ಓದುಗರ ಪತ್ರ

ಓದುಗರ ಪತ್ರ | ಪಾರ್ಕಿಂಗ್ ಸ್ಥಳಗಳಲ್ಲಿ ಆನ್‌ಲೈನ್ ಪಾವತಿ ಸ್ವೀಕರಿಸಿ

ಮೈಸೂರಿನ ಕೇಂದ್ರೀಯ ಬಸ್ ನಿಲ್ದಾಣದ ಕಟ್ಟಡದಲ್ಲಿ ಇರುವ ಪಾರ್ಕಿಂಗ್ ಸ್ಥಳದಲ್ಲಿ ಆನ್‌ಲೈನ್ ಪಾವತಿ ಮಾಡಬೇಡಿ, ಹಣ (ಕ್ಯಾಷ್) ಕೊಡಿ ಎಂದು ಹೇಳುತ್ತಾರೆ. ಮೈಸೂರಿನ ಕೇಂದ್ರೀಯ ಬಸ್ ನಿಲ್ದಾಣದ ಕಟ್ಟಡದಲ್ಲಿ ಇರುವ ಪಾರ್ಕಿಂಗ್ ಸ್ಥಳದಲ್ಲಿ ಆನ್‌ಲೈನ್ ಪಾವತಿ ಮಾಡಬೇಡಿ, ಹಣ (ಕ್ಯಾಷ್) ಕೊಡಿ ಎಂದು ಹೇಳುತ್ತಾರೆ. ಸಣ್ಣ ಪುಟ್ಟ ಬೀದಿ ಬದಿಯ ವ್ಯಾಪಾರ ಮಾಡುವವರೂ ಫೋನ್ ಪೇ, ಗೂಗಲ್ ಪೇ ಹಾಗೂ ಪೆಟಿಎಂಗಳ ಮೂಲಕ ಹಣ ಪಡೆದುಕೊಳ್ಳುತ್ತಾರೆ. ಆದರೆ ಮೈಸೂರಿನಲ್ಲಿ ಕೆಲವು ಸ್ಥಳಗಳಲ್ಲಿ ವಾಹನಗಳ ಪಾರ್ಕಿಂಗ್ ಟೆಂಡರ್ ಪಡೆದವರು ಆನ್‌ಲೈನ್ ಮೂಲಕ ಹಣ ಪಡೆಯದೇ ಬೇಜವಾ ಬ್ದಾರಿಯಿಂದ ವರ್ತಿಸುತ್ತಾರೆ. ಇತ್ತೀಚಿನ ದಿನಗಳಲ್ಲಿ ದೇಶಾದ್ಯಂತ ಆನ್‌ಲೈನ್ ಮೂಲಕ ಹಣ ವರ್ಗಾವಣೆ ಸಾಮಾನ್ಯವಾಗಿದೆ. ಆದರೆ ಪಾರ್ಕಿಂಗ್ ಸ್ಥಳಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ಅದು ತಿಳಿದಿಲ್ಲವೇ? ಹಣವನ್ನು ಆನ್‌ಲೈನ್ ಪಾವತಿ ಮಾಡಲು ಹೋದರೆ ಜಗಳವಾಡುವುಲ್ಲದೇ ಅಶ್ಲೀಲ ಪದಗಳಿಂದ ನಿಂದಿಸುತ್ತಾರೆ.

ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಪಾರ್ಕಿಂಗ್ ಗುತ್ತಿಗೆ ಪಡೆದವರು ಇಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗೆ ಆನ್‌ಲೈನ್ ಮೂಲಕವೂ ಹಣ ಪಡೆಯಲು ಸೂಚಿಸಬೇಕಿದೆ.

– ನಾಗೇಶ್ ಮಾನಸಗಂಗೋತ್ರಿ ಮೈಸೂರು

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

10 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

14 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

14 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

14 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

14 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

14 hours ago