Light
Dark

ಇದು ಗೂಗ್ಲಿಯೂ ಹೌದು; ಮೊದಲ ಬಾಲಿಗೆ ಸಿಕ್ಸರೂ ಹೌದು!

ರಾಜಾರಾಂ ತಲ್ಲೂರು

 ಒಂದಿಡೀ ಟರ್ಮ್ ಆಡಳಿತ ನಡೆಸಿದ್ದ ಸಿದ್ಧರಾಮಯ್ಯ ಸರ್ಕಾರ ಎರಡನೇ ಟರ್ಮಿಗೆ ೫೫-೪೫ರ ಸಣ್ಣ ಅಂತರದಲ್ಲಿ ಸೋತರೂ ಬಾಹ್ಯ ಬೆಂಬಲದಿಂದ ಸರ್ಕಾರ ರಚಿಸಿದ್ದು, ಪ್ರಲೋಭನೆಯ ಪಕ್ಷಾಂತರಗಳಿಂದಾಗಿ ಅಧಿಕಾರ ಕಳೆದುಕೊಂಡದ್ದು ಎಲ್ಲವನ್ನೂ ಕಾಂಗ್ರೆಸ್ ಕಾರ್ಯಕರ್ತರು ಮರೆತಂತೆ ಕಾಣುತ್ತಿತ್ತು. ಯಾಕೆ ಈ ಮರೆವು ಉಂಟಾಗಿತ್ತೆಂದರೆ ಡಬ್ಬಲ್ ಎಂಜಿನ್ ಭೋರ್ಗರೆತ ಅಷ್ಟು ಗಟ್ಟಿಯಾಗಿತ್ತು! ಜೊತೆಗೆ ಡಿರ್ಯ_ಮೀಡಿಯಾ ಪ್ರತಿಪಕ್ಷವನ್ನೇ ಆಡಳಿತಪಕ್ಷವೆಂದು ಪರಿಗಣಿಸಿ ಪ್ರಹಾರ ನಿರತವಾಗಿತ್ತು. ಮೆದುಳಿಗೆ ಈ ಸತತ ಪ್ರಹಾರದ ಪರಿಣಾಮ ಮತ್ತು ಕೋವಿಡ್ ಮತ್ತಿತರ ಸಂಕಷ್ಟಗಳು ಕಾಂಗ್ರೆಸ್ ಕಾರ್ಯಕರ್ತರನ್ನು ವಿನಮನಸ್ಕಗೊಳಿಸಿದ್ದವು. ತಳಮಟ್ಟದಲ್ಲಿ ಅವರ ಶಕ್ತಿ ಸಾಮರ್ಥ್ಯಗಳು ಅವರಿಗೇ ಮರೆತುಹೋಗಿದ್ದವು. ದಾವಣಗೆರೆ ಸಮಾರಂಭ ಅದನ್ನು ಬಡಿದೆಚ್ಚರಿಸಿದೆ.

ಒಂದು ಆಡಳಿತಪಕ್ಷ ದುರಾಡಳಿತದಲ್ಲಿ ತೊಡಗಿರುವಾಗ, ವಿರೋಧಪಕ್ಷ ಶಕ್ತಿಹೀನವಾಗುತ್ತಿದೆ ಎಂದು ಬಿಂಬಿತವಾಗುತ್ತಿರುವಾಗ ರಾಜ್ಯದ ಪ್ರಮುಖ ವಿರೋಧಪಕ್ಷ ಕಾಂಗ್ರೆಸ್ಸಿಗೆ ಇಂತಹದೊಂದು ಬೂಸ್ಟರ್ ಡೋಸ್ ಬೇಕಿತ್ತು. ಈ ಹೊತ್ತಿಗೆ ಕಾಂಗ್ರೆಸ್ಸಿಗರಲ್ಲಿ ಬೂಸ್ಟರ್ ಡೋಸ್ ಪಡೆದ ಭಾವ ಕಾರ್ಯಕರ್ತರ ನೆಲಮಟ್ಟದಲ್ಲೂ, ಸೋಷಿಯಲ್ ಮೀಡಿಯಾದ ಮುಗಿಲಿನಲ್ಲೂ ಕಾಣಿಸುತ್ತಿದೆ ಎಂಬ ಮಟ್ಟಿಗೆ ದಾವಣಗೆರೆ ಶೋಆಫ್ ಯಶಸ್ವಿ.

ಒಂದು ಕ್ಷಣ, ಈ ಸಿದ್ಧರಾಮೋತ್ಸವದ ರನ್‌ಅಪ್ ಕಡೆ ಹಿಂದಿರುಗಿ ನೋಡಿ.

