ಚರಂಡಿ ನೀರು ನಿಲ್ಲುತ್ತಿದ್ದ ರಸ್ತೆಗೆ ಹೊಸ ಪೈಪ್ ಲೈನ್
ಮೈಸೂರು: ಯುಜಿಡಿ ಸಮಸ್ಯೆಯಿಂದ ಚರಂಡಿಯ ನೀರು ನಿಂತು ದುರ್ವಾಸನೆ ಬೀರುತ್ತಿದ್ದ ರಸ್ತೆಗೆ ಹೊಸ ಪೈಪ್‌ಲೈನ್ ಅಳವಡಿಸುವ ಮೂಲಕ ಶುಚಿತ್ವ ಕಾಪಾಡಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಲಾಗಿದೆ. ರಸ್ತೆ ಅಭಿವೃದ್ಧಿ ಕಾಮಗಾರಿ ನಡೆದರೆ ಸಮಸ್ಯೆ ಬಗೆಹರಿಯಲಿದೆ ಎಂದು ನಗರಪಾಲಿಕೆ ಸದಸ್ಯರಾದ ಶೋಭಾ ಸುನಿಲ್ ಭರವಸೆ ನೀಡಿದರು.
‘ಆಂದೋಲನ’ ದಿನಪತ್ರಿಕೆಯಲ್ಲಿ ಜ.11ರಂದು ‘ಸುಗಮ ಸಂಚಾರಕ್ಕೆ ರಸ್ತೆ ಸರಿಪಡಿಸಿ’ ಶೀರ್ಷಿಕೆಯಡಿ ಪ್ರಕಟವಾಗಿರುವ ಓದುಗರ ಪತ್ರಕ್ಕೆ ಪ್ರತಿಕ್ರಿಯಿಸಿರುವ ಶೋಭಾ ಸುನಿಲ್ ಅವರು, ರಸ್ತೆಯಲ್ಲಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಾಗುವುದು ಎಂದು ತಿಳಿಸಿದ್ದಾರೆ.
ವಿದ್ಯಾರಣ್ಯಪುರಂನ 4ನೇ ಮುಖ್ಯ ರಸ್ತೆ, 9ನೇ ಅಡ್ಡರಸ್ತೆಯಲ್ಲಿ ಚರಂಡಿ ನೀರು ನಿಂತು ಸಾರ್ವಜನಿಕರು ಬಹಳಷ್ಟು ತೊಂದರೆ ಅನುಭವಿ ಸುತ್ತಿದ್ದುದನ್ನು ಕಂಡು ಮುತುವರ್ಜಿ ವಹಿಸಿ ಯುಜಿಡಿ ಸಮಸ್ಯೆ ಬಗೆಹರಿಸಿ, ಹೊಸ ಪೈಪ್ ಲೈನ್ ಅಳವಡಿಸಲಾಗಿದೆ. ಮಣ್ಣಿನ ಗುಂಡಿಗಳನ್ನು ಸಮತಟ್ಟುಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ. ಸ್ವತಃ ನಾನೇ ಸ್ಥಳಕ್ಕೆ ಹೋಗಿ ದೂಳು ಬಾರದಂತೆ ನೀರು ಸಿಂಪಡಿಸಿದ್ದೇನೆ.ರಸ್ತೆ ಡಾಂಬರೀಕರಣ ಕಾಮಗಾರಿ ನಡೆದರೆ ಸಮಸ್ಯೆ ಬಗೆಹರಿಯಲಿದೆ ಎಂದು ಅವರು ತಿಳಿಸಿದ್ದಾರೆ.
ಮಂಡ್ಯ: ಚಲಿಸುತ್ತಿದ್ದ ಕಾರಿಗೆ ಮೊಟ್ಟೆ ಹೊಡೆದು ಚಾಲಕನ ಕಣ್ಣಿಗೆ ಕಾರದ ಪುಡಿ ಎರಚಿ ನಗದು ದರೋಡೆ ಮಾಡಿರುವ ಘಟನೆ ಮಂಡ್ಯ…
ಹೈದರಾಬಾದ್: ಸಂಧ್ಯಾ ಥಿಯೇಟರ್‌ನಲ್ಲಿ ಕಾಲ್ತುಳಿತ ಸಂಭವಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲುಗು ನಟ ಅಲ್ಲು ಅರ್ಜುನ್‌ಗೆ ನೋಟಿಸ್ ನೀಡಲಾಗಿದೆ. ನಾಳೆ ಬೆಳಿಗ್ಗೆ 11…
ಬೆಂಗಳೂರು: ನಟ ಯಶ್ ಹಾಗೂ ಪತ್ನಿ ರಾಧಿಕಾ ಪಂಡಿತ್ ಅವರಿಂದು ಇತ್ತೀಚೆಗೆ ನಿಧನರಾಗಿದ್ದ ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರ ನಿವಾಸಕ್ಕೆ…
ಮುಂಬೈ: ಬಾಲಿವುಡ್‌ನ ಖ್ಯಾತ ನಿರ್ದೇಶಕ ಶ್ಯಾಮ್ ಬೆನಗಲ್ ಅವರಿಂದು ವಿಧಿವಶರಾಗಿದ್ದಾರೆ. ಅವರಿಗೆ 90 ವರ್ಷ ವಯಸ್ಸಾಗಿತ್ತು. ಕಳೆದ ಕೆಲ ತಿಂಗಳುಗಳಿಂದ…
ಜೈಪುರ: ಭಾರತದ ಸ್ಟಾರ್ ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ.ಸಿಂಧು ಅವರು ಉದ್ಯಮಿಯೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ರಾಜಸ್ಥಾನದ ಉದಯಪುರದಲ್ಲಿ ಅದ್ಧೂರಿಯಾಗಿ ನಡೆದ…
ಮೈಸೂರು: ರೈಲ್ವೆ ಇಲಾಖೆಯಲ್ಲಿ ಉದ್ಯೋಗ ಪಡೆಯಲು ಕನ್ನಡಿಗರು ನಿರಾಸಕ್ತಿ ತೋರುತ್ತಿದ್ದಾರೆ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಬೇಸರ ವ್ಯಕ್ತಪಡಿಸಿದ್ದಾರೆ. ಈ…