕೆ ಕ್ಷಮೆಯೇ ಇಲ್ಲ. ಅಪರಾಧಿಗೆ ಕಠಿಣ ಶಿಕ್ಷೆಯಾಗಬೇಕೆಂಬುದರಲ್ಲಿ ಎರಡು ಮಾತಿಲ್ಲ. ಅದು ಎಲ್ಲರ ಏಕಾಭಿಪ್ರಾಯವೂ ಹೌದು.

ಮೊದಲಿಗೆ ಮಂಡ್ಯ ಜಿಲ್ಲೆ, ನಂತರ ರಾಜ್ಯಾದ್ಯಂತ ಅನಧಿಕೃತ ಮನೆ ಪಾಠ ಕೇಂದ್ರಗಳ ಮೇಲೆ ಕಾನೂನು ಕ್ರಮವಹಿಸಿ, ಮುನ್ನೆಚ್ಚರಿಕೆ ಕ್ರಮವಾಗಿ ಮುಚ್ಚಿಸಿರುವ ಸರ್ಕಾರದ ಕ್ರಮ ಶ್ಲಾಘನೀಯ . ಆದರೆ, ಶಿಕ್ಷಣ ಇಲಾಖೆಯವರು ನಡೆಸಿದ ತನಿಖೆಯಲ್ಲಿ ಈ ದುಷ್ಕೃತ್ಯವೆಸಗಿದ ವ್ಯಕ್ತಿ ಶಿಕ್ಷಕನೇ ಅಲ್ಲ ಎಂಬ ಸಂಗತಿ ಬೆಳಕಿಗೆ ಬಂದಿದೆ. ಹಾಗಾಗಿ ಯಾರೋ ಅವಿವೇಕಿ ದುಷ್ಟನೊಬ್ಬ ಮಾಡಿದ ತಪ್ಪಿಗೆ ಇಡೀ ಶಿಕ್ಷಕ ಸಮುದಾಯವನ್ನು ದೂಷಿಸುತ್ತಿರುವುದು ನೋವಿನ ಸಂಗತಿ.

 

ರಾಜ್ಯದಲ್ಲಿ ಅರ್ಹತೆ ಪಡೆದ ನಿರುದ್ಯೋಗಿ ಶಿಕ್ಷಕರಿದ್ದಾರೆ. ಇಂದಿನ ಜೀವನ ಸಮಸ್ಯೆಗಳ ಸರಮಾಲೆಯಲ್ಲಿ ಶಿಕ್ಷಕರು ಪದವಿ ಪಡೆದು ಅದೆಷ್ಟೋ ವಿಶೇಷ ಚೇತನರು, ವಿಧವೆಯರು, ಅಸಹಾಯಕರು ಮನೆಪಾಠ ನಂಬಿ ಸ್ವಾಭಿಮಾನದ ಬದುಕು ರೂಪಿಸಿಕೊಂಡಿದ್ದಾರೆ.

ಶಿಕ್ಷಣ ಕಾಯಿದೆ ನಿಯಮ 36ರಂತೆ ಯಾವುದೇ ಶಿಕ್ಷಣ ಸಂಸ್ಥೆ ಅಥವಾ ಕೋಚಿಂಗ್ ಸೆಂಟರ್  ಇಲಾಖಾ ನೋಂದಣಿ ಇಲ್ಲದೆ ನಡೆಸಲು ಅವಕಾಶವಿರುವುದಿಲ್ಲ. ಈ ಆದೇಶವನ್ನು ಘಟನೆಯ ನಂತರ ಜಾರಿಗೆ ತರಲು ಶಿಕ್ಷಣ ಇಲಾಖೆ ಮುಂದಾಗಿದೆ. ಏಕಾಏಕಿ ಜಾರಿಗೆ ಮುಂದಾಗಿರುವುದರಿಂದ ಸಮಸ್ಯೆ ಉದ್ಭವಿಸಿದೆ. ಪದವಿ ನಿರುದ್ಯೋಗಿಗಳಿಗೆ ಶಿಕ್ಷಣ ಇಲಾಖೆಯ ದಿಢೀರ್ ಆದೇಶ ಆಘಾತ ನೀಡಿದೆ. ನಿರುದ್ಯೋಗಿಗಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಗಣನೀಯವಾಗಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಅತ್ಯಂತ ಕನಿಷ್ಠವಾದ ಮಾಸಿಕ ೩ ಸಾವಿರ ರೂ. ಸಂಬಳಕ್ಕೆ ಖಾಸಗಿ ಶಾಲೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಶಿಕ್ಷಕರ ಸಂಖ್ಯೆ ಕಡಿಮೆಯೇನಿಲ್ಲ. ಅವರು ಸಂಜೆ ಮನೆ ಪಾಠದ ಮೂಲಕ ಬದುಕಿಗೆ ಬೇಕಾದ ಪೂರಕ ವ್ಯವಸ್ಥೆಗಳಿಗೆ ಅನುಕೂಲವಾಗುವಂತೆ ಶ್ರಮಿಸುತ್ತಿದ್ದಾರೆ. ಕೊರೋನಾ ಅವಧಿಯಲ್ಲಿ ಶೈಕ್ಷಣಿಕ ಪ್ರಗತಿ ಕುಂಠಿತವಾಗಿರುವ ವಿಷಯ ಎಲ್ಲರಿಗೂ ತಿಳಿದಿದೆ. ಇಂತಹ ಸಮಯದಲ್ಲಿ ಶೈಕ್ಷಣಿಕ ಚಟುವಟಿಕೆಗೆ ವೇಗ ನೀಡಬೇಕಾಗಿರುವ ಹಿನ್ನೆಲೆಯಲ್ಲಿ ಸಂಜೆಯ ಮನೆಪಾಠ ಪ್ರಸ್ತುತ ಅನಿವಾರ್ಯ ಎಂಬ ಮನೋಭಾವ ಮಕ್ಕಳ ಪೋಷಕರಲ್ಲಿದೆ.