ಆಳುವವರ ಪರ ಇರುವ ರಾಜ್ಯದ ಬಹುತೇಕ ಮಾಧ್ಯಮಗಳು, ಇದು ಸಿದ್ಧರಾಮಯ್ಯ-ಡಿಕೆ ಶಿವಕುಮಾರ್ ನಡುವಿನ ಶೋಡೌನ್ ಎಂದೇ ಬಿಂಬಿಸಿದ್ದವು. ಕಾಂಗ್ರೆಸ್ಸಿನ ಒಡಕು ಈ ಸಮಾರಂಭದ ಮೂಲಕ ಹೊರಬೀಳಲಿದೆ ಎಂಬುದು ಅವರ ತುಂಬು ನಿರೀಕ್ಷೆ ಆಗಿತ್ತು. ಸಮಾರಂಭಕ್ಕೆ ಐವತ್ತು ಕೋಟಿ ಖರ್ಚು ಮಾಡುವ ಸಮಾಜವಾದ ಎಂಬ ಟೀಕೆಯಿಂದ ಹಿಡಿದು, ಸಿದ್ಧರಾಮಯ್ಯ ಸುಳ್ಳು ಜನ್ಮದಿನಾಂಕದೊಂದಿಗೆ ಹುಟ್ಟಿದ ಹಬ್ಬ ಆಚರಣೆಯ ತುರ್ತಿಗೆ ಬಿದ್ದಿದ್ದಾರೆ ಎಂಬಲ್ಲಿಯ ತನಕ ಅಪಪ್ರಚಾರ ನಡೆದಿತ್ತು. ಪ್ರಚಾರಕ್ಕಿಂತ ಅಪಪ್ರಚಾರದ ಅಬ್ಬರವೇ ಹೆಚ್ಚಿತ್ತು. ಇದರ ಪರಿಣಾಮವಾಗಿ ಈ ಸಮಾರಂಭದ ಹೆಸರು ಸಿದ್ಧರಾಮೋತ್ಸವ ಇರಬೇಕೇ ಬೇಡವೇ ಎಂಬ ಚರ್ಚೆ ಕೂಡ ಕಾಂಗ್ರೆಸ್ಸಿನೊಳಗೆ ನಡೆದ ಬಗ್ಗೆ ಸುದ್ದಿ ಆಗಿತ್ತು.

ಇಂತಹದೊಂದು ಶೇಕೀ ರನ್ ಅಪ್ ಜೊತೆಗೇ ಆರಂಭಗೊಂಡ ಸಿದ್ಧರಾಮಯ್ಯನವರ ೭೫ನೇ ಹುಟ್ಟುಹಬ್ಬದ ತಯಾರಿ, ೭ರಂದು ಬೆಳಗ್ಗೆಯ ಹೊತ್ತಿಗೆ ಹದಿನೈದು ಕಿಲೋಮೀರ್ಟ ಹಿಂದೆಯೇ ಜನಸಂದಣಿಯ ಕಾರಣಕ್ಕೆ ಟ್ರಾಫಿಕ್ ಜಾಮ್ ಎಂಬಂತಹ ಸುದ್ದಿಗಳ ಜೊತೆ ಅಂತಿಮ ಹಂತ ತಲುಪಿದ್ದು, ಕಾಂಗ್ರೆಸ್ಸಿಗರು ಈ ಸಮಾವೇಶವನ್ನು ಎಷ್ಟು ಗಂಭೀರವಾಗಿ ಪರಿಗಣಿಸಿದ್ದರು ಎಂಬುದಕ್ಕೆ ಸೂಚನೆ. ಕಾಂಗ್ರೆಸ್ಸಿಗೆ ತಾನು ಮರೆತೇ ಹೋಗಿದ್ದ ಸ್ವಸಾಮರ್ಥ್ಯ ಮರುಪರಿಚಯಕ್ಕೆ ಇಂತಹದೊಂದು ಬೂರ್ಸ್ಟ ಡೋಸ್ ಅಗತ್ಯ ಇತ್ತು. ಒಂದಿಡೀ ಟರ್ಮ್ ಆಡಳಿತ ನಡೆಸಿದ್ದ ಸಿದ್ಧರಾಮಯ್ಯ ಸರ್ಕಾರ ಎರಡನೇ ಟರ್ಮಿಗೆ ೫೫-೪೫ರ ಸಣ್ಣ ಅಂತರದಲ್ಲಿ ಸೋತರೂ ಬಾಹ್ಯ ಬೆಂಬಲದಿಂದ ಸರ್ಕಾರ ರಚಿಸಿದ್ದು, ಪ್ರಲೋಭನೆಯ ಪಕ್ಷಾಂತರಗಳಿಂದಾಗಿ ಅಧಿಕಾರ ಕಳೆದುಕೊಂಡದ್ದು ಎಲ್ಲವನ್ನೂ ಕಾಂಗ್ರೆಸ್ ಕಾರ್ಯಕರ್ತರು ಮರೆತಂತೆ ಕಾಣುತ್ತಿತ್ತು.

