ಕನ್ನಡ ನಾಡಿನ ಹೆಮ್ಮೆಯ ಪುತ್ರಿ, ಬಾನು ಮುಷ್ತಾಕ್ ಅವರ ‘ಹಸೀನಾ ಮತ್ತು ಇತರ ಕತೆಗಳು’ ಕಥಾಸಂಕಲನದ ಇಂಗ್ಲಿಷ್ ಅನುವಾದಿತ ಕೃತಿ ‘ಹಾರ್ಟ್ ಲ್ಯಾಂಪ್’ಗೆ ಪ್ರತಿಷ್ಠಿತ ಅಂತರರಾಷ್ಟ್ರೀಯ ಬೂಕರ್ ಪ್ರಶಸ್ತಿ ದೊರಕಿರುವುದು ೭ ಕೋಟಿ ಕನ್ನಡಿಗರೂ ಹೆಮ್ಮೆಪಡುವಂಥ ಸಾಧನೆಯಾಗಿದೆ. ಕನ್ನಡಕ್ಕೆ ಮೊದಲ ಬಾರಿ ಈ ಪ್ರಶಸ್ತಿ ದೊರೆತಿದೆ ಎನ್ನುವುದು ಅವಿಸ್ಮರಣೀಯ.
ಇತರ ಭಾಷೆಗಳಿಂದ ಇಂಗ್ಲಿಷ್‌ಗೆ ಅನುವಾದಿಸಲಾಗುವ ಅತ್ಯುತ್ತಮ ಕಾದಂಬರಿ ಅಥವಾ ಸಣ್ಣ ಕಥೆಗಳ ಸಂಗ್ರಹಕ್ಕೆ ನೀಡಲಾಗುವ ಈ ಪ್ರಶಸ್ತಿಯನ್ನು ಬಾನು ಮುಷ್ತಾಕ್ ಹಾಗೂ ಈ ಕೃತಿಯ ಅನುವಾದಕರಾದ ದೀಪಾ ಭಸ್ತಿ ಅವರಿಬ್ಬರೂ ಸ್ವೀಕರಿಸಿರುವುದು ಸ್ವಾಗತಾರ್ಹ.
-ಬೆಸಗರಹಳ್ಳಿ ರವಿ ಪ್ರಸಾದ್, ಮೈಸೂರು





