ಎಡಿಟೋರಿಯಲ್

ರಾಹುಲ್‌ಗೆ ವರ ಆದೀತೇ ಮೋದಿ-ಶಾ ಸೇಡಿನ ಕ್ರಮ?

ಮೋದಿ’ ಉಪನಾಮ ಟೀಕೆಗೆ ಸಂಬಂಧಿಸಿದ ಮಾನನಷ್ಟ ಪ್ರಕರಣದ ಶಿಕ್ಷೆಗೆ ತಡೆ ಕೋರಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಲ್ಲಿಸಿದ್ದ ಅರ್ಜಿಯನ್ನು ಸೂರತ್‌ನ ನ್ಯಾಯಾಲಯ ತಿರಸ್ಕರಿಸಿದೆಹೀಗಾಗಿ ಎರಡು ವರ್ಷಗಳ ಜೈಲು ಶಿಕ್ಷೆಯ ಕತ್ತಿ ರಾಹುಲ್ ತಲೆಯ ಮೇಲೆ ತೂಗಿದೆನಿವಾರಿಸಿಕೊಳ್ಳಲು ಉಳಿದಿರುವ ದಾರಿ ಮತ್ತು ಸಮಯ ಅತ್ಯಲ್ಪಉಚ್ಚ ನ್ಯಾಯಾಲಯಸರ್ವೋಚ್ಚ ನ್ಯಾಯಾಲಯ ತಡೆಯಾಜ್ಞೆ ನೀಡದೆ ಹೋದರೆ ಅವರು ಜೈಲಿಗೆ ಹೋಗಬೇಕಾಗುವುದೇಕಾದು ನೋಡಬೇಕಿದೆ.

ಅದಾನಿಮೋದಿ ಸಂಬಂಧವನ್ನು ನಿರಂತರವಾಗಿ ಪ್ರಶ್ನಿಸಿ ಪ್ರಧಾನಿಯವರಿಗೆ ಮುಜುಗರ ಮೂಡಿಸುತ್ತಿರುವ ರಾಹುಲ್ ಅವರನ್ನು ಹೇಗಾದರೂ ಮಾಡಿ ಜೈಲಿಗೆ ಕಳಿಸಿಯೇ ತೀರಬೇಕೆಂದು ಮೋದಿ ಸರ್ಕಾರ ಮಿಂಚಿನ ವೇಗದಲ್ಲಿ ತೀರ್ಮಾನಿಸಿದಂತಿದೆಇಲ್ಲವಾದರೆ ರಾಹುಲ್ ವಿರುದ್ಧದ ಮಾನಹಾನಿ ಮೊಕದ್ದಮೆ ಇಷ್ಟು ಅಸಹಜ ವೇಗದಲ್ಲಿ ಇತ್ಯರ್ಥ ಆಗುವುದು ಅನುಮಾನವಿತ್ತು.