ಹಾಗೊಂದು ವೇಳೆ ಬದಲಿ ವ್ಯವಸ್ಥೆ ಮಾಡುವುದಾದರೆ ಪ್ರಸ್ತುತ ಶಾಲಾ ಪಾಠ ಪ್ರವಚನಗಳ ಸಮಯವನ್ನು ವಿಸ್ತರಿಸಿ ಶೈಕ್ಷಣಿಕ ಚಟುವಟಿಕೆಗೆ ವೇಗ ನೀಡಲು ಸಾಧ್ಯವೇ? ಇಲಾಖೆ ದಿಢೀರ್ ಆದೇಶದಿಂದ ಶಾಲೆ ಅವಧಿ ಮುಗಿದ ನಂತರ ವಿದ್ಯಾರ್ಥಿಗಳು ಪಾನಿಪುರಿ ಅಂಗಡಿ, ಹೋಟೆಲ್‌ಗಳಲ್ಲಿ , ಗ್ಯಾರೇಜ್, ಹಣ್ಣು ಅಂಗಡಿಗಳಲ್ಲಿ ಕೆಲಸಕ್ಕೆ ಆಸೆಪಟ್ಟು ಸೇರಿದರೆ ಬಾಲ ಕಾರ್ಮಿಕರ ಸಂಖ್ಯೆ ಹೆಚ್ಚಾಗುವ ಹಾಗೂ ಶೈಕ್ಷಣಿಕ ಪ್ರಗತಿ ಕುಂಠಿತವಾಗುವ ಸಾಧ್ಯತೆಗಳು ಇಲ್ಲದಿದ್ದಲ್ಲ.

ಅಧಿಕೃತ ಮನೆ ಪಾಠಗಳನ್ನು ಮಾಡಲು ಪ್ರಾಥಮಿಕ ಶಾಲೆಗೆ ಇಂತಿಷ್ಟು ಪ್ರಮಾಣ ಹಾಗೂ ಪ್ರೌಢಶಾಲೆಗೆ ಇಂತಿಷ್ಟು ಪ್ರಮಾಣದಲ್ಲಿ ಹಣ ನಿಗದಿಪಡಿಸಿದ್ದು, ಕನಿಷ್ಠ ಸಂಬಳಕ್ಕೆ ಖಾಸಗಿ ಶಾಲೆಗಳಲ್ಲಿ ಹಾಗೂ ತಾತ್ಕಾಲಿಕ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಬಡ ಶಿಕ್ಷಕರು ಲಕ್ಷಗಟ್ಟಲೆ ಹಣ ನೀಡಿ ನೋಂದಾವಣೆ ಮಾಡಿಕೊಳ್ಳಲು ಕಷ್ಟಕರವಾಗಿದೆ. ಹಾಗಾಗಿ ಗ್ರಾಮೀಣ ಪ್ರದೇಶದಲ್ಲಿ ಮನೆಪಾಠ ಮಾಡಿಕೊಂಡು ಲಕ್ಷಗಟ್ಟಲೆ ಹಣಗಳಿಸಲು ಸಾಧ್ಯವಿಲ್ಲ. ಬಡ ಮಕ್ಕಳಿಗೆ ಉಚಿತ ಪಾಠ ಮಾಡುತ್ತಿದ್ದ ಶಿಕ್ಷಕರು ಸೇವೆ ನಿಲ್ಲಿಸಬೇಕೆ? ಶಿಕ್ಷಣ ಇಲಾಖೆಯ ಆದೇಶದಂತೆ ಅಧಿಕೃತ ನೋಂದಣಿ ಮಾಡುವುದಾದರೆ ಒಂದು ಶಾಲೆಯನ್ನೇ ತೆಗೆಯಬಹುದಾದಂತಹ ನಿಯಮಗಳಿವೆ. ಈ ವಿಷಯದಲ್ಲಿ ಪೋಷಕರ ಜವಾಬ್ದಾರಿ ಕೂಡ ದೊಡ್ಡದು.

