ಎಡಿಟೋರಿಯಲ್

ಹುದ್ದೆಗಳ ಭರ್ತಿ ನಡೆಯಲಿ; ಯುವಶಕ್ತಿಯನ್ನು ಕಡೆಗಣಿಸದಿರಲಿ

ಸರ್ಕಾರಿ ನೌಕರಿ ಕನಸಾಗಿಯೇ ಉಳಿದಿದೆ ಎಂಬ ಉದ್ಯೋಗಾಕಾಂಕ್ಷಿಗಳ ಆಕ್ರೋಶ ಧಾರವಾಡದಲ್ಲಿ ಮೊದಲ ಬಾರಿಗೆ ಸ್ಛೋಟಗೊಂಡಿದೆ. ಅದರಿಂದ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದ್ದು,  ಸಚಿವ ಸಂಪುಟ ಸಭೆಯಲ್ಲಿ ೫೦,೦೦೦ ಹುದ್ದೆಗಳಿಗೆ ನೇಮಕಾತಿಗೆ ಅನುಮೋದನೆ ನೀಡಲಾಗಿದೆ. ಆದರೆ, ನಿರುದ್ಯೋಗಿಗಳಿಗೆ ಒಂದು ಸ್ಪಷ್ಟತೆ ಬೇಕಿದೆ. ಯಾವ್ಯಾವ ಇಲಾಖೆಗಳಲ್ಲಿ ಎಷ್ಟೆಷ್ಟು ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂಬ ವಿಷಯದಲ್ಲಿ ಗೊಂದಲ ಇದೆ. ರಾಜ್ಯ ಸರ್ಕಾರದ ವಿವಿಧ ಇಲಾಖೆ ಗಳಲ್ಲಿ ಒಟ್ಟಾರೆ ೨.೮೪ ಲಕ್ಷ ಹುದ್ದೆಗಳು ಖಾಲಿ ಇವೆ ಎನ್ನಲಾಗಿದೆ. ಆದರೆ ಸರ್ಕಾರ ಆರ್ಥಿಕ ಶಕ್ತಿ ಅವಂಬಿಸಿ ನೇಮಕಾತಿ ಮಾಡಬೇಕಾಗುತ್ತದೆ. ಸದ್ಯದ ಪರಿಸ್ಥಿಯಲ್ಲಿ ಸರ್ಕಾರವೇ ಘೋಷಿಸಿರುವಂತೆ ೫೦,೦೦೦ ಹುದ್ದೆಗಳನ್ನು ಭರ್ತಿ ಮಾಡು ವುದೂ ದುಸ್ತರ ಅನಿಸುತ್ತದೆ.

ಸರ್ಕಾರಿ ಹುದ್ದೆಗಳ ನೇಮಕಾತಿಗೆ ಹಣಕಾಸಿನ ಕೊರತೆ ಮಾತ್ರವಲ್ಲ,  ಮೀಸಲಾತಿ ಗೊಂದಲ ಕೂಡ ಅಡ್ಡಿಯಾಗಿದೆ. ರಾಜ್ಯ ಸರ್ಕಾರ ಸದ್ಯಕ್ಕೆ ಒಳ ಮೀಸಲಾ ತಿಯನ್ನು  ಅನುಸರಿಸುವುದಿಲ್ಲ.  ಹಿಂದಿನ ಮೀಸಲಾತಿಯನ್ನೇ ಅಳವಡಿಸಿಕೊಂಡು ನೇಮಕಾತಿ ಪ್ರಕ್ರಿಯೆ  ಕೈಗೊಳ್ಳಲಾಗುವುದು ಎಂದು ಹೇಳಿದೆ. ಇದಕ್ಕೂ ಕಾನೂನು ತೊಡಕು ಎದುರಾಗುವ ಅಪಾಯವಿದೆ. ಅತ್ತ ರಾಜ್ಯಪಾಲರು ಒಳ ಮೀಸಲಾತಿಗೆ ಅಂಕಿತ ಹಾಕಿದ್ದಾರೆ. ಆದರೆ, ಒಳ ಮೀಸಲಾತಿ ವಿವಾದ ನ್ಯಾಯಾಲಯದ ಮೆಟ್ಟಿಲೇರಿದೆ.

