FOOTPATH
ಮೈಸೂರಿನ ಚಾಮರಾಜ ಜೋಡಿ ರಸ್ತೆಯ ಬಸವೇಶ್ವರ ಸರ್ಕಲ್ ಬಳಿ ಹಾಸಿಗೆ ಅಂಗಡಿಗಳು, ಬೈಕ್ ರಿಪೇರಿ ಅಂಗಡಿಗಳ ಮಾಲೀಕರು ಫುಟ್‌ಪಾತ್‌ಅನ್ನು ಅತಿಕ್ರಮಿಸಿದ್ದು, ಪಾದಚಾರಿಗಳು ಫುಟ್‌ಪಾತ್‌ಬಿಟ್ಟು ರಸ್ತೆಯ ಮೇಲೆ ನಡೆಯುವುದು ಅನಿವಾರ್ಯವಾಗಿದೆ.
ಇಲ್ಲಿ ಸುಮಾರು ಏಳೆಂಟು ಹಾಸಿಗೆ ಅಂಗಡಿಗಳಿದ್ದು, ಅಂಗಡಿಗಳವರು ಫುಟ್‌ಪಾತ್ ಮೇಲೆಯೇ ಹಾಸಿಗಳನ್ನು ತಯಾರಿಸುತ್ತಾರೆ. ಈ ಸಂದರ್ಭದಲ್ಲಿ ಪಾದಚಾರಿಗಳು ಓಡಾಡಲು ತೀವ್ರ ತೊಂದರೆಯಾಗುತ್ತದೆ. ಹಾಸಿಗೆ ತಯಾರಿಸಿದ ನಂತರ ಅದನ್ನು ಸರಿ ಮಾಡಲು ದೊಣ್ಣೆಯಿಂದ ಹೊಡೆಯುತ್ತಾರೆ. ಈ ಸಂದರ್ಭದಲ್ಲಿ ಈ ಮಾರ್ಗದಲ್ಲಿ ಸಂಚರಿಸುವ ಯಾರಿಗಾದರೂ ದೊಣ್ಣೆ ಆಕಸ್ಮಿಕವಾಗಿ ತಗುಲಿದರೆ ಪ್ರಾಣಕ್ಕೆ ಎರವಾಗುತ್ತದೆ. ಇನ್ನು ತಾತಯ್ಯ ಸರ್ಕಲ್ ಬಳಿ ಯೂ ಫುಟ್ ಪಾತ್ ಒತ್ತುವರಿಯಿಂದಾಗಿ ಸಾರ್ವಜನಿಕರಿಗೆ ಸಮಸ್ಯೆ ಯಾಗುತ್ತಿದೆ. ಸರ್ಕಲ್‌ನಿಂದ ಬಸವೇಶ್ವರ ಸರ್ಕಲ್‌ಗೆ ತೆರಳುವ ಮಾರ್ಗದ ಎಡ ಭಾಗದಲ್ಲಿ ಬೈಕ್ ರಿಪೇರಿ ಅಂಗಡಿಗಳು, ಟೈಲ್ಸ್ ಅಂಗಡಿ, ರೇಡಿಯಂ ಸ್ಟಿಕ್ಕರ್ ಅಂಗಡಿಗಳು ಪಾದಚಾರಿ ಮಾರ್ಗವನ್ನು ಅತಿಕ್ರಮಿಸಿದ್ದರೆ ಬಲ ಭಾಗದಲ್ಲಿ ಹೊಸದಾಗಿ ಆರಂಭವಾಗಿರುವ ಐಷಾರಾಮಿ ಹೋಟೆಲ್‌ನವರು ಫುಟ್‌ಪಾತ್ ಮೇಲೆಯೇ ಬೋರ್ಡ್ ನಿರ್ಮಿಸಿದ್ದಾರೆ. ಇದೂ ಸಾಲದೆಂಬಂತೆ ಹೋಟೆಲ್ ಜಾಹೀರಾತು ಫುಲಕಗಳನ್ನು ಅಳವಡಿಸಿದ್ದಾರೆ. ಅಲಂಕಾರಕ್ಕೆ ಇಟ್ಟಿರುವ ಹೂ ಕುಂಡಗಳಿಂದಲೂ ಫುಟ್ ಪಾತ್ ಒತ್ತುವರಿಯಾಗಿದೆ. ಉಪಾಹಾರ ದರ್ಶನಿಗಳು, ಅಂಗಡಿಗಳ ಮಾಲೀಕರಿಂದ ಪಾದಚಾರಿ ಮಾರ್ಗ ಒತ್ತುವರಿಯಾಗಿದೆ. ಮೈಸೂರು ಮಹಾನಗರ ಪಾಲಿಕೆಯ ಚುನಾಯಿತ ಜನಪ್ರತಿನಿಧಿಗಳ ಅಧಿಕಾರಾವಧಿ ಮುಗಿದು ೨ ವರ್ಷಗಳು ಕಳೆದಿವೆ. ಪಾಲಿಕೆ ಅಧಿಕಾರಿಗಳು ಸಾರ್ವಜನಿಕರ ಸಮಸ್ಯೆಯನ್ನು ಗಮನಿಸುತ್ತಿಲ್ಲ. ಹೀಗಾಗಿ ಸಮಸ್ಯೆಯನ್ನು ಯಾರ ಬಳಿ ಹೇಳಬೇಕೆಂಬುದೇ ಸಾರ್ವಜನಿಕರಿಗೆ ತಿಳಿಯುತ್ತಿಲ್ಲ .
– ಎ.ಜಿ. ಚಂದ್ರಲಾ, ಮೈಸೂರು
ಕೈಗಾರಿಕೆಗಳ ತ್ಯಾಜ್ಯ, ಒಳಚರಂಡಿ ನೀರು ಸೇರಿ ಸ್ನಾನಘಟ್ಟದ ನೀರು ಕಲ್ಮಶ, ಸ್ನಾನ ಮಾಡುವ ಭಕ್ತರಿಗೆ ರೋಗದ ಭೀತಿ ಎಸ್.ಎಸ್.ಭಟ್ ನಂಜನಗೂಡು…
ಸಾಲಿಗ್ರಾಮ : ಪಟ್ಟಣದ ಹೊರವಲಯದಲ್ಲಿ ಕಾರುಗಳ ಮುಖಾಮುಖಿ ಡಿಕ್ಕಿಯಾಗಿ ಇಬ್ಬರ ಸಾವಿಗೀಡಾಗಿ, ಮೂವರಿಗೆ ಗಾಯಗಳಾಗಿರುವ ಘಟನೆ ನಡೆದಿದೆ. ಪಟ್ಟಣದಿಂದ ಕೇರಳಾಪುರಕ್ಕೆ…
ಕೆ.ಆರ್.ನಗರ : ಪ್ರತ್ಯೇಕ ಪ್ರಕರಣಗಳಲ್ಲಿ ವಿದ್ಯುತ್ ಸ್ಪರ್ಶಕ್ಕೀಡಾಗಿ ಇಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ಒಂದು ಪ್ರಕರಣದಲ್ಲಿ ಹೊಸ ಅಗ್ರಹಾರ ಹೋಬಳಿಯ…
ಕೊಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮೊದಲ ಹಂತಕ್ಕೆ ಇಂದು ಮತದಾನ ನಡೆಯುತ್ತಿದೆ. ಈ ಹೊತ್ತಿನಲ್ಲೇ ಆತಂಕಕಾರಿ ಘಟನೆಯೊಂದು…
ಬೆಂಗಳೂರು : ಇಂದು ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಲ್ಲಿ ವಿಧಾನಸಭೆ ಚುನಾವಣೆಗೆ ಬೆಳಗ್ಗೆ 7 ಗಂಟೆಯಿಂದ ಮತದಾನ ಆರಂಭವಾಗಿದೆ. ಪಶ್ಚಿಮ…