ಶಿಕ್ಷಕ ಪದವಿ ಪಡೆದ ಅರ್ಹ ವ್ಯಕ್ತಿ ಎಂದು ಗುರುತಿಸಿ ಅವರ ಬಳಿ ಮನೆಪಾಠಕ್ಕೆ ತಮ್ಮ ಮಕ್ಕಳನ್ನು ಕಳುಹಿಸುವ ಜವಾಬ್ದಾರಿಯನ್ನು ಕೂಡ ಪೋಷಕರು ಮೆರೆಯಬೇಕು. ಇತ್ತೀಚೆಗೆ ಕೇಂದ್ರ ಸರ್ಕಾರ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೆ ತಂದಿರುವ ಹಿನ್ನೆಲೆಯಲ್ಲಿ ಕ್ಲಿಷ್ಟಕರವಾದ ವಿಷಯಗಳನ್ನು ಅರ್ಥ ಮಾಡಿಕೊಂಡು ಮನೆಪಾಠದ ಅವಶ್ಯಕತೆ ಖಂಡಿತ ಅನಿವಾರ್ಯವಾಗಿದೆ ಎಂಬುದು ಹಲವು ಶಿಕ್ಷಕರ ಮನದಾಳದ ಮಾತು.

ಸರ್ಕಾರ ಸದ್ಯದಲ್ಲೇ ಸಮಿತಿ ರಚಿಸಿ ಕೆಲವು ನೀತಿ ರೂಪಿಸಿ, ನಿಯಮಗಳನ್ನು ಹಾಗೂ ಸಾಧಕ ಬಾಧಕಗಳನ್ನು ವಿಶ್ಲೇಷಣೆ ಮಾಡಿ ಸೇವಾ ದೃಷ್ಟಿಯಲ್ಲಿ ಕನಿಷ್ಠ ಗುರುಕಾಣಿಕೆ ಹಾಗೂ ಅಂತಹ ಉಚಿತ ಮನೆಪಾಠಗಳು ಹಾಗೂ ಬದುಕಿಗಾಗಿ ಮಾಡುವಂಥ ಮನೆಪಾಠಗಳ ಜೊತೆಗೆ ವಿದ್ಯಾರ್ಥಿಗಳ ರಕ್ಷಣಾ ದೃಷ್ಟಿಯಿಂದ ಹಾಗೂ ಶೈಕ್ಷಣಿಕ ಪ್ರಗತಿಗಾಗಿ ಕೈಗೊಳ್ಳಬೇಕಾದಂತಹ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಮಾಹಿತಿ ಪಡೆದುಕೊಂಡು ಶಿಕ್ಷಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆ ಆಗದಂತೆ ಮುನ್ನೆಚ್ಚರಿಕೆ ವಹಿಸಿ ಸಮಸ್ಯೆಗಳನ್ನು ಸುಖಾಂತ್ಯ ಮಾಡಿ ಮನೆಪಾಠ ಮಾಡುವಂಥ ವ್ಯಾಪ್ತಿಯಲ್ಲೇ ನೋಂದಾವಣಿ ಮಾಡುವ ವ್ಯವಸ್ಥೆ ಮಾಡಬೇಕಾಗಿದೆ.