ಹಾಗಾಗಿ ಹಿಂದಿನ ಮೀಸಲಾತಿ ಅನುಸಾರ ನೇಮಕಾತಿ ಸಾಧ್ಯವೇ ಎಂಬುದು ಪ್ರಶ್ನೆಯಾಗಿದೆ.  ರಾಜ್ಯ ಸರ್ಕಾರ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಸಂದರ್ಭದಲ್ಲಿ  ‘ಒಳ ಮೀಸಲಾತಿ ವಿವಾದಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ನೀಡುವ ಆದೇಶವನ್ನು ಪಾಲಿಸುವುದು ಕಡ್ಡಾಯ’ ಎಂಬ ಷರತ್ತನ್ನು ಅನ್ವಯಿಸಲಿದೆ ಎಂದು ಹೇಳಲಾಗಿದೆ.

ಸರ್ಕಾರಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಧಾರವಾಡದಲ್ಲಿ ಕಳೆದ ವಾರ ಅಖಿಲ ಕರ್ನಾಟಕ ವಿದ್ಯಾರ್ಥಿ ಸಂಘದ ನೇತೃತ್ವದಲ್ಲಿ ನಡೆದ ಭಾರಿ ಪ್ರತಿಭಟನೆಯಲ್ಲಿ ಸಹಸ್ರಾರು ನಿರುದ್ಯೋಗಿಗಳು,  ವಿದ್ಯಾರ್ಥಿಗಳು ಭಾಗವಹಿಸುವ ಮೂಲಕ ಯುವಜನರಲ್ಲಿ ಸಂಚಲನ ಮೂಡಿಸಿದ್ದು,  ಪ್ರತಿಭಟನಾಕಾರರು ಪ್ರಮುಖವಾಗಿ ಮೂರು ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿದ್ದಾರೆ. ಬಾಕಿ ಇರುವ ನೇಮಕಾತಿ ಪರೀಕ್ಷೆಗಳ ಫಲಿತಾಂಶವನ್ನು ಶೀಘ್ರವಾಗಿ ಪ್ರಕಟಿಸಬೇಕು. ನೇಮಕಾತಿಗೆ ಹೊಸ ಅಧಿಸೂಚನೆ ಹೊರಡಿಸಬೇಕು.

ವಯೋಮಿತಿ ಮೀರುತ್ತಿರುವ ಅಭ್ಯರ್ಥಿಗಳಿಗೆ ನ್ಯಾಯ ಒದಗಿಸಬೇಕು ಎಂಬುದಾಗಿ ಒತ್ತಾಯಿಸಿದ್ದಾರೆ.  ಉದ್ಯೋಗಾಕಾಂಕ್ಷಿಗಳ ಬೇಡಿಕೆಯಲ್ಲಿಯೂ ವಾಸ್ತವತೆ  ಇದೆ. ದಶಕಗಳಿಂದಲೂ ದೊಡ್ಡ ಮಟ್ಟದಲ್ಲಿ ನೇಮಕಾತಿ ನಡೆದೇ ಇಲ್ಲ. ಸಾಮಾನ್ಯ ಪದವಿಗಳು ಇರಲಿ, ವೃತ್ತಿಪರ ಶಿಕ್ಷಣ ತರಬೇತಿ ಪಡೆದವರಿಗೂ ಸರ್ಕಾರಿ ಹುದ್ದೆ ಕೈಗೆಟುಕದಂತಾ ಗಿದೆ. ಅಲ್ಲೊಂದು, ಇಲ್ಲೊಂದು ಹುದ್ದೆಗಳನ್ನು ಭರ್ತಿ ಮಾಡಿದರೆ ಅದೇ ದೊಡ್ಡದು. ಅಲ್ಲದೆ, ಬಹುತೇಕ ಇಲಾಖೆ ಗಳಲ್ಲಿ ಗುತ್ತಿಗೆ ಆಧಾರಿತ ನೌಕರರ ಸಂಖ್ಯೆಯೇ ಹೆಚ್ಚಾಗಿದೆ.