ಕೋಲಾರದ ಚುನಾವಣಾ ಪ್ರಚಾರ ಸಭೆಯಲ್ಲಿ ರಾಹುಲ್ ಆಡಿದ ಮಾತಿನಿಂದ ಮಾನಹಾನಿಯಾಗಿದೆ ಎಂದು ಗುಜರಾತಿನ ಬಿಜೆಪಿ ಶಾಸಕ ಸೂರತ್‌ನಲ್ಲಿ ದೂರು ನೀಡಿದ್ದು, 2019ರ ಏಪ್ರಿಲ್ 16ರಂದುಆಗ ದವೆ ಎಂಬವರು ಮ್ಯಾಜಿಸ್ಟ್ರೇಟ್ ಆಗಿದ್ದರು. 2021ರ ಜೂನ್ ತಿಂಗಳಲ್ಲಿ ರಾಹುಲ್ ಗಾಂಧಿ ಸೂರತ್ ನ್ಯಾಯಾಲಯದಲ್ಲಿ ಹಾಜರಾಗಿ ತಮ್ಮ ಹೇಳಿಕೆಯನ್ನು ನೀಡುತ್ತಾರೆರಾಹುಲ್ ಹೇಳಿಕೆಯ ಸಾಕ್ಷ್ಯಗಳನ್ನು ಮಂಡಿಸಿ ರಾಹುಲ್ ಗಾಂಧಿ ಅವರನ್ನು ಪುನಃ ನ್ಯಾಯಾಲಯದ ಮುಂದೆ ಕರೆಯಬೇಕೆಂದು ಬಿಜೆಪಿ ಶಾಸಕ ಪೂರ್ಣೇಶ್ ಮೋದಿ 2022ರ ಮಾರ್ಚ್ ತಿಂಗಳಲ್ಲಿ ನ್ಯಾಯಾಲಯವನ್ನು ಕೋರುತ್ತಾರೆನ್ಯಾಯಾಧಿಶ ದವೆ ಈ ಅರ್ಜಿಯನ್ನು ತಳ್ಳಿ ಹಾಕುತ್ತಾರೆಈ ಬೆಳವಣಿಗೆಯ ನಂತರ ತಾವೇ ನಡೆಸಿದ್ದ ಖಟ್ಲೆಗೆ ಹೈಕೋರ್ಟಿನಿಂದ ತಡೆಯಾಜ್ಞೆ ತರುತ್ತಾರೆ ಪೂರ್ಣೇಶ್ಒಂದು ವರ್ಷ ಕಾಲ ತಣ್ಣಗೆ ಕುಳಿತಿದ್ದ ಪೂರ್ಣೇಶ್ ಇದೇ ಫೆಬ್ರವರಿ 16ರಂದು ಹಠಾತ್ತನೆ ಹೈಕೋರ್ಟ್ ಮುಂದೆ ಹೋಗುತ್ತಾರೆಮೊಕದ್ದಮೆಗೆ ಅಗತ್ಯವಿರುವ ಸಾಕ್ಷ್ಯ ಪುರಾವೆಗಳು ಸಂಗ್ರಹವಾಗಿವೆಯೆಂದು ನಿವೇದಿಸಿಕೊಂಡುತಡೆಯಾಜ್ಞೆ ತೆರವು ಮಾಡಿಸುತ್ತಾರೆಪೂರ್ಣೇಶ್ ಪುನಃ ಸೂರತ್ ಮ್ಯಾಜಿಸ್ಟ್ರೇಟ್ ಕೋರ್ಟಿನ ಮುಂದೆ ಸಕ್ರಿಯರಾಗುತ್ತಾರೆಈ ನಡುವೆ ನ್ಯಾಯಾಽಶ ದವೆಯವರ ಸ್ಥಾನಕ್ಕೆ ನ್ಯಾಯಾಧೀಶ ಎಚ್.ಎಚ್.ವರ್ಮ ಬಂದಿರುತ್ತಾರೆತಿಂಗಳೊಪ್ಪತ್ತಿನಲ್ಲಿ ಶಿಕ್ಷೆಯ ತೀರ್ಪು ಪ್ರಕಟವಾಗುತ್ತದೆ.

ಕಳೆದ 19 ವರ್ಷಗಳಿಂದ ವಾಸವಿದ್ದ ಸರ್ಕಾರಿ ಬಂಗಲೆಯನ್ನು ಖಾಲಿ ಮಾಡಬೇಕೆಂಬ ಕೇಂದ್ರ ಸರ್ಕಾರದ ನೋಟಿಸಿಗೆ ತಡಮಾಡದೆ ಪ್ರತಿಕ್ರಿಯಿಸಿರುವ ರಾಹುಲ್ ತೆರವು ಮಾಡಿ ಬೀಗದ ಕೈಗಳನ್ನು ಅಽಕಾರಿಗಳಿಗೆ ಒಪ್ಪಿಸಿದ್ದಾರೆಒಂದು ವೇಳೆ ರಾಹುಲ್ ಜೈಲಿಗೆ ಹೋಗಬೇಕಾಗಿ ಬಂದರೂ ರಾಜಕೀಯವಾಗಿ ಅವರು ಕಳೆದುಕೊಳ್ಳುವುದಕ್ಕಿಂತ ಗಳಿಸಿಕೊಳ್ಳುವುದೇ ಹೆಚ್ಚುಮಂಕಾಗಿರುವ ಕಾಂಗ್ರೆಸ್ಸು ಮತ್ತು ಪ್ರತಿಪಕ್ಷ ರಾಜಕಾರಣ ಸಂಘರ್ಷದ ದಾರಿ ಹಿಡಿಯಲು ಈ ಘಟನೆ ವೇಗವರ್ಧಕ ಆದರೂ ಆಶ್ಚರ್ಯವಿಲ್ಲ.