ಯಾಕೆ ಈ ಮರೆವು ಉಂಟಾಗಿತ್ತೆಂದರೆ ಡಬ್ಬಲ್ ಎಂಜಿನ್ ಭೋರ್ಗರೆತ ಅಷ್ಟು ಗಟ್ಟಿಯಾಗಿತ್ತು! ಜೊತೆಗೆ ಡಿರ್ಯ_ಮೀಡಿಯಾ ಪ್ರತಿಪಕ್ಷವನ್ನೇ ಆಡಳಿತಪಕ್ಷವೆಂದು ಪರಿಗಣಿಸಿ ಪ್ರಹಾರ ನಿರತವಾಗಿತ್ತು. ಮೆದುಳಿಗೆ ಈ ಸತತ ಪ್ರಹಾರದ ಪರಿಣಾಮ ಮತ್ತು ಕೋವಿಡ್ ಮತ್ತಿತರ ಸಂಕಷ್ಟಗಳು ಕಾಂಗ್ರೆಸ್ ಕಾರ್ಯಕರ್ತರನ್ನು ವಿನಮನಸ್ಕಗೊಳಿಸಿದ್ದವು. ತಳಮಟ್ಟದಲ್ಲಿ ಅವರ ಶಕ್ತಿ ಸಾಮರ್ಥ್ಯಗಳು ಅವರಿಗೇ ಮರೆತುಹೋಗಿದ್ದವು. ದಾವಣಗೆರೆ ಸಮಾರಂಭ ಅದನ್ನು ಬಡಿದೆಚ್ಚರಿಸಿದೆ. ಸಮಾರಂಭದ ವೇದಿಕೆಯಲ್ಲಿದ್ದ ನಾಯಕಗಢಣದ ಮಾತುಗಳು, ಅಭಿವ್ಯಕ್ತಿಗಳು ಈ ಸಂತಸವನ್ನು ಸಾರಿ ಸಾರಿ ಹೇಳುತ್ತಿದ್ದವು. ಅವರೆಲ್ಲರ ನಿರೀಕ್ಷೆ ಮೀರಿ ದಾವಣಗೆರೆಗೆ ಕಾಂಗ್ರೆಸ್ ಕಾರ್ಯಕರ್ತರು ಲಗ್ಗೆ ಇಟ್ಟಿದ್ದರು!