ಸರ್ಕಾರವು ಕನಿಷ್ಠ ಖಾಸಗಿ ಸಂಸ್ಥೆಗಳಲ್ಲಿ ಉದ್ಯೋಗ ಸೃಷ್ಟಿ ಮಾಡುವುದರತ್ತ ವಾದರೂ ಗಮನಹರಿ ಸಬೇಕು. ಖಾಸಗಿ ಸಂಸ್ಥೆಗಳು, ಕೈಗಾರಿಕೆಗಳಿಗೆ ಒಪ್ಪಂದದಂತೆ ನೀರು, ವಿದ್ಯುತ್ ಸೇರಿದಂತೆ ಮೂಲ ಸೌಕರ್ಯಗಳನ್ನು ಸಕಾಲದಲ್ಲಿ ಒದಗಿಸ ಬೇಕು. ಅಲ್ಲದೇ, ಅವು ಬಯಸುವ ವಿದ್ಯಾರ್ಹತೆ ಉಳ್ಳವರನ್ನು ಸರ್ಕಾರದ ಮೂಲಕವೇ ನೇಮಕ ಮಾಡಿಕೊಳ್ಳಲು ತಾಕೀತು ಮಾಡಬೇಕು. ಇಲ್ಲದಿದ್ದರೆ, ಖಾಸಗಿ ಸಂಸ್ಥೆಗಳು ಹೊರ ರಾಜ್ಯದವರನ್ನು ನೇಮಕ ಮಾಡಿಕೊಳ್ಳಬಹುದು ಅಥವಾ ಕಡಿಮೆ ಜನರನ್ನು ತೆಗೆದುಕೊಂಡು ಹೆಚ್ಚು ಕೆಲಸ ಮಾಡಿಸಬಹುದು. ಉದಾಹರಣೆಗೆ ೧೦೦ ಮಂದಿ ಕಾರ್ಮಿಕರ ಅಗತ್ಯ ಇದ್ದರೆ,  ಕೇವಲ ೫೦ ಜನರಿಂದ ಅಷ್ಟೂ ಕೆಲಸ ಮಾಡಿಸುವ ಸಾಧ್ಯತೆಯೂ ಇದೆ. ಅಲ್ಲದೆ,  ಕೆಲಸದ ಅವಧಿಯನ್ನು ಹೆಚ್ಚು ಮಾಡುವ ಬಗ್ಗೆ ವಿಶ್ವ ಮಟ್ಟದಲ್ಲಿ ಚರ್ಚೆಗಳು ನಡೆಯುತ್ತಿವೆ.

ಸರ್ಕಾರ ನಡೆಸುವ ಉದ್ಯೋಗ ಮೇಳಗಳು ನಿರೀಕ್ಷೆಯಷ್ಟು ಫಲಪ್ರದ ವಾಗಿಲ್ಲ. ಹಾಗೆ ನಿರೀಕ್ಷಿಸುವುದೂ ಅಷ್ಟು ಸಮಂಜಸವಾಗಿ ಕಾಣುತ್ತಿಲ್ಲ. ಹಿಂದೆ ರಾಜ್ಯ ಸರ್ಕಾರವೇ ಕಾರ್ಮಿಕ ಇಲಾಖೆಯಡಿ ‘ಉದ್ಯೋಗ ವಿನಿಮಯ ಕೇಂದ್ರ’  ವಿಭಾಗವನ್ನು ತೆರೆದಿತ್ತು. ೧೮ ವರ್ಷ ವಯಸ್ಸಾದ, ಎಸ್‌ಎಸ್‌ಎಲ್‌ಸಿ ಪಾಸಾದ ಯುವಜನರು ಆ ಕೇಂದ್ರದಲ್ಲಿ ನೋಂದಣಿ ಮಾಡಿಕೊಳ್ಳುತ್ತಿದ್ದರು.