1977ರ ಅಕ್ಟೋಬರ್‌ನಲ್ಲಿ ಅಂದಿನ ಜನತಾ ಪಕ್ಷದ ನೇತೃತ್ವದ ಕೇಂದ್ರ ಸರ್ಕಾರ ಇಂದಿರಾ ಗಾಂಧಿ ಅವರನ್ನು ಬಂಧಿಸಿ ಸೆರೆಮನೆಗೆ ಕಳಿಸಿತ್ತುಈ ಸೇಡಿನ ಕ್ರಮ ಜನತಾಪಕ್ಷಕ್ಕೆ ತಿರುಗುಬಾಣವಾಗಿ ಪರಿಣಮಿಸಿತು. 1978ರ ನವೆಂಬರ್‌ನಲ್ಲಿ ಇಂದಿರಾ ಗಾಂಧಿ ಚಿಕ್ಕಮಗಳೂರಿನಿಂದ ಲೋಕಸಭೆಗೆ ಆರಿಸಿ ಬಂದರುಜನತಾ ಸರ್ಕಾರ ಪತನವಾಗಿ ಎರಡೇ ವರ್ಷಗಳಲ್ಲಿ ಇಂದಿರಾ ಅಧಿಕಾರಕ್ಕೆ ಮರಳಿದ್ದರುಅಂದಾಕ್ಷಣ ದೇಶದ ಮೇಲೆ ಇಂದಿರಾ ಹೇರಿದ್ದ ತುರ್ತುಪರಿಸ್ಥಿತಿಯನ್ನು ಜನ ಸಮರ್ಥಿಸಿದರೆಂದು ಅರ್ಥವಲ್ಲಇಂದಿರಾ ಅವರ ಈ ಪ್ರಕರಣ ಇಂದಿನ ರಾಜಕಾರಣದಲ್ಲಿ ಕಾಂಗ್ರೆಸ್ ಅಥವಾ ರಾಹುಲ್ ಪಾಲಿಗೆ ಅಂದಿನ ರೂಪದಲ್ಲೇ ಮರುಕಳಿಸಬೇಕೆಂದೇನೂ ಇಲ್ಲರಾಜಕಾರಣದಲ್ಲಿ ಸೇಡು ತೀರಿಸಿಕೊಳ್ಳಲು ವ್ಯಕ್ತಿಯ ಹಿಂದೆ ಬೆನ್ನು ಬಿದ್ದು ಬೇಟೆಯಾಡುವ ಅಧಿಕಾರಸ್ಥರ ಪ್ರವೃತ್ತಿಯನ್ನು ಮತದಾರರು ಸುಲಭಕ್ಕೆ ಒಪ್ಪುವುದಿಲ್ಲ ಎಂಬ ಕಟು ಸತ್ಯವನ್ನು ಇಂದಿರಾ ಪ್ರಕರಣ ಎತ್ತಿ ತೋರಿದೆ.

ಇತ್ತೀಚೆಗೆ ಲೋಕಸಭೆಯಲ್ಲಿ ರಾಹುಲ್ ಭಾಷಣಗಳು ಆಳುವ ಪಕ್ಷವನ್ನು ಮುಜುಗರಕ್ಕೆ ಸಿಲುಕಿಸಿದ್ದವುಭಾರತ್ ಜೋಡೊ ಯಾತ್ರೆಯ ಯಶಸ್ಸಿನ ನಂತರ ರಾಹುಲ್ ಆಕ್ರಮಣಕ್ಕೆ ಮತ್ತಷ್ಟು ಮೊನಚು ಮೂಡಿತ್ತುಅದಾನಿ– ಮೋದಿಯವರ ಸಂಬಂಧವನ್ನು ಸದನದಲ್ಲಿ ಪ್ರಶ್ನಿಸಿದ್ದರುಅದಾನಿ ಷೇರು ಹಗರಣದ ತನಿಖೆಗೆ ಜಂಟಿ ಸದನ ಸಮಿತಿ ರಚಿಸುವಂತೆ ಆಗ್ರಹಿಸಿದ್ದರುಅದಾನಿ ಕುರಿತ ಯಾವ ಆಪಾದನೆಗಳಿಗೂ ಮೋದಿಯವರು ಸದನದಲ್ಲಿ ಉತ್ತರ ನೀಡಿರಲಿಲ್ಲ.