ಈ ಸಮಾರಂಭ ಏಕೆ ಗೂಗ್ಲಿ ಎಂದರೆ, ಸಿದ್ಧರಾಮಯ್ಯ ಅವರ ಜನ್ಮದಿನ ಸಂಭ್ರಮ ಎಂದೇ ಎಲ್ಲರೂ ಊಹಿಸಿಕೊಂಡಿದ್ದ ಈ ಕಾರ್ಯಕ್ರಮ, ಕಾಂಗ್ರೆಸ್ಸಿನ ಮಟ್ಟಿಗೆ ವಿಧಾನಸಭಾ ಚುನಾವಣೆಗಳಿಗೆ ತಯಾರಿಯ ಉದ್ಘಾಟನಾ ಸಮಾರಂಭ ಆಗಿ ಬದಲಾಗಿತ್ತು. ಆ ಮಟ್ಟಿಗೆ ಕಾರ್ಯಕ್ರಮದ ಆಯೋಜಕರು ಮತ್ತು ಸಿದ್ಧರಾಮಯ್ಯನವರ ಸೂಕ್ಷ್ಮಗ್ರಾಹಿತ್ವವನ್ನು ಮೆಚ್ಚಬೇಕು. ಆಡಳಿತಪಕ್ಷಕ್ಕೆ ಇದು ಅನಿರೀಕ್ಷಿತ. ಇಂತಹದೊಂದು ನಿರೀಕ್ಷೆ ಇದ್ದಿದ್ದರೆ, ಅವರದನ್ನು ಬೇರೆ ರೀತಿಯಲ್ಲಿ ನಿಭಾಯಿಸಲು ಅವಕಾಶಗಳಿದ್ದವು. ಬೇರೆಲ್ಲ ವ್ಯವಸ್ಥೆ ಮಾಡಿಕೊಂಡು, ಸಿದ್ಧರಾಮಯ್ಯನವರನ್ನು ಕಟ್ಟಿ ಹಾಕುವುದು ಹೇಗೆ ಎಂಬ ಚಿಂತೆಯಲ್ಲಿದ್ದ ಆಡಳಿತ ಪಕ್ಷಕ್ಕೆ ದಾವಣಗೆರೆಯಲ್ಲಿ ಸೇರಿದ ಜನಸಾಗರ, ವೇದಿಕೆಯಲ್ಲಿದ್ದ ಕಾಂಗ್ರೆಸ್ ನಾಯಕರ ಮೂಡ್ ಹೊಸ ಚಿಂತೆಯ ಗೆರೆಗಳನ್ನು ಮೂಡಿಸಿದ್ದರೆ ಅಚ್ಚರಿ ಇಲ್ಲ. ತಳಮಟ್ಟದಲ್ಲಿ ಎಲ್ಲವೂ ಸರಿಯಾಗಿಲ್ಲ, ಜನಸಾಮಾನ್ಯರ ಪರಿಸ್ಥಿತಿ ತೀರಾ ಕೆಟ್ಟಿದ್ದು, ಕೇವಲ ಮೋದಿ ಹೆಸರು ಈ ಬಾರಿ ಮತ್ತೊಮ್ಮೆ ಓಟು ತಂದುಕೊಡದು ಎಂಬುದು ಅವರಿಗೂ ಅರಿವಿದೆ.

ಬುಧವಾರ ಬೆಳಗ್ಗೆ ದಾವಣಗೆರೆಯಲ್ಲಿ ಒಮ್ಮೆ ಜನಸಾಗರವನ್ನು ನೋಡಿದ ಬಳಿಕ ಕಾಂಗ್ರೆಸ್ ನಾಯಕರೆಲ್ಲರೂ ಸಿಕ್ಸರ್ ಬಾರಿಸುವ ಹುಮ್ಮಸ್ಸಿನಲ್ಲಿದ್ದರು. ಅವರ ಮಾತುಗಳಲ್ಲಿ ಅದು ಮತ್ತೆ ಮತ್ತೆ ವ್ಯಕ್ತವಾಯಿತು. ಡಿ ಕೆ ಶಿವಕುಮಾರ್, ಸಿದ್ಧರಾಮಯ್ಯ ಮತ್ತು ಅವರ ಸರ್ವೋಚ್ಛನಾಯಕ ರಾಹುಲ್ ಗಾಂಧಿ ಮೂವರೂ ಬಹಳ ಎಚ್ಚರಿಕೆಯಿಂದ ತಮ್ಮ ಮಾತುಗಳನ್ನು ಆಯ್ದುಕೊಳ್ಳುವ ಮೂಲಕ, ಸಿದ್ಧರಾಮೋತ್ಸವ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ೨೦೨೩ರ ಚುನಾವಣಾ ಪ್ರಚಾರದ ಆರಂಭ ಎಂಬುದನ್ನು ಕಾರ್ಯಕರ್ತರಿಗೆ ತಲುಪಿಸಿದರು.

ಈ ಸಿಕ್ಸರ್ ಕೂಡ ಆಡಳಿತ ಪಕ್ಷಕ್ಕೆ ಅನಿರೀಕ್ಷಿತ!

ಆಟ ಇಲ್ಲಿಗೇ ಮುಗಿಯುವುದಿಲ್ಲ. ಇದಿನ್ನೂ ಆರಂಭ ಮಾತ್ರ. ಆದರೆ ತಯಾರಿಯ ಕೊರತೆಯಿಂದ ಕಂಗೆಟ್ಟಿದ್ದ ಕಾಂಗ್ರೆಸ್ ಮಟ್ಟಿಗೆ ಇದು ಭರ್ಜರಿ ಆರಂಭ ಎಂಬುದರಲ್ಲಿ ಸಂಶಯ ಇಲ್ಲ. ಕಾಂಗ್ರೆಸ್ಸಿಗರು ಇದೇ ಕೊನೆಯ ಬಾಲ್, ಸಿಕ್ಸರ್ ಬಿದ್ದಿದೆ ಅಂದುಕೊಂಡು ತಣ್ಣಗೆ ಕುಳಿತರೆ ಮಾತ್ರ ಕೆಟ್ಟರು.

 

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