andolana

Recent Posts

ಸಿಲಿಂಡರ್ ಸ್ಪೋಟ ಪ್ರಕರಣ : ಸಾವಿನ ಸಂಖ್ಯೆ 3ಕ್ಕೆ ಏರಿಕೆ

ಮೈಸೂರು : ಮೈಸೂರು ಅರಮನೆ ಮುಂಭಾಗ ನಿನ್ನೆ ಸಂಜೆ ನಡೆದಿದ್ದ ಹೀಲಿಯಂ ಸ್ಫೋಟ ಪ್ರಕರಣದಲ್ಲಿ ಸಾವಿನ ಸಂಖ್ಯೆ ಇದೀಗ ಮೂರಕ್ಕೆ…

7 hours ago

ಮರ್ಯಾದೆಗೇಡು ಹತ್ಯೆ ವಿರೋಧಿಸಿ ಸಹಿ ಸಂಗ್ರಹ

ಮೈಸೂರು : ಹುಬ್ಬಳ್ಳಿಯಲ್ಲಿ ನಡೆದ ಮರ್ಯಾದಗೇಡು ಹತ್ಯೆ ವಿರೋಧಿಸಿ ಮತ್ತು ಮರ್ಯಾದೆಗೇಡು ಹತ್ಯೆ ತಡೆಗೆ ಕಠಿಣ ಕಾಯಿದೆ ರೂಪಿಸಬೇಕು ಎಂದು…

11 hours ago

ಕೆ.ಆರ್.ಆಸ್ಪತ್ರೆ ಶೆಡ್ ನಲ್ಲಿ ಬೆಂಕಿ : ಹಾಸಿಗೆಗಳು ಬೆಂಕಿಗಾಹುತಿ

ಮೈಸೂರು : ಇಲ್ಲಿನ ಕೆ.ಆರ್. ಆಸ್ಪತ್ರೆಯ ಶೆಡ್ ನಲ್ಲಿ ಬೆಂಕಿ ಕಾಣಿಸಿಕೊಂಡು ಆಸ್ಪತ್ರೆಯ ಹಾಸಿಗೆಗಳು ಬೆಂಕಿಗಾಹುತಿಯಾಗಿವೆ. ಆಸ್ಪತ್ರೆಯ ಚೆಲುವಾಂಬ ವಾರ್ಡ್…

11 hours ago

ಹೊಸ ವರ್ಷಾಚರಣೆಗೆ ಮುನ್ನೆಚ್ಚರಿಕೆ : ಸೂಕ್ಷ ಪ್ರದೇಶಗಳ ಬಗ್ಗೆ ಸಮೀಕ್ಷೆ ವರದಿಗೆ ಸೂಚನೆ

ಬೆಂಗಳೂರು : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುರಿತಂತೆ ಪ್ರಶ್ನೆಗಳು ಉದ್ಭವಿಸಿರುವ ಸಂದರ್ಭದಲ್ಲಿ, ಹೊಸ ವರ್ಷಾಚರಣೆಯ ವೇಳೆ ಯಾವುದೇ ಅವಘಡ ನಡೆಯದಂತೆ…

12 hours ago

ಸಿಲಿಂಡರ್‌ ಸ್ಪೋಟ ಪ್ರಕರಣ : ಚಿಕಿತ್ಸೆ ಪಡೆಯುತ್ತಿದ್ದ ಗಾಯಾಳು ಮಂಜುಳ ಸಾವು

ಮೈಸೂರು : ಮೈಸೂರಿನ ವಿಶ್ವ ವಿಖ್ಯಾತ ಅರಮನೆ ಸಮೀಪ ಸಂಭವಿಸಿದ್ದ ಹೀಲಿಯಂ ಗ್ಯಾಸ್ ಸಿಲೆಂಡರ್ ಸ್ಫೋಟ ದುರಂತದಲ್ಲಿ ಸಾವಿನ ಸಂಖ್ಯೆ…

13 hours ago

ಇತಿಹಾಸ ಸೃಷ್ಟಿಸಿದ ಬಿಜೆಪಿ : ತಿರುವನಂತಪುರಂನ ಮೇಯರ್ ಆಗಿ ವಿ.ವಿ.ರಾಜೇಶ್ ಆಯ್ಕೆ

ತಿರುವನಂತಪುರಂ : ಬಿಜೆಪಿಯಿಂದ ಮೊದಲ ಬಾರಿಗೆ ತಿರುವನಂತಪುರಂ ನಗರ ಮೇಯರ್ ಆಗಿ ಆಯ್ಕೆಯಾಗುವ ಮೂಲಕ ವಿ.ವಿ.ರಾಜೇಶ್ ಇತಿಹಾಸ ನಿರ್ಮಿಸಿದ್ದಾರೆ. 49…

13 hours ago