ರಾಹುಲ್ ಅವರನ್ನು ತೀವ್ರ ತೇಜೋವಧೆ ಮಾಡಿಪಪ್ಪು ಎಂಬ ಸುಳ್ಳನ್ನೇ ಸಾವಿರ ಬಾರಿ ಹೇಳಿ ಸತ್ಯವಾಗಿಸುವ ಗೆಬೆಲ್ಸ್ ಪ್ರಚಾರ ತಂತ್ರ ಬಹುತೇಕ ಫಲ ನೀಡಿತ್ತುಈ ತೇಜೋವಧೆ ತಮ್ಮನ್ನು ತಾಕಿಯೇ ಇಲ್ಲವೆಂಬ ಮಾನಸಿಕ ಗಟ್ಟಿತನ ತೋರಿ ನೆಲಕಚ್ಚಿ ನಿಂತಿರುವ ಕಾಂಗ್ರೆಸ್ ತಲೆಯಾಳು ಸುಲಭವಾಗಿ ಸೋಲೊಪ್ಪುತ್ತಿಲ್ಲಭಾರತ್ ಜೋಡೊ ಯಾತ್ರೆಯು ರಾಹುಲ್ ತೇಜೋ ವಧೆಯ ತಂತ್ರವನ್ನು ದುರ್ಬಲವಾಗಿಸಿದೆ.

ಕಡು ಕೋಮುವಾದಿ ರಾಜಕಾರಣದ ವಿಜೃಂಭಣೆಯ ನಡುವೆ ಪ್ರತಿಪಕ್ಷಗಳು ನಿಸ್ತೇಜವಾಗಿ ಅಡ್ಡ ಮಲಗಿರುವ ದಿನಗಳಿವುಭಾರತ್ ಜೋಡೊ ಯಾತ್ರೆಯ ನಂತರ ರಾಹುಲ್ ಗಾಂಧಿ ಅವರಲ್ಲಿ ಹೊಸ ಆತ್ಮವಿಶ್ವಾಸ ತುಳುಕಿದ್ದು ಮತ್ತು ಅವರ ಕುರಿತು ಹರಡಲಾಗಿದ್ದ ಪೂರ್ವಗ್ರಹಗಳು ಚೆದುರುತ್ತಿರುವುದು ಸ್ಪಷ್ಟವಿತ್ತು.

ಒಂದೊಮ್ಮೆ ಹದಿನೆಂಟು ತಿಂಗಳುಗಳ ಕಾಲ ನಾಗರಿಕ ಹಕ್ಕುಗಳನ್ನು ತುಳಿದಿಟ್ಟಿದ್ದ ಪಕ್ಷವೊಂದರ ನಾಯಕನಾಗಿ ರಾಹುಲ್ ಗಾಂಧಿ ಸರ್ವಾಧಿಕಾರದ ವಿರುದ್ಧಮೂಲಭೂತ ಹಕ್ಕುಗಳ ದಮನದ ವಿರುದ್ಧ ದನಿ ಎತ್ತಿರುವುದು ಆಶಾದಾಯಕ ಬೆಳವಣಿಗೆಹೀಗಾಗಿ ಹೊಸದಾಗಿ ಹೊಮ್ಮಿರುವ ರಾಹುಲ್ ಗಾಂಧಿಯನ್ನು ಮರಳಿ ಕೆಡವಲು ಮೋಶಾ ಜೋಡಿ ಹೊಸ ಹೊಸ ತಂತ್ರಗಳನ್ನು ಹೆಣೆಯುತ್ತಿದೆಸಾಮ ದಾನ ದಂಡ ಭೇದದ ಎಲ್ಲ ನಾಲ್ಕೂ ಮಾರ್ಗಗಳಿಂದ ರಾಹುಲ್ ಅವರನ್ನು ಹಣಿಯುತ್ತಿದೆಲೋಕಸಭೆಯಲ್ಲಿ ಅವರು ಮಾತಾಡಲು ಬಿಡಲಿಲ್ಲಅವರ ಸಂಸತ್ ಸದಸ್ಯತ್ವವನ್ನು ಕಿತ್ತುಕೊಳ್ಳಲಾಯಿತುವಿದೇಶೀ ನೆಲದಲ್ಲಿ ಭಾರತದ ವರ್ಚಸ್ಸನ್ನು ಕುಗ್ಗಿಸಿದರೆಂದು ಮಿಥ್ಯಾಪ್ರಚಾರ ಮಾಡಲಾಯಿತು.

