ಹೊಸದಿಲ್ಲಿಯ ಹೈಕೋರ್ಟ್‌ನ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರ ನಿವಾಸದಲ್ಲಿ ಅಪಾರ ಪ್ರಮಾಣದ ಹಣ ಪತ್ತೆಯಾಗಿದ್ದು, ಈ ಬಗ್ಗೆ ಸುಪ್ರೀಂ ಕೋರ್ಟ್ ಆಂತರಿಕ ತನಿಖೆ ನಡೆಸುವುದಾಗಿ ಹೇಳಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದೆ.
ಹೈಕೋರ್ಟ್‌ನ ನ್ಯಾಯಮೂರ್ತಿಯೊಬ್ಬರ ಮನೆಯಲ್ಲಿ ಇಷ್ಟು ಪ್ರಮಾಣದ ಹಣ ಬರಲು ಹೇಗೆ ಸಾಧ್ಯ? ಈ ಹಣ ಯಾವ ಮೂಲದಿಂದ ಬಂದಿದೆ? ಎಂಬ ಪ್ರಶ್ನೆ ಸಾರ್ವಜನಿಕ ವಲಯದಿಂದ ಕೇಳಿ ಬರುತ್ತಿದ್ದು, ಇದರ ಸತ್ಯಾಸತ್ಯತೆ ಜನರಿಗೆ ತಿಳಿಯಬೇಕಿದೆ.
ಪ್ರಸ್ತುತ ದಿನಗಳಲ್ಲಿ ಜನರಿಗೆ ನ್ಯಾಯಾಂಗ ವ್ಯವಸ್ಥೆ ಮೇಲಿನ ವಿಶ್ವಾಸ ಕಡಿಮೆಯಾಗುತ್ತಿದೆ. ಅಂತಹದ್ದರಲ್ಲಿ ಇಂತಹ ಪ್ರಕರಣಗಳು ಜನರು ನ್ಯಾಯಾಂಗ ವ್ಯವಸ್ಥೆ ಮೇಲೆ ನಂಬಿಕೆ ಕಳೆದುಕೊಳ್ಳುವಂತೆ ಮಾಡುತ್ತವೆ. ಆದ್ದರಿಂದ ಸರ್ಕಾರ ಇದುವರೆಗೂ ಈ ನ್ಯಾಯಾಧೀಶರು ನೀಡಿರುವ ಎಲ್ಲ ತೀರ್ಪುಗಳನ್ನೂ ಮರು ತನಿಖೆಗೆ ಒಳಪಡಿಸಬೇಕು ಎಂಬುದು ಸಾರ್ವಜನಿಕರ ಒತ್ತಾಯವಾಗಿದೆ.
ಸಾರ್ವಜನಿಕರು ಗೌರವ ಮತ್ತು ವಿಶ್ವಾಸ ಹೊಂದಿರುವ ನ್ಯಾಯಾಂಗ ವ್ಯವಸ್ಥೆಯಲ್ಲಿಯೇ ಭ್ರಷ್ಟ್ರಾಚಾರ ಹೆಚ್ಚಾದರೆ ಜನ ಇನ್ನಾರ ಬಳಿ ನ್ಯಾಯ ಕೇಳಬೇಕು? ಈ ಪ್ರಕರಣ ನ್ಯಾಯಾಂಗ ವ್ಯವಸ್ಥೆಗೇ ಕಪ್ಪು ಚುಕ್ಕೆ ಇಟ್ಟಂತಾಗಿದೆ.
–ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು.
ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…
ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…
ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…
ಹಾಸನ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…
ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…
ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…