ಎಡಿಟೋರಿಯಲ್

ಅಂಗನವಾಡಿಗಳಲ್ಲಿ ಎಲ್‌ಕೆಜಿ, ಯುಕೆಜಿ ಯೋಜನೆ ಹಳ್ಳ ಹಿಡಿಯದಿರಲಿ

ಇತ್ತೀಚಿನ ವರ್ಷಗಳಲ್ಲಿ ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಕುಸಿಯುತ್ತಲೇ ಇದೆ. ಜತೆಗೆ ಅಂಗನವಾಡಿಗಳಲ್ಲಿರುವ ಮಕ್ಕಳ ದಾಖಲಾತಿಯಲ್ಲೂ ವ್ಯತ್ಯಾಸ ಕಂಡುಬಂದಿದೆ. ಇದರಿಂದ ಶಾಲೆ ಪೂರ್ವ ಶಿಕ್ಷಣವನ್ನು ಮತ್ತಷ್ಟು ಗಟ್ಟಿಗೊಳಿಸಲು ಮುಂದಾಗಿರುವ ಸರ್ಕಾರ, ಇದರ ಭಾಗವಾಗಿ ಅಂಗನವಾಡಿ ಕೇಂದ್ರಗಳಲ್ಲಿ ಎಲ್‌ಕೆಜಿ, ಯುಕೆಜಿ ತರಗತಿಗಳನ್ನು ಆರಂಭಿಸಲು ಕ್ರಮವಹಿಸಿದೆ.

ದೇಶದಲ್ಲೇ ಮೊದಲ ಬಾರಿಗೆ ಅಂಗನವಾಡಿ ಕೇಂದ್ರದಲ್ಲಿ ಎಲ್‌ಕೆಜಿ ಮತ್ತು ಯುಕೆಜಿ ಪರಿಚಯಿಸುತ್ತಿರುವ ಹೆಗ್ಗಳಿಕೆಗೆ ಕರ್ನಾಟಕ ಪಾತ್ರವಾಗಿದೆ. ರಾಜ್ಯದಲ್ಲಿ ಎಲ್ಲ ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ ಮತ್ತು ಯುಕೆಜಿ ತರಗತಿ ಆರಂಭಿಸಲು ಸರ್ಕಾರ ಚಿಂತನೆ ನಡೆಸಿತ್ತು. ಆದರೆ ಸರ್ಕಾರದ ಈ ನಿರ್ಧಾರಕ್ಕೆ ಅಂಗನವಾಡಿ ಕಾರ್ಯಕರ್ತೆಯರು ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಪ್ರತಿಭಟನೆ ಕೂಡ ಮಾಡಿದ್ದರು.

ಈ ಹಿಂದೆ ಹಲವು ಬಾರಿ ಅಂಗನವಾಡಿ ಕೇಂದ್ರಗಳಲ್ಲೇ ಎಲ್‌ಕೆಜಿ-ಯುಕೆಜಿ ತರ ಗತಿ ಆರಂಭಿಸಲು ಸರ್ಕಾರಕ್ಕೆ ಮನವಿ ಮಾಡಲಾಗಿತ್ತು. ಆದರೆ ಈ ಮನವಿಯನ್ನು ಸರ್ಕಾರಗಳು ಪುರಸ್ಕರಿಸಿರಲಿಲ್ಲ. ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ-ಯುಕೆಜಿ ತರಗತಿ ತೆಗೆದರೆ ಅಂಗನವಾಡಿ ಕೇಂದ್ರಗಳು ಖಾಲಿ ಆಗುತ್ತವೆ. ಕಾರ್ಯಕರ್ತೆಯರು, ಸಹಾಯಕಿಯರು, ಅಡುಗೆ ಸಹಾಯಕಿಯರು ಕೆಲಸ ಕಳೆದುಕೊಳ್ಳುತ್ತಾರೆ ಎಂದು ಪ್ರತಿಭಟನೆ ನಡೆಸಿದ್ದರು.