ಗಾಂಧಿ ಪರಿವಾರದ ಸಮೀಪವರ್ತಿಗಳಾಗಿದ್ದ ಜ್ಯೋತಿರಾದಿತ್ಯ ಸಿಂಧ್ಯ ಮತ್ತು ಗುಲಾಮ್ ನಬಿ ಆಜಾದ್ ಅವರ ಮೂಲಕ ರಾಹುಲ್ ಗಾಂಧಿ ಮೇಲೆ ಮೋದಿಶಾ ದಾಳಿ ನಡೆದಿದೆಇಬ್ಬರೂ ಬಿಜೆಪಿ ಹಸ್ತವನ್ನು ಅಲಂಕರಿಸಿರುವ ಹತಾರುಗಳಾಗಿದ್ದಾರೆಗುಲಾಮ್ ನಬಿ ಸಂದರ್ಶನಗಳ ಸರಣಿಯನ್ನೇ ನೀಡಿ ರಾಹುಲ್ ಗಾಂಧಿಯನ್ನು ಬೀಳುಗಳೆದು ಮೋದಿಯವರ ಕೊಂಡಾಟದಲ್ಲಿ ತೊಡಗಿದ್ದಾರೆಅವರ ಸಂದರ್ಶನಗಳನ್ನು ಗೋದಿ ಮೀಡಿಯಾ ಅಬ್ಬರದ ಪ್ರಚಾರ ನೀಡಿ ಪ್ರಸಾರ ಮಾಡುತ್ತಿದೆಕಾಂಗ್ರೆಸ್ ತೊರೆದು ಬಿಜೆಪಿಯನ್ನು ಸೇರಿ ಕೇಂದ್ರ ಮಂತ್ರಿಯಾಗಿರುವ ಜ್ಯೋತಿರಾದಿತ್ಯ ಸಿಂಧ್ಯ ಇಂತಹುದೇ ಸೇವೆಯಲ್ಲಿ ತೊಡಗಿದ್ದಾರೆ.

 

ಯಾವುದೇ ದಮನ ನಿತ್ಯ ನಿರಂತರವಲ್ಲಅದಕ್ಕೊಂದು ಅಂತ್ಯವಿದ್ದೇ ಇರುತ್ತದೆಅದು ನಿತ್ಯ ನಿರಂತರವಲ್ಲಹೊಸ ಭರವಸೆ ಮೂಡಿಸಿರುವ ರಾಹುಲ್ ಗಾಂಧಿ ಮತ್ತು ಅವರ ಪಕ್ಷವನ್ನು ಹಾಲಿ ಮಾನಹಾನಿ ಮೊಕದ್ದಮೆಯ ವಿದ್ಯಮಾನ ಮತ್ತಷ್ಟು ಗಟ್ಟಿಗೊಳಿಸೀತು.

andolanait

Recent Posts

ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್‌ ಒಡೆಯರ್‌

ಕೊಪ್ಪಳ: ಐತಿಹಾಸಿಕ ಅಂಜನಾದ್ರಿಗೆ ಸಂಸದ ಯದುವೀರ್  ಒಡೆಯರ್‌ ಭೇಟಿ ನೀಡಿ ದೇವರ ದರ್ಶನ ಪಡೆದರು. ಹನುಮ ಹುಟ್ಟಿದ ನಾಡು ಎಂದು…

2 hours ago

7 ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಅವರು ಬರೋಬ್ಬರಿ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್‌ 12ರಂದು ದೆಹಲಿಗೆ…

2 hours ago

ಓದುಗರ ಪತ್ರ: ಕುಕ್ಕರಹಳ್ಳಿಕೆರೆ ಅಂಗಳದಲ್ಲಿ ನಾಯಿಗಳ ಹಾವಳಿ ನಿಯಂತ್ರಿಸಿ

ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…

7 hours ago

ಓದುಗರ ಪತ್ರ: ಸಚಿವರುಗಳೇ ಮುಖ್ಯಮಂತ್ರಿಗಳ ಮಾತನ್ನು ಕಾರ್ಯರೂಪಕ್ಕೆ ತನ್ನಿ

ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…

7 hours ago

ಓದುಗರ ಪತ್ರ: ಡಿಜಿಟಲ್ ಸಮೀಕ್ಷೆ ರೈತರಿಗೆ ಕಂಟಕ?

ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…

7 hours ago

ಆತ್ಮಹತ್ಯೆ ತಡೆಗೆ ಇರಲಿ ಮಾನವೀಯ ಸುರಕ್ಷಾ ಜಾಲ

ಡಾ. ಕೆ. ಪಿ. ಸಿದ್ಧಲಿಂಗಸ್ವಾಮಿ, ಸಂಶೋಧಕರು, ಸಿಎಸ್‌ಎಸ್‌ಐ, ಮಂಗಳೂರು ವಿಶ್ವವಿದ್ಯಾನಿಲಯ ಸೆಪ್ಟೆಂಬರ್ ೧೦ ವಿಶ್ವ ಆತ್ಮಹತ್ಯೆ ತಡೆ ದಿನ. ಇದು…

7 hours ago