ಸರ್ಕಾರದ ಯಾವುದೇ ಇಲಾಖೆಯಲ್ಲಿ ಹುದ್ದೆ ಖಾಲಿಯಾದರೆ, ಈ ಕೇಂದ್ರದ ಮೂಲಕ ಅರ್ಹರ ಪಟ್ಟಿಯನ್ನು ಪರಿಶೀಲಿಸಿ, ಸಂದರ್ಶನಕ್ಕೆ ಕರೆ ನೀಡಲಾಗುತ್ತಿತ್ತು. ಬದಲಾದ ಕಾಲಘಟ್ಟದಲ್ಲಿ ಸರ್ಕಾರಿ ಉದ್ಯೋಗದ ನೇಮಕಾತಿಯೇ ಮರೀಚಿಕೆಯಾಗಿದ್ದು,  ‘ಒಂದಾನೊಂದು ಕಾಲದಲ್ಲಿ…’  ಎಂಬಂತಹ ಸ್ಥಿತಿಗೆ ತಲುಪಿತು.  ಉದ್ಯೋಗಾಕಾಂಕ್ಷಿಗಳ ಮನಸ್ಥಿತಿಯನ್ನು ಸರ್ಕಾರ ಸೂಕ್ಷ ವಾಗಿ ಅವಲೋಕಿಸಬೇಕಿದೆ. ಯುವಶಕ್ತಿಯನ್ನು ಅಭಿವೃದ್ಧಿಗೆ ಪೂರಕವಾಗಿ ಬಳಸುವ ನಿಟ್ಟಿನಲ್ಲಿ ಉದ್ಯೋಗ ನೇಮಕಾತಿ ಸಂಬಂಧ ಸ್ಪಷ್ಟ ನಿರ್ಧಾರ ಕೈಗೊಳ್ಳಬೇಕಿದೆ. ಯಾವುದೇ ಪಕ್ಷ ಅಧಿಕಾರಕ್ಕೆ ಬಂದರೂ ಪ್ರತಿವರ್ಷ ಬಜೆಟ್ ಮಾದರಿಯಲ್ಲೇ ಹುದ್ದೆಗಳ ಭರ್ತಿಗೂ ಕ್ರಮವಹಿಸಬೇಕು. ಖಾಲಿ ಇರುವ ಎಲ್ಲ ಹುದ್ದೆಗಳನ್ನೂ ಏಕಕಾಲದಲ್ಲಿ ತುಂಬಬೇಕು ಎಂಬ ನಿರೀಕ್ಷೆ ಸಾಧುವಲ್ಲ.  ಆದರೆ, ಪ್ರತಿವರ್ಷ ಕನಿಷ್ಠ ಪ್ರಮಾಣದಲ್ಲಿ ನೌಕರಿಗಳನ್ನು ಭರ್ತಿ ಮಾಡಿದ್ದರೆ,  ನಿರುದ್ಯೋಗಿಗಳ ಪ್ರತಿಭಟನೆಗೆ ಅವಕಾಶ ಇರುತ್ತಿರಲಿಲ್ಲ. ಸರ್ಕಾರ ಪೂರ್ವಗ್ರಹಗಳಿಲ್ಲದೆ ಹುದ್ದೆಗಳನೇಮಕಾತಿಗೆ ಕ್ರಮ ಕೈಗೊಳ್ಳಬೇಕಿರುವುದು ಅತ್ಯಗತ್ಯ.

” ಸರ್ಕಾರವು ಕನಿಷ್ಠ ಖಾಸಗಿ ಸಂಸ್ಥೆಗಳಲ್ಲಿ ಉದ್ಯೋಗ ಸೃಷ್ಟಿ ಮಾಡುವುದರತ್ತವಾದರೂ ಗಮನಹರಿಸಬೇಕು. ಖಾಸಗಿ ಸಂಸ್ಥೆಗಳು, ಕೈಗಾರಿಕೆಗಳಿಗೆ ಒಪ್ಪಂದದಂತೆ ನೀರು, ವಿದ್ಯುತ್ ಸೇರಿದಂತೆ ಮೂಲಸೌಕರ್ಯಗಳನ್ನು ಸಕಾಲದಲ್ಲಿಒದಗಿಸಬೇಕು ಅಲ್ಲದೆ, ಅವು ಬಯಸುವ ವಿದ್ಯಾರ್ಹತೆ ಉಳ್ಳವರನ್ನು ಸರ್ಕಾರದಮೂಲಕವೇ ನೇಮಕ ಮಾಡಿಕೊಳ್ಳಲು ತಾಕೀತು ಮಾಡಬೇಕು.”

 

 

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ರಾಮಕೃಷ್ಣ ಆಶ್ರಮದವರು ಕೊಟ್ಟ ಮಾತು ಉಳಿಸಿಕೊಳ್ಳಬೇಕಿತ್ತು

ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್‌ಟಿಎಂ) ಶಾಲೆ’…

15 hours ago

ಅರವತ್ತು ದಿನಗಳು ಕಳೆಯಿತು…ಫಲದ ನಿರೀಕ್ಷೆಯಲ್ಲಿ!

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…

15 hours ago

ಇಂದು ಕೊಡಗು ಜಿಲ್ಲೆಯಲ್ಲಿ ಕಕ್ಕಡ 18ರ ಸಂಭ್ರಮ

ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…

15 hours ago

ಸಾರ್ವಜನಿಕರ ಶೌಚಾಲಯಕ್ಕೆ ಬೇಕಿದೆ ಚಿಕಿತ್ಸೆ!

ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…

16 hours ago

ಗ್ರಾಪಂಗಳ ಅತ್ಯುತ್ತಮ ಕೆಲಸಕ್ಕೆ ಉತ್ತಮ ಪ್ರಶಸ್ತಿ

ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…

16 hours ago

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

2 days ago