ಅಲ್ಲದೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಡಿಯಲ್ಲೇ ಅಂಗನವಾಡಿ ಕೇಂದ್ರದಲ್ಲಿ ಎಲ್‌ಕೆಜಿ ಮತ್ತು ಯುಕೆಜಿ ಆರಂಭಿಸ ಬೇಕೆಂದು ಒತ್ತಾಯಿಸಿದ್ದರು. ಕೆಲ ಸರ್ಕಾರಿ ಶಾಲೆಗಳಲ್ಲಿನ ಎಲ್‌ಕೆಜಿ, ಯುಕೆಜಿಗೂ ಬೇಡಿಕೆಯಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳು ದಾಖಲಾಗುತ್ತಿದ್ದಾರೆ. ಇದೀಗ ಅಂಗನವಾಡಿಗಳಲ್ಲಿ ಎಲ್‌ಕೆಜಿ, ಯುಕೆಜಿಗಳು ಆರಂಭವಾದರೆ ಅಲ್ಲಿಯೂ ಮಕ್ಕಳ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆಯಿದೆ. ಜಿಲ್ಲೆಯ ಬಹುತೇಕ ಅಂಗನವಾಡಿಗಳಲ್ಲಿನ ಕಾರ್ಯಕರ್ತೆಯರು ಪದವೀಧರರು. ಆದರೆ ಕೆಲ ಕೇಂದ್ರಗಳಲ್ಲಿ ಇನ್ನೂ ಸಿಬ್ಬಂದಿ ನೇಮಕಾತಿ ಬಾಕಿಯಿದೆ. ಎಲ್‌ಕೆಜಿ, ಯುಕೆಜಿ ಆರಂಭವಾದ ನಂತರ ಅಂಗನವಾಡಿ ಸಿಬ್ಬಂದಿಗೆ ಈ ಬಗ್ಗೆ ತರಬೇತಿಯನ್ನು ನೀಡುವ ಅಗತ್ಯತೆಯಿದೆ.

ಇದನ್ನು ಓದಿ: ರಾಹುಲ್‌ರನ್ನು ಚಿಂತೆಗೀಡು ಮಾಡಿದ ರಾಜ್ಯದ ವಿದ್ಯಮಾನ 

ಅಂಗನವಾಡಿ ಕಾರ್ಯಕರ್ತರನ್ನು ಅನೇಕ ಕಾರ್ಯಕ್ರಮಗಳ ಅನುಷ್ಠಾನಕ್ಕೆ ಬಳಸಿಕೊಳ್ಳಲಾಗುತ್ತದೆ. ಇದರಿಂದ ಶಾಲಾ ಪೂರ್ವ ಶಿಕ್ಷಣ ಗುಣಮಟ್ಟದಲ್ಲಿ ಹಿನ್ನಡೆಯಾಗುತ್ತಿತ್ತು. ಹಾಗಾಗಿ ಎಲ್‌ಕೆಜಿ, ಯುಕೆಜಿ ಆರಂಭದ ಮೂಲಕ ಮಕ್ಕಳಿಗೆ ಕೌಶಲಾಧಾರಿತ, ಗುಣಮಟ್ಟದ ಶಿಕ್ಷಣ ನೀಡಲು ಅಗತ್ಯ ಕ್ರಮವಹಿಸಬೇಕಿದೆ. ಶಾಲೆಗಳಲ್ಲಿ ದಾಖಲಾತಿ ಕಡಿಮೆಯಾಗು ತ್ತಿದೆ.

ಕೋವಿಡ್ ಅವಧಿಯಲ್ಲಿನ ಆರ್ಥಿಕ ಸಂಕಷ್ಟದ ಹಿನ್ನೆಲೆಯಲ್ಲಿ ಖಾಸಗಿ ಶಾಲೆಯನ್ನು ಬಿಟ್ಟು ಪೋಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಲು ಮುಂದಾದ ಪರಿಣಾಮ ದಾಖಲಾತಿ ಏರಿಕೆ ಕಂಡಿತ್ತು. ಯಾವುದೇ ಕಾರಣಕ್ಕೂ ಅಂಗನವಾಡಿ ಶಿಕ್ಷಕಿಯರನ್ನು ತೆಗೆಯುವ ಪ್ರಶ್ನೆಯೇ ಇಲ್ಲ. ೩೦ ವರ್ಷಕ್ಕಿಂತ ಮೇಲ್ಪಟ್ಟ ಅಂಗನವಾಡಿ ಕೇಂದ್ರಗಳನ್ನು ಉನ್ನತ ದರ್ಜೆಗೆ ಏರಿಸಲಾಗುವುದು ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದರು. ಈಗ ಕೊಟ್ಟ ಮಾತಿನಂತೆ ಅವರು ನಡೆದುಕೊಳ್ಳಬೇಕಾಗಿದೆ. ಅಂಗನವಾಡಿ ಕಾರ್ಯಕರ್ತೆಯರಿಗೆ ಗೌರವಧನ ಹೆಚ್ಚಳ ಮಾಡಬೇಕಿದೆ.

