ಓದುಗರ ಪತ್ರ

ಓದುಗರ ಪತ್ರ | ಫುಟ್ ಪಾತ್ ಒತ್ತುವರಿ ತೆರವುಗೊಳಿಸಿ

ಮೈಸೂರಿನ ಚಾಮರಾಜ ಜೋಡಿ ರಸ್ತೆಯ ಬಸವೇಶ್ವರ ಸರ್ಕಲ್ ಬಳಿ ಹಾಸಿಗೆ ಅಂಗಡಿಗಳು, ಬೈಕ್ ರಿಪೇರಿ ಅಂಗಡಿಗಳ ಮಾಲೀಕರು ಫುಟ್‌ಪಾತ್‌ಅನ್ನು ಅತಿಕ್ರಮಿಸಿದ್ದು, ಪಾದಚಾರಿಗಳು ಫುಟ್‌ಪಾತ್‌ಬಿಟ್ಟು ರಸ್ತೆಯ ಮೇಲೆ ನಡೆಯುವುದು ಅನಿವಾರ್ಯವಾಗಿದೆ.

ಇಲ್ಲಿ ಸುಮಾರು ಏಳೆಂಟು ಹಾಸಿಗೆ ಅಂಗಡಿಗಳಿದ್ದು, ಅಂಗಡಿಗಳವರು ಫುಟ್‌ಪಾತ್ ಮೇಲೆಯೇ ಹಾಸಿಗಳನ್ನು ತಯಾರಿಸುತ್ತಾರೆ. ಈ ಸಂದರ್ಭದಲ್ಲಿ ಪಾದಚಾರಿಗಳು ಓಡಾಡಲು ತೀವ್ರ ತೊಂದರೆಯಾಗುತ್ತದೆ. ಹಾಸಿಗೆ ತಯಾರಿಸಿದ ನಂತರ ಅದನ್ನು ಸರಿ ಮಾಡಲು ದೊಣ್ಣೆಯಿಂದ ಹೊಡೆಯುತ್ತಾರೆ. ಈ ಸಂದರ್ಭದಲ್ಲಿ ಈ ಮಾರ್ಗದಲ್ಲಿ ಸಂಚರಿಸುವ ಯಾರಿಗಾದರೂ ದೊಣ್ಣೆ ಆಕಸ್ಮಿಕವಾಗಿ ತಗುಲಿದರೆ ಪ್ರಾಣಕ್ಕೆ ಎರವಾಗುತ್ತದೆ. ಇನ್ನು ತಾತಯ್ಯ ಸರ್ಕಲ್ ಬಳಿ ಯೂ ಫುಟ್ ಪಾತ್ ಒತ್ತುವರಿಯಿಂದಾಗಿ ಸಾರ್ವಜನಿಕರಿಗೆ ಸಮಸ್ಯೆ ಯಾಗುತ್ತಿದೆ. ಸರ್ಕಲ್‌ನಿಂದ ಬಸವೇಶ್ವರ ಸರ್ಕಲ್‌ಗೆ ತೆರಳುವ ಮಾರ್ಗದ ಎಡ ಭಾಗದಲ್ಲಿ ಬೈಕ್ ರಿಪೇರಿ ಅಂಗಡಿಗಳು, ಟೈಲ್ಸ್ ಅಂಗಡಿ, ರೇಡಿಯಂ ಸ್ಟಿಕ್ಕರ್ ಅಂಗಡಿಗಳು ಪಾದಚಾರಿ ಮಾರ್ಗವನ್ನು ಅತಿಕ್ರಮಿಸಿದ್ದರೆ ಬಲ ಭಾಗದಲ್ಲಿ ಹೊಸದಾಗಿ ಆರಂಭವಾಗಿರುವ ಐಷಾರಾಮಿ ಹೋಟೆಲ್‌ನವರು ಫುಟ್‌ಪಾತ್ ಮೇಲೆಯೇ ಬೋರ್ಡ್ ನಿರ್ಮಿಸಿದ್ದಾರೆ. ಇದೂ ಸಾಲದೆಂಬಂತೆ ಹೋಟೆಲ್ ಜಾಹೀರಾತು ಫುಲಕಗಳನ್ನು ಅಳವಡಿಸಿದ್ದಾರೆ. ಅಲಂಕಾರಕ್ಕೆ ಇಟ್ಟಿರುವ ಹೂ ಕುಂಡಗಳಿಂದಲೂ ಫುಟ್ ಪಾತ್ ಒತ್ತುವರಿಯಾಗಿದೆ. ಉಪಾಹಾರ ದರ್ಶನಿಗಳು, ಅಂಗಡಿಗಳ ಮಾಲೀಕರಿಂದ ಪಾದಚಾರಿ ಮಾರ್ಗ ಒತ್ತುವರಿಯಾಗಿದೆ. ಮೈಸೂರು ಮಹಾನಗರ ಪಾಲಿಕೆಯ ಚುನಾಯಿತ ಜನಪ್ರತಿನಿಧಿಗಳ ಅಧಿಕಾರಾವಧಿ ಮುಗಿದು ೨ ವರ್ಷಗಳು ಕಳೆದಿವೆ. ಪಾಲಿಕೆ ಅಧಿಕಾರಿಗಳು ಸಾರ್ವಜನಿಕರ ಸಮಸ್ಯೆಯನ್ನು ಗಮನಿಸುತ್ತಿಲ್ಲ. ಹೀಗಾಗಿ ಸಮಸ್ಯೆಯನ್ನು ಯಾರ ಬಳಿ ಹೇಳಬೇಕೆಂಬುದೇ ಸಾರ್ವಜನಿಕರಿಗೆ ತಿಳಿಯುತ್ತಿಲ್ಲ .

– ಎ.ಜಿ. ಚಂದ್ರಲಾ, ಮೈಸೂರು

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಕೊಡಗು: ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ

ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…

4 hours ago

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

8 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

8 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

8 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

11 hours ago

ಸುಮ್ಮನಿದ್ದರೂ ಪರಿಣಮಿಸುವ ರಂಗಭೂಮಿಯ ಝೆನ್ ಗುರು – ಜಂಬೆ ಮೇಷ್ಟ್ರು

ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…

11 hours ago