ಓದುಗರ ಪತ್ರ

ಓದುಗರ ಪತ್ರ: ನ್ಯಾಯಾಂಗ ವ್ಯವಸ್ಥೆಗೇ ಕಪ್ಪು ಚುಕ್ಕೆ ತಂದ ಪ್ರಕರಣ

ಹೊಸದಿಲ್ಲಿಯ ಹೈಕೋರ್ಟ್‌ನ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರ ನಿವಾಸದಲ್ಲಿ ಅಪಾರ ಪ್ರಮಾಣದ ಹಣ ಪತ್ತೆಯಾಗಿದ್ದು, ಈ ಬಗ್ಗೆ ಸುಪ್ರೀಂ ಕೋರ್ಟ್ ಆಂತರಿಕ ತನಿಖೆ ನಡೆಸುವುದಾಗಿ ಹೇಳಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದೆ.

ಹೈಕೋರ್ಟ್‌ನ ನ್ಯಾಯಮೂರ್ತಿಯೊಬ್ಬರ ಮನೆಯಲ್ಲಿ ಇಷ್ಟು ಪ್ರಮಾಣದ ಹಣ ಬರಲು ಹೇಗೆ ಸಾಧ್ಯ? ಈ ಹಣ ಯಾವ ಮೂಲದಿಂದ ಬಂದಿದೆ? ಎಂಬ ಪ್ರಶ್ನೆ ಸಾರ್ವಜನಿಕ ವಲಯದಿಂದ ಕೇಳಿ ಬರುತ್ತಿದ್ದು, ಇದರ ಸತ್ಯಾಸತ್ಯತೆ ಜನರಿಗೆ ತಿಳಿಯಬೇಕಿದೆ.

ಪ್ರಸ್ತುತ ದಿನಗಳಲ್ಲಿ ಜನರಿಗೆ ನ್ಯಾಯಾಂಗ ವ್ಯವಸ್ಥೆ ಮೇಲಿನ ವಿಶ್ವಾಸ ಕಡಿಮೆಯಾಗುತ್ತಿದೆ. ಅಂತಹದ್ದರಲ್ಲಿ ಇಂತಹ ಪ್ರಕರಣಗಳು ಜನರು ನ್ಯಾಯಾಂಗ ವ್ಯವಸ್ಥೆ ಮೇಲೆ ನಂಬಿಕೆ ಕಳೆದುಕೊಳ್ಳುವಂತೆ ಮಾಡುತ್ತವೆ. ಆದ್ದರಿಂದ ಸರ್ಕಾರ ಇದುವರೆಗೂ ಈ ನ್ಯಾಯಾಧೀಶರು ನೀಡಿರುವ ಎಲ್ಲ ತೀರ್ಪುಗಳನ್ನೂ ಮರು ತನಿಖೆಗೆ ಒಳಪಡಿಸಬೇಕು ಎಂಬುದು ಸಾರ್ವಜನಿಕರ ಒತ್ತಾಯವಾಗಿದೆ.

ಸಾರ್ವಜನಿಕರು ಗೌರವ ಮತ್ತು ವಿಶ್ವಾಸ ಹೊಂದಿರುವ ನ್ಯಾಯಾಂಗ ವ್ಯವಸ್ಥೆಯಲ್ಲಿಯೇ ಭ್ರಷ್ಟ್ರಾಚಾರ ಹೆಚ್ಚಾದರೆ ಜನ ಇನ್ನಾರ ಬಳಿ ನ್ಯಾಯ ಕೇಳಬೇಕು? ಈ ಪ್ರಕರಣ ನ್ಯಾಯಾಂಗ ವ್ಯವಸ್ಥೆಗೇ ಕಪ್ಪು ಚುಕ್ಕೆ ಇಟ್ಟಂತಾಗಿದೆ.

ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು.

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಮೈಸೂರು ದಸರಾ | ಯುವ ಸಂಭ್ರಮ ಉದ್ಘಾಟನೆಗೆ ವಿಜಯಪ್ರಕಾಶ್‌

ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…

2 hours ago

ಕೊಡಗು: ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ

ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…

8 hours ago

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

12 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

12 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

12 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

15 hours ago