ಇನ್ನು ಅಂಗನವಾಡಿ ಕಾರ್ಯಕರ್ತೆಯರನ್ನು ಚುನಾವಣೆಯ ಬಿಎಲ್‌ಓ ಕೆಲಸದಿಂದ ಮುಕ್ತಗೊಳಿಸಿ, ಸ್ಮಾರ್ಟ್ ಫೋನ್ ಬಳಸಲು ಬಾರದ ಕಾರ್ಯಕರ್ತೆಯರ ಕೆಲಸದ ಹೊರೆ ಕಡಿಮೆ ಮಾಡಬೇಕೆಂಬ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಮನವಿಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ಕೆಲಸದ ಹೊರೆ ಹೆಚ್ಚಾಗುತ್ತಲೇ ಇದೆ. ಇದೀಗ ಬೂತ್ ಮಟ್ಟದ ಕೆಲಸವನ್ನು ಸ್ಮಾರ್ಟ್ ಫೋನ್ ಮೂಲಕ ಮಾಡಲು ಸರ್ಕಾರ ಹೇಳುತ್ತಿದ್ದು, ಸ್ಮಾರ್ಟ್ ಫೋನ್ಬಳಕೆ ಮಾಡಲು ಬಾರದ ಕಾರ್ಯಕರ್ತೆಯರಿಗೆ ಇದು ಹೊರೆಯಾಗಲಿದೆ.

ಮಾತೃಪೂರ್ಣ, ಮಾತೃವಂದನ ಸೇರಿದಂತೆ ಹಲವಾರು ಯೋಜನೆಗಳನ್ನು ನಾವೇ ನಿಭಾಯಿಸುತ್ತಿರುವುದರಿಂದ ಈ ಕೆಲಸಕ್ಕಾಗಿ ಬೇರೆ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳಬೇಕು ಎಂಬ ಬೇಡಿಕೆ ನ್ಯಾಯಸಮ್ಮತವಾಗಿದೆ. ಉತ್ತರ ಕರ್ನಾಟಕದ ಕೆಲವು ಭಾಗಗಳಲ್ಲಿ ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿರುವುದು ಕಳವಳಕಾರಿ ಸಂಗತಿ. ಮಕ್ಕಳು ರಕ್ತಹೀನತೆ (ಅನಿಮಿಯಾ), ಆಯಾಸ, ನಿಶ್ಶಕ್ತಿ ಮತ್ತು ಬೆಳವಣಿಗೆಯ ಕುಂಠಿತಕ್ಕೆ ಒಳಗಾಗಬಹುದು, ಅಲ್ಲದೆ ಅವರ ಓದು ಮತ್ತು ಆಟದಲ್ಲಿನ ಆಸಕ್ತಿ ಕಡಿಮೆಯಾಗಬಹುದು. ಈ ಸಮಸ್ಯೆಯನ್ನು ಎದುರಿಸಲು, ಸಮಗ್ರ ಶಿಶು ಅಭಿವೃದ್ಧಿ ಯೋಜನೆಯಂತಹ ಸರ್ಕಾರಿ ಯೋಜನೆಗಳು ಪೂರಕ ಪೌಷ್ಟಿಕ ಆಹಾರ ಮತ್ತು ಪೌಷ್ಟಿಕಾಂಶದ ಕಿಟ್‌ಗಳನ್ನು ಒದಗಿಸುವ ಮೂಲಕ ಸಹಾಯ ಮಾಡುತ್ತವೆ. ಆದರೂ ಇವುಗಳ ಅನು ಷ್ಠಾನದಲ್ಲಿ ಸಮಸ್ಯೆಗಳಿರಬಹುದು. ಮಕ್ಕಳಿಗೆ ಪೌಷ್ಟಿಕ ಆಹಾರ ದೊರಕುವಂತೆ ನೋಡಿಕೊಳ್ಳುವುದು ಸರ್ಕಾರ, ಪಾಲಕರು ಮತ್ತು ಸಮಾಜದ ಕರ್ತವ್ಯವಾಗಿದೆ.

