ಪಾಕಿಸ್ತಾನದ ಆತಿಥ್ಯದಲ್ಲಿ ನಡೆದ ಚಾಂಪಿಯನ್ ಟ್ರೋಫಿ ಪಂದ್ಯಾವಳಿಯಲ್ಲಿ ಭಾರತೀಯ ಕ್ರಿಕೆಟ್ ತಂಡ ಫೈನಲ್ ಪಂದ್ಯದಲ್ಲಿ ನ್ಯೂಜಿಲ್ಯಾಂಡ್ ತಂಡವನ್ನು ಮಣಿಸಿ ಚಾಂಪಿಯನ್ ಆಗಿ ಹೊರಹೊಮ್ಮಿದೆ.
ಐಸಿಸಿ ಆಯೋಜಿಸುವ ಟೆಸ್ಟ್ ಚಾಂಪಿಯನ್‌ಶಿಪ್, ಟಿ-೨೦ ವರ್ಲ್ಡ್ ಕಪ್, ಏಕದಿನ ವಿಶ್ವಕಪ್ ಹಾಗೂ ಚಾಂಪಿಯನ್ ಟ್ರೋಫಿ ಪಂದ್ಯಾವಳಿಗಳಲ್ಲಿ ಭಾರತ ಹಲವು ಬಾರಿ ಫೈನಲ್ ತಲುಪಿರುವುದು ಹೆಮ್ಮೆಯ ವಿಚಾರ. ಅದರಲ್ಲಿಯೂ ಟಿ-೨೦ ವಿಶ್ವಕಪ್‌ನಲ್ಲಿ ಗೆಲುವು ಸಾಽಸಿತ್ತು. ಈಗ ಚಾಂಪಿಯನ್ ಟ್ರೋಫಿಯನ್ನೂ ಗೆಲ್ಲುವ ಮೂಲಕ ಮೂರನೇ ಬಾರಿಗೆ ಚಾಂಪಿಯನ್ಸ್ ಟ್ರೋಫಿ ಗೆದ್ದ ಮೊದಲ ತಂಡ ಅನಿಸಿಕೊಂಡಿದೆ.
ಈ ಪಂದ್ಯಾವಳಿಯಲ್ಲಿ ಭಾರತ ಯಾವುದೇ ಪಂದ್ಯವನ್ನೂ ಸೋಲದೆ, ಫೈನಲ್ ತಲುಪಿ ಗೆಲುವು ಸಾಧಿಸಿರುವುದು ಹೆಮ್ಮೆಯ ವಿಚಾರ. ಫೈನಲ್‌ನಲ್ಲಿ ನಾಯಕ ರೋಹಿತ್ ಶರ್ಮರ ಸ್ಛೋಟಕ ಆರಂಭ, ಕನ್ನಡಿಗ ಕೆ.ಎಲ್.ರಾಹುಲ್‌ರವರ ವಿಕೆಟ್ ಕೀಪಿಂಗ್ ಹಾಗೂ ಸಮಯೋಚಿತ ಬ್ಯಾಟಿಂಗ್‌ನಿಂದ ಭಾರತ ತಂಡ ಗೆಲುವಿನ ದಡ ಸೇರಿತು. ಅಲ್ಲದೆ ಸ್ಪಿನ್ ಬೌಲರ‍್ಸ್‌ಗಳಾದ ವರುಣ್ ಚಕ್ರವರ್ತಿ, ಕುಲ್ದೀಪ್ ಯಾದವ್, ರವೀಂದ್ರ ಜಡೇಜಾ ಹಾಗೂ ಅಕ್ಷರ್ ಪಟೇಲ್‌ರವರ ಉತ್ತಮ ಪ್ರದರ್ಶನವೂ ತಂಡದ ಗೆಲುವಿಗೆ ಕಾರಣವಾಯಿತು.
ಪಂದ್ಯಾವಳಿಯಲ್ಲಿ ಇಡೀ ತಂಡದ ಕೊಡುಗೆಯನ್ನು ಮರೆಯುವಂತಿಲ್ಲ. ಈ ಗೆಲುವಿನ ನಾಗಾಲೋಟ ೨೦೨೭ರ ಏಕದಿನ ವಿಶ್ವಕಪ್‌ನಲ್ಲೂ ಮುಂದುವರಿಯಲಿ ಎಂಬುದು ಭಾರತೀಯರ ಕನಸು.
-ಹರಳಹಳ್ಳಿ ಪುಟ್ಟರಾಜು, ಪಾಂಡವಪುರ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…