” ಅಂಗನವಾಡಿಗಳಲ್ಲಿ ಎಲ್‌ಕೆಜಿ, ಯುಕೆಜಿಗಳು ಆರಂಭವಾದರೆ ಅಲ್ಲಿಯೂ ಕೂಡ ಮಕ್ಕಳ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆಯಿದೆ. ಜಿಲ್ಲೆಯ ಬಹುತೇಕ ಅಂಗನವಾಡಿಗಳಲ್ಲಿನ ಕಾರ್ಯಕರ್ತೆಯರು ಪದವೀಧರರು. ಆದರೆ ಕೆಲ ಕೇಂದ್ರಗಳಲ್ಲಿ ಇನ್ನೂ ಸಿಬ್ಬಂದಿ ನೇಮಕಾತಿ ಬಾಕಿಯಿದೆ. ಎಲ್ ಕೆಜಿ, ಯುಕೆಜಿ ಆರಂಭವಾದ ನಂತರ ಅಂಗನವಾಡಿ ಸಿಬ್ಬಂದಿಗೆ ಈ ಬಗ್ಗೆ ತರಬೇತಿಯನ್ನು ನೀಡುವ ಅಗತ್ಯತೆಯಿದೆ.”

ಆಂದೋಲನ ಡೆಸ್ಕ್

Recent Posts

ಡಿ.ಕೆ.ಶಿವಕುಮಾರ್‌ ಸಂಪುಟದಲ್ಲಿ ನನಗೆ ಸಚಿವ ಸ್ಥಾನ ಬೇಡ: ಮಾಜಿ ಸಚಿವ ಕೆ.ಎನ್.ರಾಜಣ್ಣ

ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…

9 mins ago

ನನ್ನನ್ನು ಹೆದರಿಸ್ತೀನಿ ಅಂದ್ರೆ ಅದು ಸಾಧ್ಯವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ

ಹಾಸನ: ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್‌ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…

51 mins ago

ಹೇಮಾವತಿ ಜಲಾಶಯದ ಬಳಿ ಉದ್ಯಾನವನ ನಿರ್ಮಿಸಲು ಸಿಎಂ ಸಿದ್ದರಾಮಯ್ಯ ಭರವಸೆ

ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…

1 hour ago

ಮೈಸೂರು| ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆ

ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…

1 hour ago

ಮೈಶುಗರ್‌ ಶಾಲಾ ಶಿಕ್ಷಕರಿಗೆ ನೆರವಾದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

ಮಂಡ್ಯ: ಸುಮಾರು 15 ತಿಂಗಳಿನಿಂದ ವೇತನ ಸಿಗದೇ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದ ಮಂಡ್ಯದ ಮೈಶುಗರ್‌ ಶಾಲೆಯ ಶಿಕ್ಷಕರ ಬಾಕಿ ವೇತನಕ್ಕಾಗಿ…

2 hours ago

ಸಮಾನತೆ ತರಲೆಂದೇ ಗ್ಯಾರಂಟಿ ಯೋಜನೆಗೆ ಕೋಟಿಗಟ್ಟಲೇ ಹಣ ಖರ್ಚಿ ಮಾಡ್ತಿರೋದು: ಸಿಎಂ ಸಿದ್ದರಾಮಯ್ಯ

ಹಾಸನ: ಗ್ಯಾರಂಟಿಗೆ ಕೋಟಿಗಟ್ಟಲೇ ಹಣ ಖರ್ಚು ಮಾಡ್ತಿರೋದು ಸಮಾನತೆ ತರಲು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಹಾಸನದಲ್ಲಿ…

2 hours ago